09/06/2025 7:27 PM

Translate Language

Home » ಲೈವ್ ನ್ಯೂಸ್ » ಇನ್ವೆಸ್ಟ್ ಕರ್ನಾಟಕ–2025ರ ಸಮಾವೇಶ ವತಿಯಿಂದ 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಡೀಟೇಲ್ಸ್ ಓದಿ.!

ಇನ್ವೆಸ್ಟ್ ಕರ್ನಾಟಕ–2025ರ ಸಮಾವೇಶ ವತಿಯಿಂದ 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಡೀಟೇಲ್ಸ್ ಓದಿ.!

Facebook
X
WhatsApp
Telegram

ಬೆಂಗಳೂರು.08.ಮಾರ್ಚ.25:- ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶದಲ್ಲಿ ಒಡಂಬಡಿಕೆ ಮಾಡಿಕೊಂಡಿರುವ ಹಾಗೂ ಅನುಮೋದನೆ ಪಡೆದಿರುವ ಯೋಜನೆಗಳಿಂದ ಅಂದಾಜು 6 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಎಂ.ಬಿ. ಪಾಟೀಲ್ ಅವರು ತಿಳಿಸಿದರು.

ವಿಧಾನ ಮಂಡಲದ ಬಜೆಟ್‌ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇನ್ವೆಸ್ಟ್ ಕರ್ನಾಟಕ – 2025ರ ಸಮಾವೇಶವನ್ನು ರೂ. 90 ಕೋಟಿಗಳ ವೆಚ್ಚದಲ್ಲಿ ಆಯೋಜಿಸಲು ಸರ್ಕಾರವು ಅನುಮೋದನೆ ನೀಡಿರುತ್ತದೆ. ಇದರಲ್ಲಿ ಇಲ್ಲಿಯವರೆಗೆ ರೂ.75 ಕೋಟಿ ಅನುದಾನವನ್ನು ಬಿಡುಗಡೆ ಮಾಡಲಾಗಿರುತ್ತದೆ. ಸಮಾವೇಶವು ಇತ್ತೀಚೆಗೆ ಫೆಬ್ರವರಿ 14ರಂದು ಮುಕ್ತಾಯವಾಗಿದ್ದು, ಸಮಾವೇಶಕ್ಕಾಗಿ ತಗುಲಿದ ವಾಸ್ತವಿಕ ವೆಚ್ಚದ ವಿವರಗಳನ್ನು ಕ್ರೋಢೀಕರಿಸಲಾಗುತ್ತಿದ್ದು, ಅಂತಿಮ ಹಂತದಲ್ಲಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಒಟ್ಟು 3,250 ಉದ್ದಿಮೆದಾರರು ಭಾಗವಹಿಸಿದ್ದು, ವಿವಿಧ ರಾಜ್ಯಗಳಿಂದ 266, ವಿದೇಶಗಳಿಂದ 72, ಕರ್ನಾಟಕ ರಾಜ್ಯದಿಂದ 2,892 ಉದ್ದಿಮೆದಾರರು ಭಾಗವಹಿಸಿದ್ದರು. ಒಟ್ಟು 98 ಕಂಪನಿಗಳೊಂದಿಗೆ ಒಡಂಬಡಿಕೆಗಳಾಗಿವೆ. ಅವುಗಳ ಹೂಡಿಕೆಯು ರೂ.6,23,970 ಕೋಟಿಯಾಗಲಿದೆ. ಅಲ್ಲದೆ, ರೂ.4,03,533 ಕೋಟಿ ಬಂಡವಾಳ ಹೂಡಿಕೆ ಮಾಡಲು 1,101 ಕಂಪನಿಗಳು ಸಂಬಂಧಿಸಿದ ಸಮಿತಿಗಳಿಂದ ಅನುಮೋದನೆ ಪಡೆಯಲಾಗಿದೆ ಎಂದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!