ಇವಿಎಂ ಬದಲು ಮತಪತ್ರಗಳ ಮೂಲಕ ಚುನಾವಣೆ ನಡೆಯಲಿ: ಮಾಯಾವತಿ

ಉತ್ತರ ಪ್ರದೇಶ): ELECTRONIC VOTING MACHINE ವಿದ್ಯುನ್ಮಾನ ಮತಯಂತ್ರಗಳ ಇವಿಎಂ EVM ಬದಲು ಮತ ಪತ್ರ ಬ್ಯಾಲೆಟ್‌ ಪೇಪರ್‌ ಮೂಲಕ ಚುನಾವಣೆ ನಡೆದರೆ ಬಿಎಸ್‌ಪಿಯು ಕಳೆದುಹೋದ ತನ್ನ ರಾಜಕೀಯ ನೆಲೆಯನ್ನು ಮತ್ತೆ ಪಡೆಯಲಿದೆ’ ಎಂದು ಬಹುಜನ ಸಮಾಜ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ  ಕು. ಮಾಯಾವತಿ ಹೇಳಿದರು.

ಇವಿಎಂ ಬದಲು ಬ್ಯಾಲೆಟ್ ಪೇಪರ್‌ಗಳ ಮೂಲಕ ಚುನಾವಣೆ ನಡೆಸಿದರೆ ತಮ್ಮ ಪಕ್ಷವು ಕಳೆದುಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯಲಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಎಸ್‌ಪಿ ಅಭ್ಯರ್ಥಿಗಳು ಗೆಲ್ಲದಂತೆ ತಡೆಯಲು ಇವಿಎಂಗಳನ್ನು ತಿರುಚಲಾಗುತ್ತಿದೆ ಎಂದು ಆರೋಪಿಸಿದರು.

‘ಚುನಾವಣೆಗಳು ದೊಡ್ಡದಾಗಿರಲಿ, ಚಿಕ್ಕದಾಗಿರಲಿ ಹಿಂದಿನಂತೆ ಬ್ಯಾಲೆಟ್‌ ಪೇಪರ್‌ಗಳ ಮೂಲಕವೇ ಮತದಾನ ನಡೆಸುವಂತೆ ಬಿಎಸ್‌ಪಿ ಸೇರಿದಂತೆ ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸುತ್ತಿವೆ’ ಎಂದು ಹೇಳಿದರು.

‘ಇವಿಎಂಗಳನ್ನು ಬಳಸಿಕೊಂಡು ಬಿಎಸ್‌ಪಿ ಅಭ್ಯರ್ಥಿಗಳನ್ನು ಸೋಲಿಸಲಾಗುತ್ತಿದೆ. ಆ ಮೂಲಕ ಬಿಎಸ್‌ಪಿ ಪಕ್ಷದ ಮೇಲೆ ದಲಿತ ಮತ್ತು ವಂಚಿತ ವರ್ಗದ ಮತದಾರರಲ್ಲಿ ನಂಬಿಕೆ ಮುರಿಯುವ ಕೆಲಸ ನಡೆಯುತ್ತಿದೆ’ ಎಂದರು.

‘ಈಗಿನ ಸರ್ಕಾರ ಈ ಕೆಲಸ ಮಾಡದಿದ್ದರೂ, ಮುಂದೆ ಅಧಿಕಾರಕ್ಕೆ ಬರುವ ಸರ್ಕಾರ(ಬಿಜೆಪಿಯೇತರ) ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲಿದೆ ಎಂದು ಭಾವಿಸುತ್ತೇನೆ’ ಎಂದು ಹೇಳಿದರು.

‘ಚುನಾವಣಾ ಪ್ರಕ್ರಿಯೆಯು ಮತ್ತೆ ಬ್ಯಾಲೆಟ್ ಪೇಪರ್‌ಗಳಿಗೆ ಬದಲಾದರೆ ಬಿಎಸ್‌ಪಿ ತನ್ನ ಕಳೆದುಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯುತ್ತದೆ ಮತ್ತು ಅದರ ಒಳ್ಳೆಯ ದಿನಗಳು ಮರಳುತ್ತವೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

6 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

11 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

16 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

22 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

22 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

22 hours ago