ರಾಜ್ಯದಲ್ಲಿ ಖಾಲಿಯಿರುವ ಹೂದೆಗಳು ವೇಳಾಪಟ್ಟಿ ಪ್ರಕಾರ ನೇಮಕಾತಿ ಪ್ರಕ್ರಿಯೆ ಮಾಡಲಾಗುವದು.!

ಬೆಂಗಳೂರು:25.ಜನೆವರಿ.25:- ರಾಜ್ಯ ಸರ್ಕಾರ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಶಿಸ್ತು ಕ್ರಮ ಕೈಗೊಳ್ಳಲಾಗುವುದು,ಎನ್ಮುಂದೆ ಸರ್ಕಾರಿ ಹುದ್ದೆಗಳ ಭರ್ತಿ ವಿಚಾರದಲ್ಲಿ ಶಿಸ್ತು ರೂಪಿಸಲು ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಪ್ರಕ್ರಿಯೆಗಳನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಅನುವಾಗುವಂತೆ ಅ.10ರಂದು ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಆ ಪ್ರಕಾರ ಪ್ರತಿ ವರ್ಷ ಹುದ್ದೆಗಳನ್ನು ಆಯ್ಕೆ ಪ್ರಾಧಿಕಾರ ಬಿಡುಗಡೆ ಮಾಡುವ ಕುರಿತು, ನೇಮಕ ಪ್ರಾಧಿಕಾರಗಳು ನೇಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅನುವಾಗುವಂತೆ ಅನುಸರಿಸಬೇಕಾದ ವಾರ್ಷಿಕ ವೇಳಾಪಟ್ಟಿ ನಿಗದಿಪಡಿಸಲಾಗಿದೆ.


ವರ್ಷವಾರು ಖಾಲಿ ಹುದ್ದೆ ಭರ್ತಿ ಮಾಡದ ಪರಿಣಾಮ ಖಾಲಿ ಹುದ್ದೆ ಪ್ರಮಾಣ ಬೆಳೆದು ನಿಂತಿದೆ. ಕನಿಷ್ಠ ಅಗತ್ಯ ಹುದ್ದೆಗಳೂ ಖಾಲಿ ಇವೆ. ಅಲ್ಲದೇ ನೇಮಕ ಪ್ರಕ್ರಿಯೆಯಲ್ಲಿ ಕಾಲಮಿತಿಯ ಶಿಸ್ತು ಇಲ್ಲದ ಕಾರಣ ವರ್ಷಾನು ಗಟ್ಟಲೆ ಪ್ರಕ್ರಿಯೆ ನಡೆಯುತ್ತದೆ. ಈ ಕಾರಣಕ್ಕೆ ಪ್ರತಿ ಹಂತವನ್ನು ನಿರ್ದಿಷ್ಟ ಮಾಸದಲ್ಲೇ ಮಾಡಬೇಕೆಂದು ಸರ್ಕಾರ ಸ್ಪಷ್ಟಪಡಿಸಿದೆ.

ವಾರ್ಷಿಕ ವೇಳಾಪಟ್ಟಿ

ಮೇ ಅಂತ್ಯದೊಳಗೆ: ಸಂಬಂಧಪಟ್ಟ ಇಲಾಖೆಗಳು ಖಾಲಿ ಹುದ್ದೆಗಳ ಮಾಹಿತಿಯನ್ನು ಕ್ರೋಡೀಕರಿಸಬೇಕಾಗುತ್ತದೆ.
ಜೂನ್ ಅಂತ್ಯದೊಳಗೆ: ಇಲಾಖೆಗಳು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಿ ಅನುಮೋದನೆ ಪಡೆಯುವುದು.


ಜುಲೈ ಅಂತ್ಯದೊಳಗೆ: ಇಲಾಖೆಗಳು ಆರ್ಥಿಕ ಇಲಾಖೆ ಅನುಮೋದಿಸುವ ಹುದ್ದೆಗಳನ್ನು ನೇಮಕಾತಿಗಾಗಿ ಆಯ್ಕೆ ಪ್ರಾಧಿಕಾರಗಳಿಗೆ ಪ್ರಸ್ತಾವನೆ ಸಲ್ಲಿಸುವುದು.


ಆಗಸ್ಟ್ ಅಂತ್ಯದೊಳಗೆ: ಆಯ್ಕೆ ಪ್ರಾಧಿಕಾರಗಳಾದ ಕೆಪಿಎಸ್ಸಿ, ಕೆಇಎ ಅಥವಾ ಇತರೇ ಪ್ರಾಧಿಕಾರಗಳಿಂದ ವಾರ್ಷಿಕ ಪರೀಕ್ಷಾ ವೇಳಾಪಟ್ಟಿ ಸಿದ್ಧಪಡಿಸಿ ಬಿಡುಗಡೆಗೊಳಿಸುವುದು.


ಸೆಪ್ಟೆಂಬರ್ ಅಂತ್ಯದೊಳಗೆ: ಆಯ್ಕೆ ಪ್ರಾಧಿಕಾರಗಳು ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ನಿಗದಿತ ಪರೀಕ್ಷೆ ನಡೆಸುವುದು.
ನವೆಂಬರ್ ಅಂತ್ಯದೊಳಗೆ: ನೇಮಕ ಪ್ರಾಧಿಕಾರಗಳು ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸುವುದು.

ಕಟ್ಟುನಿಟ್ಟು:

ಈ ವೇಳಾಪಟ್ಟಿಯನ್ನು ಆಯ್ಕೆ ಪ್ರಾಧಿಕಾರಗಳಾದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಕರ್ನಾಟಕ ಲೋಕಸೇವಾ ಆಯೋಗ, ಇತರೆ ಆಯ್ಕೆ ಪ್ರಾಧಿಕಾರಗಳು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸ್ಪಷ್ಟ ಸೂಚನೆ ನೀಡಿದೆ.


ಎಲ್ಲಾ ಇಲಾಖೆಗಳ ಸರ್ಕಾರದ ಅಪರ ಮುಖ್ಯಕಾರ್ಯದರ್ಶಿ, ಸರ್ಕಾರದ ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿಯವರು ಈ ವೇಳಾಪಟ್ಟಿ ಸೂಚನೆಯಂತೆ ಕ್ರಮವಹಿಸಲು ಹಾಗೂ ಅವರ ಆಡಳಿತ ವ್ಯಾಪ್ತಿಗೆ ಒಳಪಡುವ ಎಲ್ಲಾ ಇಲಾಖಾ ಮುಖ್ಯಸ್ಥರು, ನಿಗಮ, ಮಂಡಳಿ, ಸ್ವಾಯತ್ತ ಸಂಸ್ಥೆಗಳಿಗೆ ಸೂಚನೆ ನೀಡುವಂತೆ ಸುತ್ತೋಲೆ ಹೊರಡಿಸಲಾಗಿದೆ.

ರಾಜ್ಯ ಸರ್ಕಾರ ರಜ್ಯಾದ ವಿವಿಧ ಇಲಾಖೆ ಅಧಿಕಾರಿಗಳಜೋತೆ ಸಭೆ ಮಾಡಲಾಯಿತು ಆ ಸಭೆಯಲ್ಲಿ 

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

7 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

10 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

10 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

10 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

10 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

10 hours ago