ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ ಟಿ20 ಕ್ರಿಕೆಟ್ನಲ್ಲಿ ಗುಜರಾತ್ ಟೈಟಾನ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 8 ವಿಕೆಟ್ಗಳಿಂದ ಸೋಲಿಸಿತು. ಗುಜರಾತ್ ಟೈಟಾನ್ಸ್ ತಂಡವು 17.5 ಓವರ್ಗಳಲ್ಲಿ ಎರಡು ವಿಕೆಟ್ಗಳನ್ನು ಕಳೆದುಕೊಂಡು 170 ರನ್ಗಳ ಗುರಿಯನ್ನು ಸುಲಭವಾಗಿ ತಲುಪಿತು.
ಗುಜರಾತ್ ಟೈಟಾನ್ಸ್ ಪರ ಜೋಸ್ ಬಟ್ಲರ್ 39 ಎಸೆತಗಳಲ್ಲಿ ಅಜೇಯ 73 ರನ್ ಗಳಿಸುವ ಮೂಲಕ ಅಗ್ರ ಸ್ಕೋರರ್ ಎನಿಸಿಕೊಂಡರು. ಇದಕ್ಕೂ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ನಿಗದಿತ 20 ಓವರ್ಗಳಲ್ಲಿ 8 ವಿಕೆಟ್ಗಳಿಗೆ 169 ರನ್ ಗಳಿಸಿತು. ಗುಜರಾತ್ ಪರ ಮೊಹಮ್ಮದ್ ಸಿರಾಜ್ ಅತಿ ಹೆಚ್ಚು 3 ವಿಕೆಟ್ಗಳನ್ನು ಕಬಳಿಸಿದರು. ಅವರನ್ನು ಪಂದ್ಯಶ್ರೇಷ್ಠ ಎಂದು ಘೋಷಿಸಲಾಯಿತು.