ಬೀದರ.23.ಏಪ್ರಿಲ್.25:-ಮನುಷ್ಯನ ಜೀವನದಲ್ಲಿ ದೊಡ್ಡ ಆಸ್ತಿಯೆಂದರೆ ಆರೋಗ್ಯವಾಗಿದೆ. ಹೀಗಾಗಿ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿಯನ್ನು ಹೊಂದಬೇಕಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಎಸ್.ಬಿರಾದಾರ ಹೇಳಿದರು.
ಅವರು ಇಂದು ಬೀದರ ವಿಶ್ವವಿದ್ಯಾಲಯದಲ್ಲಿ ಆಕ್ಸಿಲೈಫ್ ಹಾಸ್ಪಿಟಲ್ ಬೀದರ ಹಾಗೂ ಬೀದರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡುತ್ತಾ ಆರೋಗ್ಯದ ಬಗ್ಗೆ ನಿರ್ಲಕ್ಷ ಸಲ್ಲದು. ಚಿಕ್ಕ ಚಿಕ್ಕ ಕಾಯಿಲೆಯೆಂದು ನಿರ್ಲಕ್ಷಿಸಿದರೆ ಗಂಡಾAತರ ಖಂಡಿತ. ಹಾಗಾಗಿ ಆರೋಗ್ಯದ ಕಡೆಗೆ ಹೆಚ್ಚಿನ ನಿಗಾ ಮಹಿಸಬೇಕು. ಉತ್ತಮ ಆರೋಗ್ಯವು ದೇಶದ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.
ಆರೋಗ್ಯ ತಪಾಸಣೆಗೆ ಆಗಮಿಸಿದ ಆಕ್ಸಿಲೈಫ್ ಹಾಸ್ಪಿಟಲ್‌ನ ವೈದ್ಯರಾದ ಡಾ.ಸಪೂರಾರವರು ಮಾತನಾಡುತ್ತಾ ವ್ಯಕ್ತಿಗಳು ಸಮತೋಲಿತ ಆಹಾರ ಸೇವಿಸಬೇಕು. ಹೆಚ್ಚಿಗೆ ನೀರನ್ನು ಸೇವಿಸಬೇಕು. ನಿರಂತರ ಆರೋಗ್ಯ ತಪಾಸಣೆಗೆ ಒಳಗಾಗಬೇಕು. ಅನೇಕ ವೈರಸ್‌ಗಳಿಂದಾಗಿ ಸಾಕಷ್ಟು ರೋಗಗಳು ಬರುತ್ತಿವೆ. ಅದಕ್ಕಾಗಿ ಹೆಚ್ಚಿನ ಜಾಗೃತಿ ಹಾಗೂ ಎಚ್ಚರ ವಹಿಸಬೇಕಾಗಿದೆ ಎಂದರು.
ಆಕ್ಸಿಲೈಫ್ ಹಾಸ್ಪಿಟಲ್‌ನ ಮಾರ್ಕೆಟಿಂಗ್ ಮ್ಯಾನೇಜರ್ ನಾಗರಾಜ ಸ್ವಾಮಿ ಮಾತನಾಡಿ, ನಮ್ಮ ದಿನಚರಿಯು ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ಉತ್ತಮ ಆಹಾರ ಸೇವನೆ ಮುಖ್ಯವಾಗಿದೆ. ಮುಂಜಾನೆ ಶಾಂತಭಾವದಿAದ ವಾಕಿಂಗ್ ಮಾಡಬೇಕು. ಸರಿಯಾದ ಸಮಯಕ್ಕೆ ಉಪಹಾರ ಮತ್ತು ಊಟ ಸೇವಿಸಬೇಕೆಂದರು.
ಬೀದರ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾದ ಸುರೇಖಾ ಕೆ.ಎ.ಎಸ್. ಪ್ರಸ್ತಾವಿಕ ಮಾತನಾಡುತ್ತಾ ಇಂದಿನ ಒತ್ತಡದ ಜೀವನಶೈಲಿಯಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಗಮನವಹಿಸಬೇಕಾಗಿದೆ. ಕಾಯಿಲೆ ಬಂದ ನಂತರ ಎಷ್ಟು ಹಣ ವ್ಯಯಿಸಿದರೂ ವ್ಯರ್ಥ. ಹಾಗಾಗಿ ಕಾಯಿಲೆ ಬರದಂತೆ ಆರೋಗ್ಯ ಕಾಪಾಡಿಕೊಳ್ಳಬೇಕು. ಇಂದಿನ ಕಲುಷಿತ ವಾತಾವರಣದಲ್ಲಿ ಆರೋಗ್ಯದ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸಬೇಕಾಗಿದೆ. ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ತಣ್ಣಗಿನ ಬಟ್ಟೆ, ತಂಪು ನೀರು, ಮಜ್ಜಿಗೆಯಂತಹ ಪಾನೀಯಗಳನ್ನು ಸೇವಿಸಲು ಸಲಹೆ ನೀಡಿದರು.
ಉಚಿತ ತಪಾಸಣೆಯಲ್ಲಿ ಎರಡು ನೂರಕ್ಕಿಂತ ಅಧಿಕ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಳು ತಪಾಸಣೆಗೊಳಗಾಗಿ ಆರೋಗ್ಯದ ಕುರಿತಾದ ಮಾಹಿತಿಯನ್ನು ವೈದ್ಯರಿಂದ ಪಡೆದರು.
ಈ ಕಾರ್ಯಕ್ರಮದಲ್ಲಿ ಬೀದರ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಪರಮೇಶ್ವರನಾಯ್ಕ.ಟಿ, ಆಕ್ಸಿಲೈಫ್ ಹಾಸ್ಪಿಟಲ್‌ನ ಸಿಬ್ಬಂದಿಗಳಾದ ಸುಜಾತಾ, ರೋಹಿತ್, ವಿಶ್ವ ಹಾಗೂ ಬಸವರಾಜ ಉಪಸ್ಥಿತರಿದ್ದರು, ಕಾರ್ಯಕ್ರಮವನ್ನು ಡಾ.ರಾಮಚಂದ್ರ ಗಣಾಪೂರ ನಿರೂಪಿಸಿದರು. ಡಾ.ಗುಂಡಪ್ಪ ಸಿಂಗೆಯವರು ವಂದಿಸಿದರು.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…