ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜಿ ಮತ್ತು ಡಿಸಿಎಂ ಡಿಕೆಶಿ ರಹಸ್ಯ ಮಾತುಕತೆ.!

ಬೆಂಗಳೂರು.04.ಮಾರ್ಚ್‌.25: – ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕೆ ಬರುವು ಸಮಯ್ಕೆ ಅಧಿಕಾರ ಹಂಚಿಕೆ ಕುರಿತು ಗುಸು ಗುಸು ಚರ್ಚೆ ನಡೆಯುತ್ತಿರುವ ಹೊತ್ತಲಿ ಡಿ ಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ಮಾಜಿ ಸಿಎಂ ವೀರಪ್ಪ ಮೊಯ್ಲಿ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಕಾರಣವಾಗಿದೆ.

ವೀರಪ್ಪ ಮೊಯ್ಲಿ ಹೇಳಿಕೆ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು ಇಂದು “ಮಂಗಳವಾರ” ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆ ಅವರನ್ನ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಭೇಟಿ ಮಾಡಿ ಚರ್ಚೆ ನಡೆಸಿರುವುದು ಹಲವು ಪ್ರಶ್ನೆಗಳು ಹುಟ್ಟುವಂತೆ ಮಾಡಿದೆ.

ಪಕ್ಷ ಸಂಘಟನೆ, ಶಿಸ್ತುಪಾಲನೆ, ನೂತನ ಕಚೇರಿಗಳ ನಿರ್ಮಾಣ ಹಾಗೂ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಂಬಂಧಪಟ್ಟಂತೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆ ಅವರ ಮಾತುಕತೆ ನಡೆಸಿರುವುದಾಗಿ ಮೂಲಗಳು ತಿಳಿಸಿವೆ.

ಇನ್ನು ಸಚಿವ ಸತೀಶ್‌ ಜಾರಕಿಹೊಳಿ, ಪರಮೇಶ್ವರ್‌ರವರು ಪ್ರತ್ಯೇಕ ಸಭೆ ಹಾಗೂ ಗುಂಪುಗಾರಿಕೆ ಮೂಲಕ ನಾಯಕತ್ವದ ಕುರಿತಂತೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದ್ದಾರೆ.

ಈ ಬಗ್ಗೆ ಹಲವು ಬಾರಿ ಎಚ್ಚರಿಕೆ ನೀಡಿದ್ದರೂ ಇವರ್ಯಾರೂ ಸೊಪ್ಪು ಹಾಕುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರಿಗೆ ತಿಳಿ ಹೇಳಬಹುದು ಎಂಬ ನಿರೀಕ್ಷೆಗಳು ಹುಸಿಯಾಗಿವೆ. ಸಚಿವ ಕೆ.ಎನ್‌.ರಾಜಣ್ಣ ನೇರವಾಗಿ ಡಿ.ಕೆ.ಶಿವಕುಮಾರ್‌ ವಿರುದ್ಧ ಹೇಳಿಕೆಗಳನ್ನು ನೀಡುವ ಮೂಲಕ ಶಿಸ್ತು ಉಲ್ಲಂಘನೆ ಮಾಡುತ್ತಿರುವುದು ಜಗಜ್ಜಾಹೀರಾಗಿದ್ದು ಈ ಕುರಿತು ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

ಇನ್ನೂ ಸಚಿವರಿಗೆ ಕಡಿವಾಣ ಇಲ್ಲದಂತಾಗಿ ಶಿಸ್ತು ಮರೀಚಿಕೆಯಾಗಿದೆ. ಹೀಗಾಗಿ ಡಿ.ಕೆ.ಶಿವಕುಮಾರ್‌ರವರು ಇಂದು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಸಚಿವರ ನಡವಳಿಕೆಗಳಿಗೆ ಕಡಿವಾಣ ಹಾಕಲು ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಶಿವರಾತ್ರಿ ಹಬ್ಬದ ಆಚರಣೆ ಸಂದರ್ಭದಲ್ಲಿ ತಮಿಳುನಾಡಿನಲ್ಲಿ ಈಶಾ ಫೌಂಡೇಶನ್‌ನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಡಿ.ಕೆ.ಶಿವಕುಮಾರ್‌ ವಿರುದ್ಧ ಆಕ್ಷೇಪಗಳು ಕೇಳಿಬಂದಿವೆ. ಈ ಕುರಿತು ಡಿ.ಕೆ.ಶಿವಕುಮಾರ್‌ ರವರು ಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿ ಮಾಡಿ ಸುದೀರ್ಘ ವಿವರಣೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಕುರಿತು ಮಾಧ್ಯಮಗಳ ಪ್ರಶ್ನೆಗೆ ಡಿ ಕೆ ಶಿವಕುಮಾರ್‌ ಅವರು ಉತ್ತರಿಸಿದ್ದು, ನಾನು ಖರ್ಗೆ ಅವರನ್ನು ಭೇಟಿ ಮಾಡದೇ ಬಿಜೆಪಿ ಕಚೇರಿಗೆ ಭೇಟಿ ನೀಡಲೇ?. ಅವರು ರಾಷ್ಟ್ರದ ಅಧ್ಯಕ್ಷರು, ನಾನು ರಾಜ್ಯದ ಅಧ್ಯಕ್ಷ. ಅವರು ನಮ್ಮ ರಾಜ್ಯಕ್ಕೆ ಬಂದಾಗ ಹೋಗಿ ಭೇಟಿ ಮಾಡಿ ಗೌರವ ನೀಡುವುದು ನಮ್ಮ ಕೆಲಸ.

ಪಕ್ಷದ ವಿಚಾರಗಳು, ನೂತನ ಕಾಂಗ್ರೆಸ್ ಕಚೇರಿಗೆ ಗುದ್ದಲಿ ಪೂಜೆ ಮಾಡುತ್ತಿದ್ದು, ಈ ತಿಂಗಳಿನಲ್ಲಿಯೇ ದಿನಾಂಕ ನೀಡಿ ಎಂದು ಮನವಿ ಮಾಡಲು ಹೋಗಿದ್ದೆ ಎಂದು ಹೇಳಿದರು.

ಸಂದರ್ಭ ಬೇರೆ ರೀತಿಯಿದ್ದು, ಯಾವುದೇ ಭೇಟಿಗೂ ನಾನಾ ಅರ್ಥಗಳು ಉಂಟಾಗುತ್ತವೆ ಎಂದು ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಉತ್ತರಿಸಿದ್ದು, ಯಾವ ರೀತಿ ಬೇಕಾದರೂ ಅರ್ಥ ಮಾಡಿಕೊಳ್ಳಲಿ, ಸಾವಿರ ಚರ್ಚೆ ಮಾಡಲಿ ಎಂದು ಹೇಳಿದರು.

ಇನ್ನೂ ಆದ್ಯತೆ ಮೇರೆಗೆ ಗುತ್ತಿಗೆದಾರರ ಬಿಲ್ ಗಳನ್ನು ಪಾವತಿ ಮಾಡಲಾಗುವುದು. ಸಣ್ಣ, ಸಣ್ಣ ಬಿಲ್ ಗಳನ್ನು ಪಾವತಿ ಮಾಡುವುದಾಗಿ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳಿಗೆ ಆಶ್ವಾಸನೆ ನೀಡಿದ್ದು, ಹಣ ಬಂದ ತಕ್ಷಣ ಪಾವತಿ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಗುತ್ತಿಗೆದಾರರ ಬಿಲ್ ಬಾಕಿ ವಿಚಾರ ಹಾಗೂ ಗುತ್ತಿಗೆದಾರರ ಸಂಘದ ಪದಾಧಿಕಾರಿಗಳ ಭೇಟಿ ಕುರಿತು ಮಾತನಾಡಿ, ಬಿಜೆಪಿ ಕಾಲದಲ್ಲಿ ಅವರು ನನ್ನ ಇಲಾಖೆಯೊಂದರಲ್ಲಿಯೇ ರೂ.1.20 ಲಕ್ಷ ಕೋಟಿ ಮೊತ್ತದ ಕಾಮಗಾರಿಗಳಿಗೆ ಆದೇಶ ನೀಡಿ ಹೋಗಿದ್ದು ಕೆಲಸ ನಡೆಯುತ್ತಿದೆ.

ಪ್ರಸ್ತುತ ರೂ.6 ಸಾವಿರ ಕೋಟಿಯಷ್ಟು ಮಾತ್ರ ಬಿಲ್ ನೀಡಲು ಅವಕಾಶವಿದೆ. ಕೇಂದ್ರದಿಂದ 5,300 ಕೋಟಿ ಕೊಡುತ್ತೇವೆ ಎಂದು ಹೇಳಿ ಕೊಟ್ಟಿಲ್ಲ. ಗುತ್ತಿಗೆದಾರರು ಅವರ ನೋವನ್ನು ಹೇಳಿಕೊಂಡಿದ್ದಾರೆ ಎಂದು ತಿಳಿಸಿದರು.

ಈ ಹಿನ್ನಲೆಯಲ್ಲಿ ಅಧಿಕಾರ ಹಂಚಿಕ್ಕೆ ಡಿಸಿಎಂ ಡಿಕೆಶಿ ಮತ್ತು ಸಿಎಂ ಸಿದ್ದ್ರಮಯಾ ಅವರು 30 ತಿಂಗಳು ಅಧಿಕಾರ್ ಓಪಂದ್ ಸುದ್ಧಿ ಗೋಷ್ಠಿ ನಡೆದೀತು.

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

9 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

10 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

10 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

11 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

12 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

13 hours ago