ಲಖನೌ.05.ಮಾರ್ಚ.25:- ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಬುಧವಾರ ಬಿಜೆಪಿ ನೇತೃತ್ವದ “ಡಬಲ್-ಎಂಜಿನ್” ಸರ್ಕಾರವು ಭೀಮರಾವ್ ಅಂಬೇಡ್ಕರ್ ಅವರ ಪರಂಪರೆಗೆ ಬದ್ಧವಾಗಿದೆ ಎಂದು ಒತ್ತಿ ಹೇಳಿದರು ಮತ್ತು ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುವ ಎಲ್ಲಾ ಹಾಸ್ಟೆಲ್‌ಗಳಿಗೆ “ಬಾಬಾ ಸಾಹೇಬ್ ಅಂಬೇಡ್ಕರ್” ಹೆಸರಿಡಲು ನಿರ್ಧರಿಸಿದ್ದೇವೆ ಎಂದು ಹೇಳಿದರು.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಸಂವಿಧಾನವನ್ನು ರಕ್ಷಿಸುವ ಹಕ್ಕುಗಳ ಹೊರತಾಗಿಯೂ ಅಂಬೇಡ್ಕರ್ ಸೇರಿದಂತೆ ದಲಿತ ಮತ್ತು ಹಿಂದುಳಿದ ನಾಯಕರನ್ನು ಗೌರವಿಸುವಲ್ಲಿ ವಿರೋಧ ಪಕ್ಷದವರು ವಿಫಲರಾಗಿದ್ದಾರೆ’ ವಾಗ್ದಾಳಿ ನಡೆಸಿದ್ದಾರೆ.
ಅಂಬೇಡ್ಕರ್ ಪರಂಪರೆಯನ್ನು ಜಗತ್ತಿಗೆ ಸಾರುವಲ್ಲಿ ಬಿಜೆಪಿ ನೇತೃತ್ವದ ಡಬಲ್ ಎಂಜಿನ್ ಸರ್ಕಾರ ಬದ್ಧತೆ ಪ್ರದರ್ಶಿಸಿದೆ ಎಂದು ಅವರು ಹೇಳಿದ್ದಾರೆ.
‘ನಮ್ಮ ಸರ್ಕಾರವು ಅಂಬೇಡ್ಕರ್ ಅವರ ಗೌರವಾರ್ಥವಾಗಿ ‘ಪಂಚ ತೀರ್ಥ’ ಸ್ಥಾಪನೆ ಸೇರಿದಂತೆ ಲಖನೌದಲ್ಲಿ ಅಂತರರಾಷ್ಟ್ರೀಯ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರವನ್ನು ನಿರ್ಮಿಸುವ ಮೂಲಕ ಹಲವು ಐತಿಹಾಸಿಕ ಕ್ರಮಗಳನ್ನು ಕೈಗೊಂಡಿದೆ. ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡ (ಎಸ್‌ಟಿ) ವಿದ್ಯಾರ್ಥಿಗಳಿಗಾಗಿ ನಿರ್ಮಿಸಲಾಗುವ ಎಲ್ಲಾ ಹಾಸ್ಟೆಲ್‌ಗಳಿಗೆ ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿಡಲು ನಾವು ನಿರ್ಧರಿಸಿದ್ದೇವೆ’ ಎಂದು ಅವರು ತಿಳಿಸಿದ್ದಾರೆ.
ರಾಜ್ಯದಲ್ಲಿ ಆಡಳಿತ ನಡೆಸಿದ್ದ ಸಮಾಜವಾದಿ ಪಕ್ಷಕ್ಕೆ (ಎಸ್‌ಪಿ) ಹಲವು ಅವಕಾಶಗಳಿದ್ದವು. ಆದರೆ, ಅಂಬೇಡ್ಕರ್ ಹೆಸರಿನಲ್ಲಿ ಎಂದಿಗೂ ಸಂಸ್ಥೆಗಳನ್ನು ಸ್ಥಾಪಿಸಲಿಲ್ಲ. ಬದಲಾಗಿ ರಾಜಕೀಯ ಘೋಷಣೆಗಳಲ್ಲಿ ತೊಡಗಿತ್ತು ಎಂದು ಯೋಗಿ ಗುಡುಗಿದ್ದಾರೆ.
ದಲಿತ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಮ್ಮ ಸರ್ಕಾರ ಅಂಬೇಡ್ಕರ್ ವಿಶ್ವವಿದ್ಯಾಲಯದಲ್ಲಿ ಸಾವಿತ್ರಿಬಾಯಿ ಫುಲೆ ಅವರ ಹೆಸರಿನಲ್ಲಿ ಹಾಸ್ಟೆಲ್ ನಿರ್ಮಿಸಿದೆ ಎಂದು ಅವರು ಹೇಳಿದ್ದಾರೆ.
ಬೆಂಗಳೂರು.06.ಆಗಸ್ಟ್.25:- ಕರ್ನಾಟಕ ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕ 2ದಶಕದಿಂದ ನಿರಂತರವಾಗಿ ಕಾರ್ಯ ನಿರ್ವ ನಿರ್ವಹಿದಾರೆ ಆದರೆ …
ಕೊಪ್ಪಳ.06.ಆಗಸ್ಟ್.25: ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಬುಧವಾರ ಕುಟುಂಬ ಸದಸ್ಯರೊಂದಿಗೆ ಹನುಮಂತನ ಜನ್ಮಸ್ಥಳವೆಂದೆ…
ಚಾಮರಾಜನಗರ.06.ಆಗಸ್ಟ್ .25:- ಚಾಮರಾಜನಗರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಮಂಗಳವಾರ 2022 -2025 ನೇ ಪದವಿ ಪ್ರದಾನ ಸಮಾರಂಭದಲ್ಲಿ ಮೈಸೂರು ಜಿಲ್ಲೆಯ…
ಬೆಂಗಳೂರು.06.ಆಗಸ್ಟ್.25:- ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ನಿರ್ವಹಿಸ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯ ಸಮಯದಲ್ಲಿ ನಕಲಿ M.Phil ಮತ್ತು PH.D…
Central University of Karnataka ಇಂಗ್ಲೀಷ್ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ. ಅರ್ಹತೆ :- ಇಂಗ್ಲಿಷ್ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ…
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…