ಉತ್ತರಪ್ರದೇಶದ ಪ್ರಯಾಗ್ರಾಜನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಗಂಗೆಸ್ನಾನ ಮಾಡುವುದರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿಯ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಇಂತಹ ಹೇಳಿಕೆ ನೀಡುವವರನ್ನು ನೇಣಿಗೆ ಹಾಕಬೇಕು ಎಂದು ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಕ್ರೋಶ ಹೊರ ಹಾಕಿದರು.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗಂಗೆಯಲ್ಲಿ ಪುಣ್ಯ ಸ್ನಾನ ಮಾಡೋದು ಸಂಸ್ಕೃತಿ. ಗಂಗೆಯಲ್ಲಿ ಪುಣ್ಯ ಸ್ನಾನ ಮಾಡಿ ಅಂತ ಪೋಸ್ಟರ್ ಹಾಕಿಲ್ಲ. ಕೋಟ್ಯಂತರ ಜನರ ನಂಬಿಕೆ ನೋಯಿಸುವ ಕೆಲಸ ಆಗಿದೆ. ಈ ರೀತಿ ಯಾರೇ ಹೇಳಿಕೆ ನೀಡಿದರು ನೇಣಿಗೆ ಹಾಕಬೇಕು. ಇದನ್ನು ನಿಂದಿಸುವ ಗೌರಿಸುವ ಕೆಲಸ ಮಾಡಬಾರದು ಮಲ್ಲಿಕಾರ್ಜುನ ಖರ್ಗೆ ಮನೆಯಲ್ಲಿ ನಿತ್ಯ ಪೂಜೆ ಮಾಡುತ್ತಾರೆ. ಹೊರಗೆ ಬಂದು ಯಾರನ್ನು ಮುಚ್ಚಿಸಲು ಹೀಗೆ ಟೀಕಿಸುತ್ತಿದ್ದೀರಾ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಎಐಸಿಸಿ ಅಧ್ಯಕ್ಷರು ಹೇಳಿದ್ದೇನು?
ಕೇಂದ್ರ ಗೃಹ ಸಚಿವ ಅಮಿತ್ ಷಾ ಸೇರಿದಂತೆ ಬಿಜೆಪಿ ನಾಯಕರು ಮಹಾಕುಂಭಮೇಳಕ್ಕೆ ಭೇಟಿ ನೀಡಿ ಪವಿತ್ರಸ್ನಾನ ಮಾಡುತ್ತಿರುವ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದು, ಗಂಗಾಸ್ನಾನ ಮಾಡುವುದರಿಂದ ಬಡತನ ನಿರ್ಮೂಲನೆಯಾಗುವುದಿಲ್ಲ.
ಬಿಜೆಪಿ ನಾಯಕರು ಕ್ಯಾಮೆರಾಗಳಿಗಾಗಿ ಗಂಗಾ ನದಿಯಲ್ಲಿ ಸ್ನಾನ ಮಾಡಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ಬಿಜೆಪಿ ಹಾಗೂ ಆರ್ಎಸ್ಎಸ್ ನಾಯಕರು ದ್ರೋಹಿಗಳು. ಧರ್ಮದ ಹೆಸರಿನಲ್ಲಿ ಬಡವರ ಶೋಷಣೆ ಮಾಡುತ್ತಿದ್ದಾರೆ. ಈ ರೀತಿಯ ಶೋಷಣೆಯನ್ನು ಕಾಂಗ್ರೆಸ್ ಎಂದಿಗೂ ಸಹಿಸುವುದಿಲ್ಲ ಎಂದು ಹೇಳಿದ್ದರು. ಈ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವಿನ ಕೆಸರೆರಚಾಟಕ್ಕೆ ಕಾರಣವಾಗಿತ್ತು.
Source: kannada news kwno
ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…
ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…
ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…
ಬೀದರ.02.ಆಗಸ್ಟ್.25:- ಬೀದರ್ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…
ಹೊಸ ದೆಹಲಿ.02.ಆಗಸ್ಟ್.25:- 71ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಹಿಂದಿ ಚಿತ್ರ 12ನೇ ಫೇಲ್ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ಗೆದ್ದಿದೆ. ಇಂದು…