ಬೆಂಗಳೂರು.01.ಜೂನ.25:-ರಾಜ್ಯಾದ್ಯಂತ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ `ಕೋವಿಡ್ ಮಾರ್ಗಸೂಚಿ’ ಪ್ರಕಟ : ಮಕ್ಕಳಿಗೆ ಜ್ವರ, ಕೆಮ್ಮು,ನೆಗಡಿ ಇದ್ರೆ ರಜೆ ಘೋಷಣೆ.!
ಕೋವಿಡ್-19 ಸೋಂಕು ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯು ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯಾದ್ಯಂತ ಪ್ರಸ್ತುತ ಸಾಲಿನ ಶೈಕ್ಷಣಿಕ ವರ್ಷವು ದಿನಾಂಕ : 29.05.2025 ರಿಂದ ಪುನರಾರಂಭಗೊಂಡಿದ್ದು, ಶಾಲೆಗಳಲ್ಲಿ ದೈನಂದಿನ ಶಾಲಾ ಚಟುವಟಿಕೆಗಳು ಪ್ರಾರಂಭವಾಗಿರುತ್ತದೆ. ಪ್ರಸ್ತುತ ರಾಜ್ಯದಲ್ಲಿ ಇರುವ ಕೋವಿಡ್-19 ಪರಿಸ್ಥಿತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೆಲವೊಂದು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿರುತ್ತದೆ. ಉಲ್ಲೇಖಿತ ಪತ್ರದಲ್ಲಿ ಶಾಲೆಗಳಲ್ಲಿ ಕೈಗೊಳ್ಳಬೇಕಾದ ಮುಂಜಾಗೃತ ಕ್ರಮಗಳ ಕುರಿತು ಈಗಾಗಲೇ ಸೂಚನೆಗಳನ್ನು ನೀಡಲಾಗಿರುತ್ತದೆ. ಮುಂದುವರೆದು, ಶಾಲಾ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ ಈ ಕೆಳಕಂಡ ಸೂಚನೆಗಳನ್ನು ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಲ್ಲಿ ತಪ್ಪದೇ ಪಾಲಿಸುವಂತೆ ಸೂಚಿಸಲಾಗಿದೆ
1) ಶಾಲಾ ಮಕ್ಕಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಮಕ್ಕಳನ್ನು ಶಾಲೆಗೆ ಕಳುಹಿಸದೇ, ವೈದ್ಯರ ಸಲಹೆಯಂತೆ ಸೂಕ್ತ ಚಿಕಿತ್ಸೆ ಹಾಗೂ ಆರೈಕಾ ಕ್ರಮಗಳನ್ನು ಪಾಲಿಸುವುದು.
2) ಸದರಿ ಲಕ್ಷಣಗಳು ಸಂಪೂರ್ಣವಾಗಿ ಗುಣಮುಖವಾದ ನಂತರವೇ ಮಕ್ಕಳನ್ನು ಶಾಲೆಗೆ ಕಳುಹಿಸುವುದು.
3) ಜ್ವರ, ಕೆಮ್ಮು, ನೆಗಡಿ ಮತ್ತು ಇತರೆ ಲಕ್ಷಣಗಳಿರುವ ಮಕ್ಕಳು ಶಾಲೆಗೆ ಬಂದಲ್ಲಿ, ಪೋಷಕರಿಗೆ ಮಾಹಿತಿಯನ್ನು ನೀಡಿ, ಅಂತಹ ಮಕ್ಕಳನ್ನು ಸುರಕ್ಷಿತವಾಗಿ ಪೋಷಕರೊಂದಿಗೆ ಮನೆಗೆ ಕಳುಹಿಸುವುದು.
4) ಶಾಲಾ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಲ್ಲಿ ಜ್ವರ, ಕೆಮ್ಮು, ನೆಗಡಿ ಹಾಗೂ ಇತರೆ ಲಕ್ಷಣಗಳು ಕಂಡು ಬಂದಲ್ಲಿ, ಅಗತ್ಯ ಮುಂಜಾಗೃತ ಕ್ರಮಗಳನ್ನು ಪಾಲಿಸುವುದು.
5) ಶಾಲಾ ಅವಧಿಯಲ್ಲಿ ಮುಂಜಾಗೃತಾ ಕ್ರಮಗಳಾದ ಸಾಮಾನ್ಯ ಸ್ವಚ್ಛತೆಯೊಂದಿಗೆ ಪ್ರಮುಖವಾಗಿ ಕೈಗಳ ಸ್ವಚ್ಚತೆ ಮತ್ತು ಕೆಮ್ಮುವಾಗ. ಸೀನುವಾಗ ಎಚ್ಚರ ವಹಿಸಿ Covid-19 Appropirate Behaviour (CAB) ನ ಪಾಲನೆಯನ್ನು ಖಚಿತಪಡಿಸಿಕೊಳ್ಳುವುದು.
ಈ ಮೇಲ್ಕಂಡ ಎಲ್ಲಾ ಕ್ರಮಗಳೊಂದಿಗೆ ಸರ್ಕಾರದಿಂದ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸುತ್ತೋಲೆ, ಮಾರ್ಗದರ್ಶನ ಹಾಗೂ ಮುಂಜಾಗೃತ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು.
ಕೊಪ್ಪಳ.05.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ ಅತಿಥಿ ಅತಿಥಿ ಉಪನ್ಯಾಸಕರಿಗೆ ಅರ್ಹತೆ ಕಂಟಕ. ಈಗಾಗಲೇ ಕಳೆದ…
ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…