ಈ ವರ್ಷ ಕನ್ನಡ, ಉರ್ದು ಮಾಧ್ಯಮದ ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನಶಾಹೀನ್‌ನಿಂದ ಕ.ಕ. ವಿದ್ಯಾರ್ಥಿ ವೇತನ ಯೋಜನೆ



ಬೀದರ್.28.ಎಪ್ರಿಲ.25:- ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹವು ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ‘ಶಾಹೀನ್ ಕಲ್ಯಾಣ ಕರ್ನಾಟಕ ವಿದ್ಯಾರ್ಥಿ ವೇತನ’ ಯೋಜನೆ ಜಾರಿಗೊಳಿಸಲು ನಿರ್ಧರಿಸಿದೆ.


ಈ ವರ್ಷ ಸಮೂಹದ ಕಲ್ಯಾಣ ಕರ್ನಾಟಕ ಭಾಗದ ಒಂಬತ್ತು ಪದವಿಪೂರ್ವ ವಿಜ್ಞಾನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಒಟ್ಟು ೨೫೦ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಕೊಡಲಾಗುವುದು ಎಂದು ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ತಿಳಿಸಿದ್ದಾರೆ.
ಬೀದರ್‌ನ ಮುಖ್ಯ ಶಾಖೆಯಲ್ಲಿ ೭೫, ಕಲಬುರಗಿ ಶಾಖೆಯಲ್ಲಿ ೩೫, ರಾಯಚೂರು, ಬಳ್ಳಾರಿ, ಯಾದಗಿರಿ, ಔರಾದ್, ಬಸವಕಲ್ಯಾಣ, ಚಿಟಗುಪ್ಪ ಹಾಗೂ ಹುಮನಾಬಾದ್ ಶಾಖೆಗಳಲ್ಲಿ ತಲಾ ೨೦ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಲಾಗುವುದು ಎಂದು ಹೇಳಿದ್ದಾರೆ.


ಎಸ್ಸೆಸ್ಸೆಲ್ಸಿಯಲ್ಲಿ ಶೇ ೯೦ಕ್ಕೂ ಹೆಚ್ಚು ಅಂಕ ಗಳಿಸಿದ ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಸಮೂಹದ ಆಯಾ ಶಾಖೆಗಳಲ್ಲಿ ಅಥವಾ ಆನ್‌ಲೈನ್‌ನಲ್ಲಿ ಮೇ ೧೫ ರ ಒಳಗೆ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.


ಮೇ ೧೮ ರಂದು ಆಯಾ ಶಾಖೆಗಳಲ್ಲಿ ಸಂದರ್ಶನ ನಡೆಯಲಿದೆ. ಅರ್ಹತೆ ಆಧಾರದಲ್ಲಿ ಆಯ್ಕೆ ಜರುಗಲಿದೆ. ಗ್ರಾಮೀಣ ಭಾಗದ, ಅಂಗವಿಕಲ ಹಾಗೂ ಅನಾಥ ಮಕ್ಕಳಿಗೆ ವಿಶೇಷ ಆದ್ಯತೆ ಕೊಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ರೂಪದಲ್ಲಿ ಕಾಲೇಜು ಶುಲ್ಕದಲ್ಲಿ ಶೇ ೭೫ ರಷ್ಟು ರಿಯಾಯಿತಿ ಸಿಗಲಿದೆ ಎಂದು ಹೇಳಿದ್ದಾರೆ.


ಶಾಹೀನ್ ಕಾಲೇಜಿನ ೨೦೨೪-೨೫ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ತೇರ್ಗಡೆ ಹಾಗೂ ಸಾಧನೆ ಪ್ರಮಾಣ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳಿಗಿಂತ ಶೇ ೧೩ ರಷ್ಟು ಹೆಚ್ಚಿದೆ. ಉರ್ದು ಮಾಧ್ಯಮ ವಿದ್ಯಾರ್ಥಿಗಳು ಮೂರನೇ ಸ್ಥಾನದಲ್ಲಿದ್ದಾರೆ. ಇತರ ವಿದ್ಯಾರ್ಥಿಗಳಿಗಿಂತ ಹಾಸ್ಟೆಲ್ ವಿದ್ಯಾರ್ಥಿಗಳ ಸಾಧನೆ ಹೆಚ್ಚಿದೆ ಎಂದು ತಿಳಿಸಿದ್ದಾರೆ.


ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಕನ್ನಡ ಹಾಗೂ ಉರ್ದು ಮಾಧ್ಯಮದ ವಿದ್ಯಾರ್ಥಿಗಳನ್ನು ಸಾಧನೆಗೆ ಪ್ರೇರೇಪಿಸಲು ವಿದ್ಯಾರ್ಥಿ ವೇತನ ಯೋಜನೆ ರೂಪಿಸಲಾಗಿದೆ ಎಂದು ಹೇಳಿದ್ದಾರೆ.


ಗ್ರಾಮೀಣ ಭಾಗದಲ್ಲಿ ಇನ್ನಷ್ಟು ಶೈಕ್ಷಣಿಕ ಜಾಗೃತಿ ಮೂಡಬೇಕಿದೆ. ಔರಾದ್ ತಾಲ್ಲೂಕಿನ ತೋರಣಾ ಗ್ರಾಮದ ಕೆಲ ಮಕ್ಕಳು ಸರ್ಕಾರಿ ವೈದ್ಯಕೀಯ ಸೀಟು ಪಡೆದಿದ್ದರಿಂದ ಆ ಊರಲ್ಲಿ ಶೈಕ್ಷಣಿಕ ಜಾಗೃತಿ ಮೂಡಿದ್ದು, ಇದೀಗ ೫೦ಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿವಿಧ ವೃತ್ತಿಪರ ಕೋರ್ಸ್ಗಳಲ್ಲಿ ಪ್ರವೇಶ ಪಡೆದಿದ್ದಾರೆ ಎಂದು ತಿಳಿಸಿದ್ದಾರೆ.


ಸಾವಿರಾರು ವಿದ್ಯಾರ್ಥಿಗಳ ವೈದ್ಯಕೀಯ ಕೋರ್ಸ್ ಕನಸು ನನಸಾಗಿಸಿದ ಹೆಮ್ಮೆ ಶಾಹೀನ್‌ಗೆ ಇದೆ. ಶಾಹೀನ್‌ನಲ್ಲಿ ಓದಿದ ೧೦೦ ಕುಟುಂಬಗಳ ತಲಾ ಇಬ್ಬರು-ಮೂವರು ಮಕ್ಕಳು ವೈದ್ಯರಾದ ಉದಾಹರಣೆಗಳು ಇವೆ.

ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳು ಶಿಷ್ಯವೇತನದ ಲಾಭ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.


ಶಿಷ್ಯವೇತನದ ಕುರಿತು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ ೯೯೬೪೭೬೩೦೧೮ (ಬೀದರ್ ಮುಖ್ಯ ಕಚೇರಿ), ೭೬೬೬೦೪೮೧೭೨ (ಕಲಬುರಗಿ ಶಾಖೆ), ೯೯೧೬೧೪೯೪೨೮ (ಔರಾದ್), ೯೮೪೫೦೫೮೦೧೮ (ಬಸವಕಲ್ಯಾಣ), ೮೯೭೧೨೨೨೭೮೪ (ಚಿಟಗುಪ್ಪ), ೭೦೨೬೯೫೧೦೫೬ (ಹುಮನಾಬಾದ್), ೯೮೮೦೫೩೯೯೯೯ (ರಾಯಚೂರು), ೯೯೮೬೬೭೦೨೮೬ (ಯಾದಗಿರಿ) ಅಥವಾ ೮೫೫೩೧೬೫೫೬೨ (ಬಳ್ಳಾರಿ ಶಾಖೆ)ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

prajaprabhat

Recent Posts

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

23 minutes ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

2 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

12 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

13 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

13 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

14 hours ago