ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಬಸ್ ಸೌಲಭ್ಯ ಲೋಕಾರ್ಪಣೆ


ಬೀದರ.13.ಫೆಬ್ರುವರಿ.25:-ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಜಿಲ್ಲೆಯ ವಿವಿಧ ಸ್ಥಳಗಳಿಂದ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ಸಿ.ಎಸ್.ಆರ್.ನಿಧಿಯಡಿ 30 ಲಕ್ಷ ರೂ. ವೆಚ್ಚದಲ್ಲಿ ಬಸ್ ಸೌಲಭ್ಯವನ್ನು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಲೋಕಾರ್ಪಣೆ ಮಾಡಿದರು.


ನಂತರ ವಿದ್ಯಾರ್ಥಿಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ ಅವರು ಸದರಿ ವಿಜ್ಞಾನ ಕೇಂದ್ರವನ್ನು ರಾಷ್ಟ್ರಪತಿಯಾಗಿದ್ದ ಖ್ಯಾತ ವಿಜ್ಞಾನಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತಿಯಾಗಿರುವ ಡಾ.ಅಬ್ದುಲ್ ಕಲಾಂ ಅವರು ಉದ್ಘಾಟನೆ ಮಾಡಿದ್ದರು.

ಅವರು ವಿದ್ಯಾರ್ಥಿಗಳೊಂದಿಗೆ ಸದಾ ಸಂವಾದ ಮಾಡುತ್ತಿದ್ದರು, ವಿದ್ಯಾರ್ಥಿಗಳಿಗೆ ವಿಜ್ಞಾನ, ತಂತ್ರಜ್ಞಾನದಲ್ಲಿ ಹೆಚ್ಚಿನ ಆಸಕ್ತಿ ಮೂಢಿಸುವಲ್ಲಿ ವಿಜ್ಞಾನ ಕೇಂದ್ರ ಉಪಯೋಗವಾಗಲಿದೆ.

ಈ ರಾಜ್ಯದ ದೇಶದ ಭವಿಷ್ಯ ರೂಪಿಸುವಲ್ಲಿ ವಿದ್ಯಾರ್ಥಿಗಳು ಉನ್ನತ ಜ್ಞಾನ ಸಂಪಾದಿಸಬೇಕು. ವಾಸ್ತವ ಸತ್ಯದ ಅನ್ವೇಷಣೆ ಮಾಡುವುದೇ ವಿಜ್ಞಾನ, ಅನೇಕ ಗ್ರಾಮೀಣ ವಿದ್ಯಾರ್ಥಿಗಳು ಉನ್ನತ ಸ್ಥಾನ ಪಡೆದು ವ್ಯಕ್ತಿತ್ವ ರೂಪಿಸಿಕೊಂಡಿದ್ದಾರೆ ಎಂದರು.


ವಿದ್ಯಾರ್ಥಿಗಳು ಪರಿಸರ ಪ್ರಕೃತಿ ಸಂರಕ್ಷಣೆಯಲ್ಲಿ ಸಹ ಆಸಕ್ತಿ ಹೆಚ್ಚಿಸಿಕೊಳ್ಳಬೇಕು. ಆಧುನಿಕ ಅಭಿವೃದ್ಧಿಯಿಂದ ಮಾಲಿನ್ಯ ಹೆಚ್ಚುತ್ತಿದೆ. ಈಗಲೇ ಬೀದರನಲ್ಲಿ 33 ಡಿಗ್ರಿ ಉಷ್ಣತೆ ಇದೆ.

ದೆಹಲಿಯಲ್ಲಿ ಕೆಲವೊಮ್ಮೆ 50 ಡಿಗ್ರಿ ಆಗಿದೆ.. ಓಝೋನ್ ಪರರ ರಕ್ಷಣೆ ಮಹತ್ವದ್ದಾಗಿದೆ. ಆದ್ದರಿಂದ ಗಿಡ ಮರಗಳನ್ನು ಬೆಳೆಸಬೇಕೆಂದು ಸಚಿವ ಈಶ್ವರ ಖಂಡ್ರೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು.


ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಮಹ್ಮದ ಗೌಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಪ್ರಯಾಣದ ಸಂಧರ್ಭದಲ್ಲಿ ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು ಸಾಂದರ್ಭಿಕ ಚಿತ್ರ.

ಬೆಂಗಳೂರು.10.ಆಗಸ್ಟ್.25:- ನಮ್ಮ ಮೆಟ್ರೋ  ರೈಲು ಉದ್ಘಾಟನಕೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ಮಾಡಿದ್ದಾರೆ " ಹಳದಿ ಮಾರ್ಗಕ್ಕೆ ಇಂದು ಚಾಲನೆ…

5 hours ago

ಹಳದಿ ಮೆಟ್ರೋ ನಾಳೆಯಿಂದ ಸಂಚಾರ ಪ್ರಾರಂಭ.

ಬೆಂಗಳೂರು.10.ಆಗಸ್ಟ್.25:- ಇಂದು ಪ್ರಧಾನಿ ನರೇಂದ್ರ ಮೋದಿಆರ್‌.ವಿ. ರಸ್ತೆ-ಬೊಮ್ಮಸಂದ್ರ ಹಳದಿ ಮಾರ್ಗಕ್ಕೆ  ಹಸಿರು ನಿಶಾನೆ ತೋರಿಸಿದ ಬಳಿಕ ಉದ್ಘಾಟನಾ ಕಾರ್ಯಕ್ರಮದ ನಂತರ…

5 hours ago

ಗೃಹಲಕ್ಷ್ಮೀ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : ಒಟ್ಟಿಗೆ 2 ಕಂತಿನ 4,000 ರೂ. ಖಾತೆಗೆ ಜಮೆ.!

ಬೆಂಗಳೂರು.10.ಆಗಸ್ಟ್.25:- ರಾಜ್ಯ ಸರ್ಕಾರ ರಾಜ್ಯದ ಮಹಿಳೆಯರಿಗೆ ಗೃಹಲಕ್ಷ್ಮೀ ಯೋಜನೆಯ 2025-26ನೇ ಸಾಲಿನ 3ನೇ ಕಂತಿನ ಹಣ ಬಿಡಗುಡೆಯಾಗಿದ್ದು, ಇದೀಗ ಜುಲೈ…

6 hours ago

ರಾಜ್ಯ ಸರ್ಕಾರದಿಂದ: ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…

11 hours ago

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…

11 hours ago

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) ದೊಡ್ಡ ಬದಲಾವಣೆಯನ್ನ ಮಾಡಲು ನಿರ್ಧರಿಸಿದೆ.

ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…

12 hours ago