ಉನ್ನತ ಶಿಕ್ಷಣ: 2,000 ಬೋಧಕರ ಹುದ್ದೆ ಭರ್ತಿ’

ಚನ್ನಗಿರಿ.17.ಮೇ.25:- ಪ್ರಸಕ್ತ ಸಾಲಿನಲ್ಲಿ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ 2,000 ಬೋಧಕರ ಹುದ್ದೆಗಳನ್ನು ತಕ್ಷಣವೇ ಭರ್ತಿ ಮಾಡಲಾಗುವುದು.

ರಾಜ್ಯ ಸರ್ಕಾರ ಎರಡು ವರ್ಷಗಳಲ್ಲಿ ಉನ್ನತ ಶಿಕ್ಷಣ ಇಲಾಖೆ ₹2,500 ಕೋಟಿ ಅನುದಾನವನ್ನು ವಿವಿಧ ಕಾರ್ಯಗಳಿಗೆ ಉಪಯೋಗಿಸಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ತಿಳಿಸಿದರು.

ತಾಲ್ಲೂಕಿನ ಮುದ್ದೇನಹಳ್ಳಿ ಗ್ರಾಮದ ಮೌದ್ಗಲ್ ಆಂಜನೇಯ ಸ್ವಾಮಿ ಸಮುದಾಯ ಭವನದಲ್ಲಿ ಶನಿವಾರ ನಡೆದ ಸಾಧನಾ ಸಮಾವೇಶದ ಪೂರ್ವಭಾವಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹4.50 ಕೋಟಿ ಅನುದಾನ ಮಂಜೂರು ಮಾಡಿದ್ದು, ಶೀಘ್ರದಲ್ಲಿಯೇ ಕಾಮಗಾರಿ ಆರಂಭವಾಗುತ್ತದೆ. ಹಾಗೆಯೇ ಇಲ್ಲಿನ ಶಾಸಕರ ಮನವಿಯಂತೆ ಪಟ್ಟಣದಲ್ಲಿ ಎಇಟಿಪಿ ಕೇಂದ್ರವನ್ನು ಪ್ರಾರಂಭಿಸಲಾಗುವುದು. ಇಲ್ಲಿನ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮುಂಬರುವ ಸಾಲಿನಿಂದ 3 ಹೊಸ ಕೋರ್ಸ್‌ ಆರಂಭಿಸಲಾಗುವುದು.

‘ನುಡಿದಂತೆ ನಡೆದ ಕಾಂಗ್ರೆಸ್ ಸರ್ಕಾರದ ಸಾಧನಾ ಸಮಾವೇಶ ಮೇ 20ರಂದು ಹೊಸಪೇಟೆಯಲ್ಲಿ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ತಾಲ್ಲೂಕಿನ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಅಭಿಮಾನಿಗಳು ಭಾಗವಹಿಸಬೇಕು’ ಎಂದು ಮನವಿ ಮಾಡಿದರು.

‘ಎರಡು ವರ್ಷದ ಅವಧಿಯಲ್ಲಿ ಕೆರೆಗಳನ್ನು ತುಂಬಿಸುವ ಕಾಮಗಾರಿಗೆ ₹365 ಕೋಟಿ, ಲೋಕೋಪಯೋಗಿ ಇಲಾಖೆಯಿಂದ ರಸ್ತೆ ಅಭಿವೃದ್ಧಿಗೆ ₹50 ಕೋಟಿ ಸೇರಿದಂತೆ ಒಟ್ಟು ₹500 ಕೋಟಿಗಿಂತಲೂ ಹೆಚ್ಚು ಅನುದಾನವನ್ನು ಕ್ಷೇತ್ರದ ಅಭಿವೃದ್ಧಿಗೆ ತರಲಾಗಿದೆ’ ಎಂದು ಶಾಸಕ ಬಸವರಾಜು ವಿ. ಶಿವಗಂಗಾ ತಿಳಿಸಿದರು.

ಕೆಪಿಸಿಸಿ ವಕ್ತಾರ ಹೊದಿಗೆರೆ ರಮೇಶ್, ಕಾರ್ಯದರ್ಶಿ ವಡ್ನಾಳ್ ಜಗದೀಶ್, ಜಿಲ್ಲಾ ಕಾರ್ಯದರ್ಶಿ ಸಿ. ನಾಗರಾಜ್, ಉಪಾಧ್ಯಕ್ಷ ವೀರೇಶ್ ನಾಯ್ಕ, ಸಂತೇಬೆನ್ನೂರು ಬ್ಲಾಕ್ ಅಧ್ಯಕ್ಷ ಮಹಮದ್ ಜಬೀವುಲ್ಲಾ, ಮಹಿಳಾ ಘಟಕದ ಅಧ್ಯಕ್ಷೆ ಸವಿತಾ, ಚನ್ನಗಿರಿ ಘಟಕದ ಜ್ಯೋತಿ ಕೋರಿ, ಭೈರನಹಳ್ಳಿ ಮಂಜಣ್ಣ, ಜಿ.ಆರ್. ಲೋಕೇಶಪ್ಪ, ಜಯ್ಯಣ್ಣ, ಹನುಮಂತಪ್ಪ ಉಪಸ್ಥಿತರಿದ್ದರು. ಚನ್ನಗಿರಿ ಬ್ಲಾಕ್ ಸಮಿತಿ ಅಧ್ಯಕ್ಷ ಸಿ.ಎಚ್. ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದರು.

prajaprabhat

Recent Posts

ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಈ ಪ್ರಕಾರ ನಡೆಯಲಿದೆ.

ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ  ಕಾಲೇಜು ಶಿಕ್ಷಣ ಇಲಾಖೆಯು…

3 hours ago

ಆ.10ರೊಳಗೆ ಒಳಮೀಸಲಾತಿ ಜಾರಿ ಮಾಡಿ ಇಲ್ಲದಿದ್ದರೆ ಕುರ್ಚಿ ಬಿಟ್ಟು ಕೆಳಗಿಳಿಯಿರಿ.

ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್‌ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…

4 hours ago

ಶಿಕ್ಷಣ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ ಅನುಷ್ಠಾನ ಕಡ್ಡಾಯ- ಡಾ. ಸುರೇಶ ಇಟ್ನಾಳ

ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…

5 hours ago

Free Couching ಅಲ್ಪಸಂಖ್ಯಾತರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…

5 hours ago

ಬೆಳಗಾವಿ ಜಿಲ್ಲೆಯಲ್ಲಿ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಆಸಕ್ತರು ಭಾಗವಹಿಸಿ

ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…

5 hours ago

ನ್ಯಾಯಾಲಯಗಳಲ್ಲಿ ಸ್ವಚ್ಛತಾ ಸಿಬ್ಬಂದಿಗಳ ಸೇವೆ ಪೂರೈಕೆಗೆ ಅರ್ಜಿ ಆಹ್ವಾನ<br>

ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…

5 hours ago