ಉಚಿತ ತರಬೇತಿ ಮತ್ತು ಊಟ ವಸತಿ ಸಹಿತ.ನಾನಾ ತರಬೇತಿಗಳಿಗೆ ಅರ್ಜಿ ಆಹ್ವಾನ ಗ್ರಾಮೀಣ ಕೌಶಲ ಎಂದರೆ ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಯುವಕರಿಗೆ ಉದ್ಯೋಗ ಮತ್ತು ಜೀವನೋಪಾಯಕ್ಕಾಗಿ ಕೌಶಲ್ಯ ತರಬೇತಿ ನೀಡುವುದಾಗಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿoದ ಜಿಲ್ಲೆಯ ಗ್ರಾಮೀಣ ಭಾಗದ ಅರ್ಹ ಅಭ್ಯರ್ಥಿಗಳಿಗೆ ತರಬೇತಿಗಳನ್ನು ನೀಡಲಾಗುತ್ತಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.
ಸಂಸ್ಥೆಯಲ್ಲಿ ತಲಾ 30 ದಿನಗಳ ಕಂಪ್ಯೂಟರೈಸ್ಡ್ ಅಕೌಂಟಿ0ಗ್ ತರಬೇತಿ, ಮಹಿಳಾ ಹೊಲಿಗೆ ತರಬೇತಿ ಮತ್ತು ಬ್ಯೂಟಿ ಪಾರ್ಲರ್ ತರಬೇತಿಗಳನ್ನು ಊಟ ಮತ್ತು ವಸತಿಯೊಂದಿಗೆ ಉಚಿತವಾಗಿ ನೀಡಲಾಗುತ್ತದೆ.
ಅರ್ಜಿದಾರರಿಗೆ ಜೂನ್ 19 ರಂದು ಸಂದರ್ಶನ ನಡೆಯಲಿದ್ದು, ಜೂನ್ 21 ರಿಂದ ತರಬೇತಿ ಪ್ರಾರಂಭಿಸಲಾಗುವುದು.
ಅರ್ಜಿ ಸಲ್ಲಿಸಲು ಅರ್ಜಿದಾರರು 18 ರಿಂದ 45 ವರ್ಷದೊಳಗಿನವರಾಗಿರಬೇಕು. ಕನಿಷ್ಠ 8ನೇ ತರಗತಿ ಪಾಸ್ ಆಗಿರಬೇಕು. ಜಿಲ್ಲೆಯ ಗ್ರಾಮೀಣ ಭಾಗದವರಾಗಿದ್ದು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
1.ಆಸಕ್ತರು ಅರ್ಜಿಯೊಂದಿಗೆ
2.ಆಧಾರ್ ಕಾರ್ಡ್,
3.ರೇಷನ್ ಕಾರ್ಡ್,
4.ಮಾರ್ಕ್ಸ್ ಕಾರ್ಡ್ಗಳ ಜರಾಕ್ಸ್ ಪ್ರತಿಗಳು
5.ಪಾಸ್‌ಪೋರ್ಟ್ ಅಳತೆಯ 3 ಭಾವಚಿತ್ರಗಳು
ಇವರಿಗೆ. ನಿರ್ದೇಶಕರು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಉದ್ಯೋಗ ತರಬೇತಿ ಸಂಸ್ಥೆ, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಇಲ್ಲಿಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ : 08539-231038, 9483618178, 9481085217, 7259073827, 9538096796 ಗೆ ಸಂಪರ್ಕಿಸಬಹುದು ಎಂದು ಆರ್‌ಸೆಟಿ ನಿರ್ದೇಶಕರು ತಿಳಿಸಿದ್ದಾರೆ.
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ರಾಯಚೂರು.05.ಆಗಸ್ಟ್ .25: ಜಿಲ್ಲೆಯಲ್ಲಿ 18 ವರ್ಷದೊಳಗಿನ ಮಕ್ಕಳ ಪ್ರಕರಣಗಳಲ್ಲಿ ಸುದ್ದಿಯನ್ನು ಬಿತ್ತರಿಸುವಾಗ ಮಕ್ಕಳ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಜಿಲ್ಲಾ ಮಕ್ಕಳ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…