ಸಾಗರ.11.ಅ: ರಾಜ್ಯ ಸರ್ಕಾರಿ ಪದವಿ ಕಾಲೇಜಿನಲ್ಲಿನ ಗುರುವಾರ ನಡೆದ ಪ್ರಸಕ್ತ 2026-27 ಶೈಕ್ಷಣಿಕ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಉಪನ್ಯಾಸಕರ ಕೊರತೆ ನೀಗಿಸುವ ಸಂಬಂಧ ಉನ್ನತ ಶಿಕ್ಷಣ ಸಚಿವರೊಂದಿಗೆ ಚರ್ಚಿಸಿದ್ದು, ಶೀಘ್ರವೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಮಾತನಾಡಿದರು.
ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ತಾತ್ಕಾಲಿಕ ಕ್ರಮವಾಗಿ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವಂತೆ ಪ್ರಾಂಶುಪಾಲರಿಗೆ ಸೂಚಿಸಿದ್ದೇನೆ. ಅಗತ್ಯ ಬಿದ್ದರೆ ಅವರ ವೇತನವನ್ನು ವೈಯಕ್ತಿಕವಾಗಿ ಭರಿಸುತ್ತೇನೆ’ ಎಂದು ಹೇಳಿದರು.
‘ಸಾಗರದ ಎಲ್ಲಾ ಸರ್ಕಾರಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದೆ. ಯಾವ ಖಾಸಗಿ ಕಾಲೇಜುಗಳಿಗೆ ಕಡಿಮೆ ಇಲ್ಲದಂತೆ ಸರ್ಕಾರಿ ಕಾಲೇಜುಗಳಲ್ಲಿ ಉತ್ತಮ ಫಲಿತಾಂಶ ಬರುತ್ತಿರುವುದು ಉತ್ತಮ ಬೆಳವಣಿಗೆ’ ಎಂದರು.
ಕಲೆ, ಸಾಹಿತ್ಯ, ಸಂಸ್ಕೃತಿಗೆ ಸಂಬಂಧಪಟ್ಟ ಸಹಪಠ್ಯ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುವ ಜೊತೆಗೆ ನಾಯಕತ್ವದ ಗುಣ ಬೆಳೆಯುತ್ತದೆ’ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹ ಪ್ರಾಧ್ಯಾಪಕಿ ವಿಜಯಲಕ್ಷ್ಮಿ ಗೇಟಿಯವರ ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲ ಸಣ್ಣಹನುಮಪ್ಪ ಜಿ. ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿಯ ಚೇತನ್ ರಾಜ್ ಕಣ್ಣೂರು, ಈಳಿ ಶ್ರೀಧರ್, ಗಣಪತಿ ಮಂಡಗಳಲೆ, ಷಣ್ಮುಖ ಸೂರನಗದ್ದೆ, ಯಶೋಧಮ್ಮ, ಅನೀಸ್ ಖಾನ್, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಎ.ಬಿ.ಉಮೇಶ್, ಮಮತಾ ವಿ.ಹೆಗಡೆ, ಮೇಘಾ ಭೂತೆ, ಸುರೇಶ್ ಜಂಬಾನೆ, ವಿದ್ಯಾರ್ಥಿ ಸಂಘದ ಪ್ರಮುಖರಾದ ಅಕ್ಷಯ್ ಬಿ.ಕೆ., ಸುದರ್ಶನ್ ಕುಮಾರ್, ಚಂದನಾ ಎಂ.ಆರ್., ಆಕರ್ಷ ರವಿ ಆತ್ರೇಯ, ಸ್ಫೂರ್ತಿ ವೈ.ಕೆ., ಎನಮ್ ಜೇಸನ್ ಇದ್ದರು.






Any questions related to ಪದವಿ ಕಾಲೇಜುಗಳ ಉಪನ್ಯಾಸಕರ ಕೊರತೆ ನೀಗಿಸಲು ಕ್ರಮ: ಶಾಸಕ ಗೋಪಾಲಕೃಷ್ಣ ಬೇಳೂರು,?