ಉಚಿತ ಪ್ರವೇಶ ಪ್ರಥಮ ವರ್ಷ ತರಗತಿಗೆ: ಮಾತ್ರ ಬಾಲಕಿಯರಿಗೆ.

ಮಾನ್ವಿ.05.ಜೂನ್.25:- ಪಟ್ಟಣದ ಬಾಲಕರ ಸರ್ಕಾರಿ ಪಿಯು ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಲಕಿಯರಿಗೆ ಪ್ರಥಮ ವರ್ಷದ ತರಗತಿಗೆ ಉಚಿತ ಪ್ರವೇಶದ ಅವಕಾಶ ಸರ್ಕಾರ ಸುಸಜ್ಜಿತ ಕಟ್ಟಡ, ಸ್ಮಾರ್ಟ್ ಬೋರ್ಡ್ ಮೂಲಕ ಡಿಜಿಟಲ್ ಬೋಧನಾ ವ್ಯವಸ್ಥೆ, ಉಚಿತ ಸಿಇಟಿ ತರಬೇತಿ ಸೇರಿ ಅನೇಕ ಸೌಲಭ್ಯಳನ್ನು.

ಸುಮಾರು ಐವತ್ತು ವರ್ಷಗಳ ಇತಿಹಾಸ ಹೊಂದಿರುವ ಪಟ್ಟಣದ ಸರ್ಕಾರಿ ಪಿಯು ಕಾಲೇಜು ಎರಡು ದಶಕದ ಹಿಂದೆ ಪದವಿಪೂರ್ವ ಶಿಕ್ಷಣ ಇಲಾಖೆಯಿಂದ ಬಾಲಕರ ಸರ್ಕಾರಿ ಪಿಯು ಕಾಲೇಜು ಆಗಿ ಪರಿವರ್ತನೆಯಾಗಿತ್ತು.

ಪಿಯುಸಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗ ಹೊಂದಿರುವ ಈ ಕಾಲೇಜಿನಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಕೆಲ ವರ್ಷಗಳಿಂದ ನಿರಂತರವಾಗಿ ಕುಸಿದಿದೆ.

ಸರ್ಕಾರ ಸುಸಜ್ಜಿತ ಕಟ್ಟಡ, ಸ್ಮಾರ್ಟ್ ಬೋರ್ಡ್ ಮೂಲಕ ಡಿಜಿಟಲ್ ಬೋಧನಾ ವ್ಯವಸ್ಥೆ, ಉಚಿತ ಸಿಇಟಿ ತರಬೇತಿ ಸೇರಿ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪ್ರವೇಶ ಪಡೆದಿಲ್ಲ. ಕಳೆದ ಶೈಕ್ಷಣಿಕ ವರ್ಷದಲ್ಲಿ ಕಲಾ, ವಾಣಿಜ್ಯ ಮತ್ತು ವಿಜ್ಞಾನ ವಿಭಾಗಗಳಿಗೆ ಪ್ರಥಮ ಪಿಯುಸಿಗೆ ಕೇವಲ 60 ಹಾಗೂ ದ್ವಿತೀಯ ಪಿಯುಸಿಗೆ 93 ವಿದ್ಯಾರ್ಥಿಗಳು ಮಾತ್ರ ಪ್ರವೇಶ ಪಡೆದಿದ್ದರು. ಕಾರಣ ಪ್ರಾಂಶುಪಾಲ ಕುಂಟೆಪ್ಪ ಗೌರಿಪುರ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಪತ್ರ ಬರೆದು 2025-26ನೇ ಶೈಕ್ಷಣಿಕ ಸಾಲಿನಿಂದ ಬಾಲಕಿಯರಿಗೂ ಈ ಕಾಲೇಜಿನಲ್ಲಿ ಪ್ರವೇಶ ನೀಡಲು ಅನುಮತಿ ಪಡೆದಿದ್ದಾರೆ.

ಬಾಲಕಿಯರಿಗೆ ಪ್ರಥಮ ಪಿಯುಸಿ ಪ್ರವೇಶ ಶುಲ್ಕ ₹225, ದ್ವಿತೀಯ ಪಿಯುಸಿ ಪ್ರವೇಶ ಶುಲ್ಕ ₹250 ಇದೆ.

ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ತರಗತಿಗಳಿಗೆ ಹೊಸದಾಗಿ ಪ್ರವೇಶ ಪಡೆಯುವ ಎಲ್ಲ ಬಾಲಕಿಯರ ಪ್ರವೇಶ ಶುಲ್ಕವನ್ನು ಪ್ರಾಂಶುಪಾಲ ಹಾಗೂ ಉಪನ್ಯಾಸಕರು ತಮ್ಮ ವೈಯಕ್ತಿಕ ಹಣದಿಂದ ಭರಿಸಲು ತೀರ್ಮಾನಿಸಿದ್ದಾರೆ. ಈ ವರ್ಷ ಅಧಿಕ ಸಂಖ್ಯೆಯಲ್ಲಿ ವಿದ್ಯಾರ್ಥಿಗಳ ಪ್ರವೇಶ ಪಡೆಯುವುದು ಅವರ ಗುರಿಯಾಗಿದೆ. ಕಾರಣ ಎಲ್ಲ ಉಪನ್ಯಾಸಕರು ಪಟ್ಟಣ ಹಾಗೂ ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿರುವ ಪ್ರೌಢಶಾಲೆಗಳಿಗೆ ತೆರಳಿ ಕಾಲೇಜಿನ ಸೌಲಭ್ಯಗಳ ಬಗ್ಗೆ ಪ್ರಚಾರ ಮಾಡುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಪಾಸಾಗಿರುವ ವಿದ್ಯಾರ್ಥಿಗಳ ಪಾಲಕರನ್ನು ಕೂಡ ಭೇಟಿಯಾಗಿ ಮನವೊಲಿಸುತ್ತಿದ್ದಾರೆ.

– ಕುಂಟೆಪ್ಪ ಗೌರಿಪುರ, ಪ್ರಾಂಶುಪಾಲ ಬಾಲಕರ ಸರ್ಕಾರಿ ಪಿಯು ಕಾಲೇಜು ಮಾನ್ವಿಪ್ರಸಕ್ತ ಶೈಕ್ಷಣಿಕ ವರ್ಷದಿಂದ ಬಾಲಕಿಯರ ಪ್ರವೇಶಕ್ಕೆ ಅನುಮತಿ ಪಡೆಯಲಾಗಿದೆ. ವಿದ್ಯಾರ್ಥಿಗಳ ಹೆಚ್ಚಿನ ದಾಖಲಾತಿ ಹಾಗೂ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಹೊಂದಲಾಗಿದೆ.- ಶ್ರೀಕಾಂತ ಪಾಟೀಲ ಗೂಳಿ, ಸಾಮಾಜಿಕ ಕಾರ್ಯಕರ್ತ ಮಾನ್ವಿಕಾಲೇಜಿನ ಅಭಿವೃದ್ಧಿ ಹಾಗೂ ವಿದ್ಯಾರ್ಥಿಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಜನಪ್ರತಿನಿಧಿಗಳು ಗಮನಹರಿಸಬೇಕು.

prajaprabhat

Recent Posts

2025- 26 ನೇ ಶೈಕ್ಷಣಿಕ ಸಾಲಿಗೆ ಯಜಿಸಿ ಅರ್ಹ ಅಭ್ಯರ್ಥಿಗಳನ್ನು ಪರಿಗಣಿಸಿ.!

ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…

6 hours ago

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

11 hours ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

16 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

22 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

22 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

22 hours ago