Home » ಲೈವ್ ನ್ಯೂಸ್ » ಉನ್ನತ ಶಿಕ್ಷಣ ಇಲಾಖೆಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಜಾತಿ ಮೀಸಲಾತಿ ಜಾರಿ !

ಉನ್ನತ ಶಿಕ್ಷಣ ಇಲಾಖೆಯ ಅತಿಥಿ ಉಪನ್ಯಾಸಕರ ನೇಮಕಾತಿಗೆ ಜಾತಿ ಮೀಸಲಾತಿ ಜಾರಿ !

Facebook
X
WhatsApp
Telegram

ಬೆಂಗಳೂರು: ಕರ್ನಾಟಕ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಜಾತಿ ಆಧಾರಿತ ಮೀಸಲಾತಿ ಜಾರಿಗೊಳಿಸಲಾಗಿದೆ. ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳ ಮೀಸಲಾತಿಯೂ ಪ್ರಸ್ತುತ ವರ್ಷದಿಂದ ಜಾರಿಗೊಳಿಸಲಾಗಿದೆ.

ಒಂದು ದಶಕದಿಂದ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಅಂಗವಿಕಲರು ಮತ್ತು ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿದ್ದು ಆದರೆ 2026-27ನೇ ಶೈಕ್ಷಣಿಕ ಸಾಲಿನಿಂದ ಕೇ.50ರ ಜಾತಿ ಮೀಸಲಾತಿ ಜಾರಿಗೆ ತರಲು ಉನ್ನತ ಶಿಕ್ಷಣ ಇಲಾಖೆ ಘೋಷಿಸಿದೆ.

ಸರ್ಕಾರಿ ಪ್ರಥಮ ದರ್ಜೆ, ಸಂಸ್ಕೃತ ಹಾಗೂ ಚಿತ್ರಕಲಾ ಕಾಲೇಜುಗಳಲ್ಲಿ ಉಳಿಯುವ ಕಾರ್ಯಭಾರದ ಆಧಾರದಲ್ಲಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಲಾಗುತ್ತದೆ. ಹೊಸ ನಿಯಮದಂತೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಜುಲೈ ಅಂತ್ಯದೊಳಗೆ ಕೌನ್ಸೆಲಿಂಗ್ ಪೂರ್ಣಗೊಳಿಸಲು ಇಲಾಖೆ ಸೂಚಿಸಿದೆ. ಈ ನಿಯಮವು ಸರ್ಕಾರಿ ಎಂಜಿನಿಯರಿಂಗ್ ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೂ ಅನ್ವಯವಾಗಲಿದೆ.

ಜುಲೈ 18ರಂದು ಹೊರಡಿಸಿದ್ದ ಆದೇಶದಲ್ಲಿ ಎಸ್‌ಸಿ ಮತ್ತು ಎಸ್‌ಟಿ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾತಿ ನೀಡಲಾಗಿತ್ತು. ಹಿಂದುಳಿದ ವರ್ಗಗಳನ್ನು ಹೊರಗಿಟ್ಟಿದ್ದಕ್ಕೆ ಆಕ್ಷೇಪ ವ್ಯಕ್ತವಾದ ಹಿನ್ನೆಲೆಯಲ್ಲಿ ಇಲಾಖೆ ತಿದ್ದುಪಡಿ ಆದೇಶ ಹೊರಡಿಸಿ, ಅವರಿಗೆ ಸಹ ಮೀಸಲಾತಿ ಕಲ್ಪಿಸಿದೆ.

ಕಳೆದ ವರ್ಷ ಯುಜಿಸಿ ಅರ್ಹತೆ ಹೊಂದಿದವರನ್ನಷ್ಟೇ ನೇಮಕ ಮಾಡಿದ್ದರಿಂದ 5 ಸಾವಿರಕ್ಕೂ ಹೆಚ್ಚು ಮಂದಿ ಅವಕಾಶ ಕಳೆದುಕೊಂಡಿದ್ದರು. ಈ ಬಾರಿ ಯುಜಿಸಿ ಅರ್ಹ ಅಭ್ಯರ್ಥಿಗಳು ಮೀಸಲಾತಿಯ ಲಾಭದೊಂದಿಗೆ ನೇಮಕಾತಿಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಇದಕ್ಕೂ ನಡುವೆ, ಮಹಿಳಾ ಅಭ್ಯರ್ಥಿಗಳಿಗೆ ಈ ಹಿಂದೆ ನೀಡುತ್ತಿದ್ದ ಆದ್ಯತೆಯನ್ನು ಈ ವರ್ಷ ಕೈಬಿಡಲಾಗಿದೆ. ಹಿಂದಿನಂತೆ ಮಹಿಳೆಯರಿಗೆ ಆದ್ಯತೆ ಅಥವಾ ಪ್ರತ್ಯೇಕ ಮೀಸಲಾತಿ

ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಮೊದಲ ಬಾರಿ SC ಪರಿಶಿಷ್ಟ ಜಾತಿ, ST ಪರಿಶಿಷ್ಟ ಪಂಗಡ ಹಾಗೂ OBC ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳಮೀಸಲಾತಿ ಅನ್ವಯಿಸಲಾಗಿದೆ.

2026-27ನೇ ಶೈಕ್ಷಣಿಕ ಸಾಲಿನಿಂದಲೇ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಜಾತಿ ಆಧಾರಿತ ಮೀಸಲಾತಿ ಇರಲಿಲ್ಲ. ಅಂಗವಿಕಲರು, ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿತ್ತು ಪರಿಸಿಸ್ಟ್ ಜಾತಿ ಹಾಗೂ ಪರಿಸಿಸ್ಟ್ ಪಂಗಡ ಮತ್ತು ಒಬಿಸಿ ಜಾತಿ ಆಧಾರಿತ ಮೀಸಲಾತಿ (ಶೇ 50) ಅಳವಡಿಸಿಕೊಂಡು ನೇಮಕಾತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.

ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಾಯಂ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆಯ ನಂತರ ಉಳಿಯುವ ಕಾರ್ಯಭಾರದ ಆಧಾರದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹೊಸ ನಿಯಮದ ಅನ್ವಯ ಈ ಬಾರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇದೇ ಜುಲೈ ಅಂತ್ಯದ ಒಳಗೆ ಕೌನ್ಸೆಲಿಂಗ್‌ ಪ್ರಕ್ರಿಯೆ ಪೂರ್ಣಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.

ಜಾತಿ ಆಧಾರಿತ ಮೀಸಲಾತಿ ನಿಯಮವು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಎಂಜಿನಿಯರಿಂಗ್‌ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್‌ ಕಾಲೇಜುಗಳಿಗೂ ಅನ್ವಯವಾಗಲಿದೆ.

ಉನ್ನತ ಶಿಕ್ಷಣ ಇಲಾಖೆ ಇದೇ ಜುಲೈ 18ರಂದು ಹೊರಡಿಸಿದ್ದ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮೀಸಲಾತಿ ನೀಡಲು ಸೂಚಿಸಲಾಗಿತ್ತು. ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಕಲ್ಪಿಸಿರಲಿಲ್ಲ. ಈ ಕುರಿತು ಆಕ್ಷೇಪ ವ್ಯಕ್ತವಾದ ನಂತರ ಮರು ಆದೇಶ ಹೊರಡಿಸಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತೆ ಹೊಂದಿದವರನ್ನಷ್ಟೇ ಪರಿಗಣಿಸಿ ಕಳೆದ ವರ್ಷ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಹಾಗಾಗಿ, 5 ಸಾವಿರಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಂಡಿದ್ದರು. ಈ ಬಾರಿ ಯುಜಿಸಿ ಅರ್ಹತೆ ಇರುವವರು ಮೀಸಲಾತಿ ಸೌಲಭ್ಯ ಪಡೆದು ನೇಮಕವಾಗಲಿದ್ದಾರೆ.

‘ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಈ ಹಿಂದೆ ಆದ್ಯತೆ ನೀಡಲಾಗುತ್ತಿತ್ತು. ಆದರೆ, ಈ ವರ್ಷ ಜಾತಿ ಮೀಸಲಾತಿ ಕಲ್ಪಿಸಿದ್ದು, ಮಹಿಳೆಯರಿಗೆ ಆದ್ಯತೆ ನೀಡಿಲ್ಲ. ಮಹಿಳಾ ಮೀಸಲಾತಿ ನೀಡಬೇಕು. ಇಲ್ಲವೇ ಹಿಂದಿನಂತೆ ಆದ್ಯತೆಯ ಮೇಲೆ ನೇಮಕ ಮಾಡಿಕೊಳ್ಳಬೇಕು’ ಎಂದು ಅತಿಥಿ ಉಪನ್ಯಾಸಕಿ ಗಾಯತ್ರಿ ಒತ್ತಾಯಿಸಿದ್ದಾರೆ.

249 ‘ಅತಿಥಿ’ಗಳ ವಿರುದ್ಧ ಪ್ರಕರಣ: ಆಕ್ಷೇಪ

ಹಿಂದಿನ ಸಾಲಿನಲ್ಲಿ ಯುಜಿಸಿ ಅರ್ಹತೆಯ ನಕಲಿ ಪ್ರಮಾಣಪತ್ರ ಸಲ್ಲಿಸಿದ್ದ 249 ಅಭ್ಯರ್ಥಿಗಳಿಗೆ 2026-27ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಲು ನಿರ್ಬಂಧ ವಿಧಿಸಲಾಗಿದೆ. ಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆಯ ಪೋರ್ಟಲ್‌ನಲ್ಲಿ ಪ್ರಕಟಿಸಲಾಗಿದ್ದು, ನಕಲಿ ಪ್ರಮಾಣಪತ್ರ ಸಲ್ಲಿಸಿದವರ ವಿರುದ್ಧ ಆಯಾ ಕಾಲೇಜುಗಳ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲು ಪ್ರಾಂಶುಪಾಲರಿಗೆ ಸೂಚಿಸಲಾಗಿದೆ.

ಕಾಲೇಜು ಶಿಕ್ಷಣ ಇಲಾಖೆಯ ನಿರ್ಧಾರವನ್ನು ರಾಜ್ಯ ಅತಿಥಿ ಉಪನ್ಯಾಸಕರ ಸಂಘ ಖಂಡಿಸಿದ್ದು, ಆತುರದ ಕ್ರಮ ಕೈಗೊಳ್ಳದಂತೆ ಇಲಾಖೆಯ ಆಯುಕ್ತರಿಗೆ ಮನವಿ ಸಲ್ಲಿಸಿದೆ.

‘ಅತಿಥಿ ಉಪನ್ಯಾಸಕರು ಸಲ್ಲಿಸಿದ ಪಿಎಚ್.ಡಿ ಸೇರಿದಂತೆ ಯುಜಿಸಿ ಅರ್ಹತೆಯ ಪ್ರಮಾಣಪತ್ರಗಳ ನೈಜತೆ ಪತ್ತೆ ಹಚ್ಚಲು ಕಾಲೇಜು ಶಿಕ್ಷಣ ಇಲಾಖೆ ಅಳವಡಿಸಿಕೊಂಡಿರುವ ಪ್ರಮಾಣಿತ ಕಾರ್ಯಾಚರಣೆಯ ವಿಧಾನವೇ (ಎಸ್‌ಒಪಿ) ಅನುಮಾನಾಸ್ಪದವಾಗಿದೆ’ ಎಂದು ಸಂಘದ ಅಧ್ಯಕ್ಷ ಹನುಮಂತಗೌಡ ಕಲ್ಮನಿ ಹೇಳಿದರು.

ಹೊರ ರಾಜ್ಯದ ವಿಶ್ವವಿದ್ಯಾಲಯ ಗಳಿಂದ ಪಡೆದ ಪ್ರಮಾಣಪತ್ರಗಳನ್ನು ಕೆಲ ಕಾಲೇಜುಗಳಲ್ಲಿ ಅಂಗೀಕರಿಸಿದ್ದರೆ, ಕೆಲ ಕಾಲೇಜುಗಳ ಪ್ರಾಂಶುಪಾಲರು ನಕಲಿ ಎಂಬ ತೀರ್ಮಾನಕ್ಕೆ ಬಂದಿದ್ದಾರೆ. ಪರಿಶೀಲನೆಯಲ್ಲೇ ಲೋಪಗಳಿವೆ. ಹೀಗಿರುವಾಗ ಕ್ರಿಮಿನಲ್‌ಗಳಂತೆ ನಡೆಸಿಕೊಳ್ಳುವುದು ಸರಿಯಾದ ಕ್ರಮವಲ್ಲ’ ಎಂದರು.

ಶಿಕ್ಷಣ ಸಂಯೋಜಕರಿಗೆ ಬೋಧನೆ ಕಡ್ಡಾಯ

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಯುಜಿಸಿ ನಿಗದಿಪಡಿಸಿದ ಅರ್ಹತೆ ಹೊಂದಿಲ್ಲದ ಕಾರಣ ಕೆಲಸ ಕಳೆದುಕೊಂಡಿದ್ದ 3,853 ಅತಿಥಿ ಉಪನ್ಯಾಸಕರನ್ನು ‘ಶೈಕ್ಷಣಿಕ ಸಂಯೋಜಕ’ ಹುದ್ದೆಗೆ ಇದೇ ಸಾಲಿನಿಂದ ನೇಮಕ ಮಾಡಿ ಕೊಳ್ಳಲಾಗುತ್ತಿದೆ.

ಒಂದು ವೇಳೆ ಕೆಲ ವಿಷಯಗಳಿಗೆ ಯುಜಿಸಿ ಅರ್ಹತೆ ಇರುವವರು ಲಭ್ಯವಾಗದೆ ಇದ್ದರೆ ಆಗ ಶಿಕ್ಷಣ ಸಂಯೋ ಜಕರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಅಂಥವರು ಕೌನ್ಸೆಲಿಂಗ್‌ನಲ್ಲಿ ಸ್ಥಳ ಪಡೆದು ಬೋಧನಾ ಕಾರ್ಯಕ್ಕೆ ಹಾಜರಾಗ ಬೇಕು. ಇಲ್ಲದಿದ್ದರೆ ಅವರನ್ನು ಸಂಯೋಜಕ ಹುದ್ದೆಗೂ ಪರಿಗಣಿಸುವುದಿಲ್ಲ ಎಂದು ಕಾಲೇಜು ಶಿಕ್ಷಣ ಇಲಾಖೆ ಹೇಳಿದೆ.

ಹನುಮಂತಗೌಡ ಕಲ್ಮನಿ ಅಧ್ಯಕ್ಷ, ರಾಜ್ಯ ಅತಿಥಿ ಉಪನ್ಯಾಸಕರ ಸಂಘನೇಮಕಾತಿಯಲ್ಲಿ ಮೀಸಲಾತಿ ಸ್ವಾಗತಾರ್ಹ. ಆದರೆ, ಕಾಲೇಜು ಶಿಕ್ಷಣ ಇಲಾಖೆ ಅಳವಡಿಸಿಕೊಂಡ ಎಸ್‌ಒಪಿ ಅನುಮಾನಾಸ್ಪದವಾಗಿದೆ. ಅನುಭವಿಗಳನ್ನು ಕ್ರಿಮಿನಲ್‌ಗಳಂತೆ ನಡೆಸಿಕೊಳ್ಳಲಾಗುತ್ತಿದೆ.

Author

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Stock market

Astrology