04.ಜೆ.25. ನ್ಯೂ ದೆಹಲಿ:-ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್, ಈ ವರ್ಷ ಗ್ರಾಮಗಳನ್ನು ಬಡತನ ಮುಕ್ತಗೊಳಿಸಲು ತಮ್ಮ ಸಚಿವಾಲಯ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ನಿನ್ನೆ ನವದೆಹಲಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಗ್ರಾಮೀಣಾಭಿವೃದ್ಧಿ ಸಚಿವರೊಂದಿಗೆ ವಿವಿಧ ಸಚಿವಾಲಯದ ಯೋಜನೆಗಳ ಪರಿಶೀಲನಾ ಸಭೆಯಲ್ಲಿ ಶ್ರೀ ಚೌಹಾಣ್ ಅವರು ಹೇಳಿದರು. ರಾಷ್ಟ್ರ ನಿರ್ಮಾಣದಲ್ಲಿ ಗ್ರಾಮಗಳ ಪಾತ್ರವನ್ನು ಸಚಿವರು ಎತ್ತಿ ತೋರಿಸಿದರು, ಇದು ಭಾರತವನ್ನು ವಿಶ್ವಕ್ಕೆ ಆದರ್ಶ ರಾಷ್ಟ್ರವನ್ನಾಗಿ ಮಾಡುತ್ತದೆ.
ಗ್ರಾಮೀಣಾಭಿವೃದ್ಧಿ ಸಚಿವಾಲಯದ ಯೋಜನೆಗಳು ಸಾಮಾನ್ಯ ಜನರಿಗೆ ಭರವಸೆ ಮತ್ತು ಅವರ ಕನಸುಗಳನ್ನು ನನಸಾಗಿಸುವ ಸಾಧನವಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು. ಈ ಯೋಜನೆಗಳು ಗ್ರಾಮಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಹೇಳಿದರು.
ಕಳೆದ ವರ್ಷ ಜೂನ್‌ನಿಂದ ಎಂಜಿಎನ್‌ಆರ್‌ಇಜಿಎಯಲ್ಲಿ 136 ಕೋಟಿ ಮಾನವ ದಿನಗಳನ್ನು ರಚಿಸಲಾಗಿದೆ, ಇದರಿಂದಾಗಿ ಗ್ರಾಮೀಣ ಪ್ರದೇಶಗಳಲ್ಲಿ ಸುಮಾರು 54 ಲಕ್ಷದ 83 ಸಾವಿರ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ ಎಂದು ಶ್ರೀ ಚೌಹಾಣ್ ಮಾಹಿತಿ ನೀಡಿದರು. ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳಿಗೆ ಒಟ್ಟು 50,467 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.
ಕಳೆದ ಹತ್ತು ವರ್ಷಗಳಲ್ಲಿ ವಸತಿ ಯೋಜನೆಯಡಿ ಗ್ರಾಮೀಣ ಪ್ರದೇಶದಲ್ಲಿ 3.45 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ ಎಂದು ಸಚಿವರು ತಿಳಿಸಿದರು. ಅಲ್ಲದೇ ಹೊಸ ಕುಟುಂಬಗಳನ್ನು ಗುರುತಿಸಿ ಯೋಜನೆಗೆ ಜೋಡಿಸಲು ಸರ್ವೆ ಕಾರ್ಯ ಆರಂಭವಾಗಿದೆ ಎಂದರು.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…