ಎಣ್ಣೆಕಾಳು ಯೋಜನೆಯಡಿ ಯಂತ್ರೋಪಕರಣ ಖರೀದಿಗೆ ಸಹಾಯಧನ: ಅರ್ಜಿ ಆಹ್ವಾನ

ಕೊಪ್ಪಳ.24.ಜುಲೈ 25: 2025-26 ನೇ ಸಾಲಿಗೆ ರಾಷ್ಟಿçÃಯ ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳಿAದ ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟಿçÃಯ ಖಾದ್ಯ ತೈಲ ಅಭಿಯಾನದ ಎಣ್ಣೆಕಾಳು ಯೋಜನೆಯಡಿ ಪ್ರಾಥಮಿಕ  ಮತ್ತು  ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಘಟಕಕ್ಕೆ ಮೂಲ ಸೌಕರ್ಯ ಕಲ್ಪಿಸಲು ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು ಈ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.


ಎಣ್ಣೆಕಾಳು ಕೊಯ್ಲೋತ್ತರ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಖರೀದಿಸಲು ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು, ರೈತ ಉತ್ಪಾದಕ ಸಂಘಗಳು ವಿಸ್ತೃತ ಯೋಜನಾ ವರದಿಯೊಂದಿಗೆ ಅರ್ಜಿ ಸಲ್ಲಿಸಬಹುದು. ಯೋಜನಾ ವರದಿಯ ಶೇ.33 ರಷ್ಟು ಅಥವಾ 9.99 ಲಕ್ಷ ರೂ. ಮೀರದಂತೆ ಸಹಾಯಧನ ಒದಗಿಸಲಾಗುವುದು. ಈ ಘಟಕದಲ್ಲಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆ ಪರಿಗಣಿಸಲಾಗುವುದಿಲ್ಲ.


ಆಸಕ್ತರು ತಮಗೆ ಸಂಬAಧಪಟ್ಟ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯಲ್ಲಿ ಆಗಸ್ಟ್ 05 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ಪರಿಶೀಲಿಸಿ ಅರ್ಹ  ಫಲಾನುಭವಿಯನ್ನು ಕಾರ್ಯಕಾರಿ ಸಮಿತಿಯಲ್ಲಿ ಆಯ್ಕೆ ಮಾಡಲಾಗುವುದು ಎಂದು ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

prajaprabhat

Recent Posts

ವಿವಿಧ ಸ್ಪರ್ಧಾತ್ಮಕ ಪರೀಕ್ಷೆ ಪೂರ್ವ ತರಬೇತಿ: ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ.

ಬೀದರ.02.ಆಗಸ್ಟ.25:- ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಯು.ಪಿ.ಎಸ್.ಸಿ ನಾಗರೀಕ ಸೇವೆ. ಕೆ.ಎ.ಎಸ್ ಗೆಜೆಟೆಡ್…

2 hours ago

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

7 hours ago

ಅರಿವು ಶೈಕ್ಷಣಿಕ ಸಾಲ ಯೋಜನೆಯುಡಿ ಅರ್ಜಿ ಆಹ್ವಾನ

ಬೀದರ.02.ಆಗಸ್ಟ್.25- ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ…

8 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

8 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

8 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

9 hours ago