ಉನ್ನತ ಶಿಕ್ಷಣದಲ್ಲಿ ಬೋಧಕರ ಶೇ.50% ಹುದ್ದೆಗಳು ಖಾಲಿ,ಸಂಸದೀಯ ಸಮಿತಿ.

ಹೊಸ ದೆಹಲಿ.31.ಮಾರ್ಚ್.25:-Higher Education Institutes ಉನ್ನತ ಶಿಕ್ಷಣ ಸಂಸ್ಥೆಗಳಾದ IIT ಐಐಟಿ, IIM ಐಐಎಂ ಸೇರಿದಂತೆ ಅನೇಕ ವಿಶ್ವವಿದ್ಯಾಲಯಗಳಲ್ಲಿ ಶೇ. 50%  ಹೆಚ್ಚು ಪ್ರಾಧ್ಯಾಪಕರ ಹುದ್ದೆಗಳು ಖಾಲಿ ಇವೆ ಎಂದು ಸಂಸದೀಯ ಸಮಿತಿಯ ವರದಿಯೊಂದು ಬಹಿರಂಗಪಡಿಸಿದೆ.

ಈ ವರದಿಯ ಪ್ರಕಾರ, IIT ಐಐಟಿ, NIT ಎನ್‌ಐಟಿ, IIM ಐಐಎಂ, IISER  ಐಐಎಸ್‌ಇಆರ್, ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಂಜೂರಾದ ಬೋಧಕರ ಹುದ್ದೆಗಳಲ್ಲಿ ಶೇ.56.18ರಷ್ಟು ಹುದ್ದೆಗಳು ಖಾಲಿ ಇವೆ.

ಸಂಸದೀಯ ಸ್ಥಾಯಿ ಸಮಿತಿಯು ಸಂಸತ್ತಿನಲ್ಲಿ ಮಂಡಿಸಿದ ‘2025-26ರ ಉನ್ನತ ಶಿಕ್ಷಣ ಇಲಾಖೆಯ ಅನುದಾನ ಬೇಡಿಕೆಗಳು’ ಎಂಬ ವರದಿಯ ಪ್ರಕಾರ, ಜನವರಿ 31, 2025ರ ವರೆಗೆ ಐಐಟಿಗಳು, ಎನ್‌ಐಟಿಗಳು, ಐಐಎಂಗಳು, ಐಐಎಸ್‌ಇಆರ್‌ಗಳು, ಕೇಂದ್ರ ವಿಶ್ವವಿದ್ಯಾಲಯಗಳು ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಮಂಜೂರಾದ ಒಟ್ಟು ಬೋಧನಾ ಬೋಧಕ ಹುದ್ದೆಗಳಲ್ಲಿ (18,940) ಶೇ. 28.56ರಷ್ಟು ಹುದ್ದೆಗಳು ಖಾಲಿ ಇವೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ. 17.97ರಷ್ಟು, ಸಹ ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ. 38.28ರಷ್ಟು ಮತ್ತು ಪ್ರಾಧ್ಯಾಪಕರ ಹುದ್ದೆಗಳಲ್ಲಿ ಶೇ. 56.18ರಷ್ಟು ಹುದ್ದೆಗಳು ಖಾಲಿ ಇವೆ ಎಂದು ವರದಿಯ ದತ್ತಾಂಶವು ತೋರಿಸುತ್ತದೆ. ಕೇಂದ್ರ ವಿಶ್ವವಿದ್ಯಾಲಯಗಳಲ್ಲಿ ಮೀಸಲಾತಿ ಬೋಧಕ ಹುದ್ದೆಗಳೂ ಭರ್ತಿಯಾಗಿಲ್ಲ. ನೇಮಕಾತಿ ಪ್ರಕ್ರಿಯೆಯನ್ನು ತ್ವರಿತಗೊಳಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸಮಿತಿ ಶಿಫಾರಸು ಮಾಡಿದೆ.

ಬಾಹ್ಯ ಹಸ್ತಕ್ಷೇಪವನ್ನು ಕಡಿಮೆ ಮಾಡಲು ಆನ್‌ಲೈನ್ ಅರ್ಜಿಗಳು, ಸ್ಕ್ರೀನಿಂಗ್ ಮತ್ತು ಸಂವಹನಕ್ಕಾಗಿ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವ ಮೂಲಕ ಪಾರದರ್ಶಕ ಬೋಧಕರ ನೇಮಕಾತಿ ಪ್ರಕ್ರಿಯೆಯನ್ನು ತರಲು ಸಮಿತಿ ಸೂಚಿಸಿದೆ. ಉದ್ಯೋಗ ಭದ್ರತೆ ಮತ್ತು ನ್ಯಾಯಯುತ ಸಂಭಾವನೆಗಳನ್ನು ಖಾತ್ರಿಪಡಿಸುವ ಮೂಲಕ ಅರ್ಹ ಬೋಧಕರನ್ನು ಖಾಯಂ ಹುದ್ದೆಗಳಿಗೆ ನೇಮಿಸಿಕೊಳ್ಳುವ ಪ್ರಾಮುಖ್ಯತೆಯನ್ನು ಸಮಿತಿ ಒತ್ತಿ ಹೇಳಿದೆ.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

3 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

4 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

4 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

4 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

5 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

5 hours ago