ಬೀದರ.20.ಜುಲೈ.25:- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಕರ್ನಾಟಕ ಸರ್ಕಾರ ಇವರ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಬೀದರ ಮುಖಾಂತರ ಸ್ವಯಂ ಉದ್ಯೋಗ ಪ್ರಾರಂಭಿಸಲು ಆಸಕ್ತಿಯುಳ್ಳ ಪುರುಷ ಹಾಗು ಮಹಿಳೆಯರಿಗೆ ಒಂದು ದಿನದ ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರವನ್ನು ಜುಲೈ.22 ರಂದು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ಸಿಡಾಕ್ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದ್ಯಮಶೀಲತಾಭಿವೃದ್ಧಿ ಜಾಗೃತಿ ಶಿಬಿರ ಅಂದರೆ ಉದ್ಯಮಶೀಲತೆಯನ್ನು ಅಭಿವೃದ್ಧಿಪಡಿಸಲು ಮತ್ತು ಜನರಲ್ಲಿ ಜಾಗೃತಿ ಮೂಡಿಸಲು ಆಯೋಜಿಸುವ ಒಂದು ಕಾರ್ಯಕ್ರಮ. ಈ ಶಿಬಿರಗಳಲ್ಲಿ ಉದ್ಯಮಶೀಲತೆಯ ಮಹತ್ವ, ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ಮಾಹಿತಿ, ಸರ್ಕಾರಿ ಯೋಜನೆಗಳು ಮತ್ತು ಸೌಲಭ್ಯಗಳ ಬಗ್ಗೆ ಅರಿವು ಮೂಡಿಸಲಾಗುತ್ತದೆ.
ಈ ಶಿಬಿರದಲ್ಲಿ ಉದ್ಯಮಶೀಲತೆಯ ಪರಿಚಯ, ಸ್ವ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಬ್ಯಾಂಕಿನ ವ್ಯವಹಾರ, ಉದ್ಯಮಗಳನ್ನು ಪ್ರಾರಂಭಿಸಲು ಸಾಲ ಸೌಲಭ್ಯಕ್ಕಾಗಿ ಇರುವ ಸರ್ಕಾರದ ಯೋಜನೆಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ಮಾಹಿತಿಯನ್ನು ನೀಡಲಾಗುವುದು, 18 ವರ್ಷದಿಂದ 45 ವರ್ಷ ವಯೋಮಿತಿಯ ಮತ್ತು ಕನಿಷ್ಠ ಎಸ್‌ಎಸ್‌ಎಲ್‌ಸಿ ಪಾಸ್ ಅಥವಾ ಫೆಲ್ ಆದ ಎಲ್ಲಾ ವರ್ಗದ ಮಹಿಳೆಯರು ಜುಲೈ.22 ರೊಳಗಾಗಿ ಮೊಬೈಲ್ ಸಂಖ್ಯೆ: 9743012315 ಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.