ಸೀತಾಪುರ.06.ಏಪ್ರಿಲ್.25:- ಅಧಿಕಾರಿಗಳ ಪ್ರಕಾರ, ಮಾರ್ಚ್ 11 ರಂದು ಪಂಚಾಯತ್ ಭವನದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಮೆ ಪ್ರತಿಷ್ಠಾಪಿಸಿದ್ದರು. ದೂರಿನ ಮೇರೆಗೆ ತಹಸಿಲ್ ಆಡಳಿತ ಮಾರ್ಚ್ 12 ರಂದು ಪ್ರತಿಮೆಗೆ ತೆರವಿಗೆ ನೋಟಿಸ್ ನೀಡಿತ್ತು.ಆದರೆ, ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರತಿಮೆಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿತ್ತು.
ಬಳಿಕ ಹೊಸ ಸೂಚನೆಗಳ ಮೇರೆಗೆ ತಂಡವೊಂದು ಬುಲ್ಡೋಜರ್‌ನೊಂದಿಗೆ ಪ್ರತಿಮೆಗಳನ್ನು ತೆರವುಗೊಳಿಸಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಪ್ರತಿಮೆ ತೆರವಿಗೆ ಸಜ್ಜಾಗುತ್ತಿದ್ದಂತೇಅವರತ್ತ ಗ್ರಾಮಸ್ಥರ ಗುಂಪೊಂದು ಕಲ್ಲು ತೂರಾಟಕ್ಕೆ ಮುಂದಾಗಿದೆ.ಘಟನೆಯಲ್ಲಿ ಎಂಟು ಪೊಲೀಸರಿಗೆ ಗಾಯವಾಗಿದ್ದು, ಸರ್ಕಲ್ ಅಧಿಕಾರಿಯ ವಾಹನಕ್ಕೆ ಹಾನಿಯಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಗಲಾಟೆ ವೇಳೆ ಕೆಲ ಗ್ರಾಮಸ್ಥರು ಕೂಡಾ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ರಂಜನ್ ತಿಳಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಭಗವನ್ ಬುದ್ಧನ ಪ್ರತಿಮೆ ತೆರವು ವಿಚಾರದಲ್ಲಿ ಗ್ರಾಮಸ್ಥರು ಪೊಲೀಸರೊಂದಿಗೆ ಘರ್ಷಣೆ ನಡೆಸಿದ ನಂತರ ಉತ್ತರ ಪ್ರದೇಶ ಜಿಲ್ಲೆಯ ವಿಭಾರಾಪುರ ಗ್ರಾಮದಲ್ಲಿ ಉದ್ವಿಗ್ನತೆ ಉಂಟಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಗ್ರಾಮಸ್ಥರು ಕಲ್ಲು ತೂರಾಟ ನಡೆಸಿ ಘರ್ಷಣೆ ನಡೆಸಿದ್ದರಿಂದ ಕನಿಷ್ಠ ಎಂಟು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಅಧಿಕಾರಿಗಳ ಪ್ರಕಾರ, ಮಾರ್ಚ್ 11 ರಂದು ಪಂಚಾಯತ್ ಭವನದ ಮುಂಭಾಗದಲ್ಲಿ ಗ್ರಾಮಸ್ಥರು ಪ್ರತಿಮೆ ಪ್ರತಿಷ್ಠಾಪಿಸಿದ್ದರು. ದೂರಿನ ಮೇರೆಗೆ ತಹಸಿಲ್ ಆಡಳಿತ ಮಾರ್ಚ್ 12 ರಂದು ಪ್ರತಿಮೆಗೆ ತೆರವಿಗೆ ನೋಟಿಸ್ ನೀಡಿತ್ತು.
ಆದರೆ, ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಪ್ರತಿಮೆಗಳನ್ನು ಹಾಗೆಯೇ ಉಳಿಸಿಕೊಳ್ಳಲಾಗಿತ್ತು. ಶನಿವಾರ ಮಹೋಲಿಯಲ್ಲಿ ನಡೆದ ಕುಂದುಕೊರತೆ ನಿವಾರಣಾ ಕಾರ್ಯಕ್ರಮದಲ್ಲಿ ಈ ವಿಷಯ ಮರುಕಳಿಸಿದೆ.
ಹೊಸ ಸೂಚನೆಗಳ ಮೇರೆಗೆ ತಂಡವೊಂದು ಬುಲ್ಡೋಜರ್‌ನೊಂದಿಗೆ ವಿವಾದಿತ ಸ್ಥಳದಿಂದ ಪ್ರತಿಮೆಗಳನ್ನು ತೆರವುಗೊಳಿಸಿದೆ. ಪೊಲೀಸರು ಹಾಗೂ ಸ್ಥಳೀಯ ಆಡಳಿತದ ಅಧಿಕಾರಿಗಳು ಪ್ರತಿಮೆ ತೆರವಿಗೆ ಸಜ್ಜಾಗುತ್ತಿದ್ದಂತೆೇ ಅವರತ್ತ ಗ್ರಾಮಸ್ಥರ ಗುಂಪೊಂದು ಕಲ್ಲು ತೂರಾಟಕ್ಕೆ ಮುಂದಾಗಿದೆ.
ಘಟನೆಯಲ್ಲಿ ಎಂಟು ಪೊಲೀಸರಿಗೆ ಗಾಯವಾಗಿದ್ದು, ಸರ್ಕಲ್ ಅಧಿಕಾರಿಯ ವಾಹನಕ್ಕೆ ಹಾನಿಯಾಗಿದೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದು, ಗಲಾಟೆ ವೇಳೆ ಕೆಲ ಗ್ರಾಮಸ್ಥರು ಕೂಡಾ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರವೀಣ್ ರಂಜನ್ ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ತೊಡಗಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇತರ ಆರೋಪಿಗಳ ಬಂಧನಕ್ಕಾಗಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಬೆಂಗಳೂರು.11.ಆಗಸ್ಟ್.25:- ಇಂದಿನಿಂದಲೇ ಮುಂಗಾರು ಅಧಿವೇಶನ ವಿಧಾನ ಮಂಡಲ ಉಭಯ ಸದನಗಳ ವಿದ್ಯುಕ್ತವಾಗಿ ಆರಂಭವಾಗಲಿದೆ. ಆಡಳಿತ ಹಾಗೂ ಪ್ರತಿಪಕ್ಷ ಸದಸ್ಯರುಗಳ ನಡುವೆ…
ಅಫಜಲಪುರ.11.ಆಗಸ್ಟ್.25:- KSRTC ಬಸ್ ಮತ್ತು ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ,ಈ ಅಪಘಾತದಲ್ಲಿ ಕಾರ್ ನಲ್ಲಿದ್ದ ತಂದೆ ಮಗ…
ಮಾಗಡಿ: ಬೆಂಗಳೂರಿನ ಸಜ್ಜೇಪಾಳ್ಯದಲ್ಲಿ ಇರುವ ಕೃಷ್ಣಪ್ಪ, ರಂಗಮ್ಮ ಎಜುಕೇಶನ್ ಟ್ರಸ್ಟ್ ನ ಹೆಸರಿನಲ್ಲಿ ಇದ್ದ 44 ಎಕರೆ 33 ಗುಂಟೆ…
ಬೆಂಗಳೂರು.10.ಆಗಸ್ಟ್.25:- ಸರ್ಕಾರಿ ಶಾಲೆ ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ-2 ಅನ್ನು ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿದೆ. ಶಿಕ್ಷಕರ ವರ್ಗಾವಣೆ…
ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…
ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…