ಇನ್ಮುಂದೆ 21 ದಿನದೊಳಗೆ ನಿಮ್ಮ ದೂರು/ಮನವಿ ಅರ್ಜಿ ವಿಲೇವಾರಿ. ರಾಜ್ಯ ಸರಕಾರ ಆದೇಶ.

ಬೆಂಗಳೂರು.05.ಜೂನ್.25:- ಕರ್ನಾಟಕ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು ಹಾಗೂ ಅಧೀನ ಸಂಸ್ಥೆಗಳ ಸೇವೆ ಮತ್ತು ಯೋಜನೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರು / ಮನವಿಗಳನ್ನು ತ್ವರಿತ/ಗುಣಾತ್ಮಕ ವಿಲೇವಾರಿಗೆ ಕಾಲಮಿತಿಯನ್ನು ನಿಗಧಿಪಡಿಸಿದೆ.

ಸಾರ್ವಜನಿಕ ಕುಂದುಕೊರತೆಗಳ ನಿರ್ವಹಣೆಗೆ ಸಂಬಂಧಿಸಿದಂತೆ, ಏಕೀಕೃತ ಸಾರ್ವಜನಿಕ ದೂರು ನಿವಾರಣಾ ತಂತ್ರಾಂಶ (Integrated Public Grievances Redressal System) ಅನುಷ್ಠಾನಗೊಳಿಸಲಾಗಿದ್ದು, ಸದರಿ ಆದೇಶದಲ್ಲಿ ಸಾರ್ವಜನಿಕ ಕುಂದುಕೊರತೆಗಳಿಗೆ ಸಂಬಂಧಿಸಿದಂತೆ ಸ್ವೀಕೃತವಾಗುವ ಮನವಿಗಳನ್ನು ವಿಲೇವಾರಿಗೊಳಿಸಲು ಮೂರು ಹಂತದಲ್ಲಿ ಅನುಷ್ಠಾನಾಧಿಕಾರಿಗಳನ್ನು ಈ.

ಕೆಳಕಂಡಂತೆ ನೇಮಿಸಲಾಗಿದೆ. ಸದರಿ ಅನುಷ್ಠಾನಾಧಿಕಾರಿಗಳು ಸರ್ಕಾರವು ನಿಗಧಿಪಡಿಸಿರುವ ಅವಧಿಯೊಳಗೆ ದೂರು/ಮನವಿಗಳನ್ನು ವಿಲೇವಾರಿಗೊಳಿಸಲು ಆದೇಶಿಸಲಾಗಿದೆ.

ಕೇಂದ್ರ ಸರ್ಕಾರದ ಆದೇಶದಲ್ಲಿ, ಸಾರ್ವಜನಿಕ ಕುಂದುಕೊರತೆ/ದೂರುಗಳನ್ನು ವಿಲೇವಾರಿಗೊಳಿಸಲು 30 ದಿನಗಳ ಕಾಲಮಿತಿಯನ್ನು ನಿಗಧಿಗೊಳಿಸಿದ್ದು, ಕೇಂದ್ರ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸರ್ಕಾರವು ಸಾರ್ವಜನಿಕ ದೂರುಗಳ ನಿರ್ವಹಣೆಗೆ ಮತ್ತು ವಿಲೇವಾರಿಗೆ ಸಂಬಂಧಿಸಿದಂತೆ, 30 ದಿನಗಳ ಕಾಲಮಿತಿಯನ್ನು ಪಾಲನೆ ಮಾಡಲಾಗುತ್ತಿದೆ. ಮೇಲೆ ಓದಲಾದ ಕ್ರಮಾಂಕ (3)ರಲ್ಲಿನ ಕೇಂದ್ರ ಸರ್ಕಾರದ ಆದೇಶದಲ್ಲಿ CPGRAMSನಲ್ಲಿ ಸ್ವೀಕೃತವಾಗುವ ಸಾರ್ವಜನಿಕ ದೂರು/ಕುಂದುಕೊರತೆಗಳು ವಿಲೇವಾರಿಗೆ ಸಂಬಂಧಿಸಿದಂತೆ, 21 ದಿನಗಳ ಕಾಲಮಿತಿಯನ್ನು ನಿಗಧಿಗೊಳಿಸಿದೆ.

ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ ರಾಜ್ಯದ ವಿವಿಧ ಇಲಾಖೆಗಳು, ಅಧೀನ ಇಲಾಖೆಗಳು, ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಮಂಡಳಿಗಳು, ಪ್ರಾಧಿಕಾರಗಳು, ಅನುದಾನಿತ ಸಂಸ್ಥೆಗಳು, ವಿಶ್ವವಿದ್ಯಾಲಯಗಳು ಹಾಗೂ ಸಾರ್ವಜನಿಕ ಉದ್ದಿಮೆಗಳು ಸೇರಿದಂತೆ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ ಹಾಗೂ ಅರೆಸರ್ಕಾರಿ ಸಂಸ್ಥೆಗಳಲ್ಲಿನ ಸೇವೆಗಳು ಹಾಗೂ ಯೋಜನೆಗಳಿಗೆ ಸಂಬಂಧಿಸಿದಂತೆ IPGRS ಹಾಗೂ CPGRAMSನಲ್ಲಿ ಸ್ವೀಕೃತವಾಗುವ ಸಾರ್ವಜನಿಕ ಕುಂದುಕೊರತೆಗಳನ್ನು ಹಾಗೂ ಮನವಿಗಳನ್ನು ತ್ವರಿತವಾಗಿ, ಗುಣಾತ್ಮಕವಾಗಿ ಹಾಗೂ ನಾಗರೀಕರಿಗೆ ತೃಪ್ತಿಕರವಾಗಿ ಆಯಾ ವಿಷಯಗಳ ಬಗೆಗಿನ ಕಾಯ್ದೆ, ನಿಯಮ ಹಾಗೂ ಸರ್ಕಾರಿ ಆದೇಶೆಗಳನುಸಾರ ಪರಿಣಾಮಕಾರಿಯಾಗಿ ವಿಲೇಗೊಳಿಸಲು ಈ ಕೆಳಕಂಡಂತೆ 21 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಿ ಆದೇಶಿಸಿದೆ.

prajaprabhat

Recent Posts

ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನ.

Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…

2 hours ago

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

12 hours ago

ಮಕ್ಕಳ ಮಾಹಿತಿ ಗೌಪ್ಯವಾಗಿಡಲು ಸೂಚನೆ

ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…

17 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

17 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

21 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

1 day ago