ಎರಡು ಪ್ರತಿಷ್ಠಿತ ಮಹಾವಿದ್ಯಾಲಯಗಳ ಮಧ್ಯ ತಿಳುವಳಿಕೆ ಒಪ್ಪಂದ

ಕಲಬುರಗಿ.07.ಆಗಸ್ಟ್.25:- ಶೈಕ್ಷಣಿಕ ಸಹಕಾರವನ್ನು ಬೆಳೆಸುವ ಮತ್ತು ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಕಲಬುರಗಿಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗ ಮತ್ತು  ಸರ್ಕಾರಿ ಪದವಿ ಕಾಲೇಜಿನ (ಸ್ವಾಯತ್ತ) ಹಿಂದಿ ವಿಭಾಗಗಳ ಮಧ್ಯೆ  ಗುರುವಾರ ದಿನಾಂಕ 07.08.2025ರಂದು  ತಿಳುವಳಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದವು.

2025-26 ಶೈಕ್ಷಣಿಕ ವರ್ಷದಿಂದ 2029-30 ರವರೆಗೆ ಐದು ವರ್ಷಗಳವರೆಗೆ ಮಾನ್ಯವಾಗಿರುವ ಈ ಒಪ್ಪಂದವು, ಎರಡು ಸಂಸ್ಥೆಗಳ ನಡುವೆ ಸಹಯೋಗದ ಕಾರ್ಯಕ್ರಮಗಳು, ಜಂಟಿ ಸಂಶೋಧನಾ ಯೋಜನೆಗಳು ಮತ್ತು ವಿದ್ಯಾರ್ಥಿ ವಿನಿಮಯ ಉಪಕ್ರಮಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಈ ಒಪ್ಪಂದವು ಪದವಿ ವಿದ್ಯಾರ್ಥಿಗಳ ವಿನಿಮಯವನ್ನು ಸುಗಮಗೊಳಿಸುತ್ತದೆ, ಇದರಿಂದಾಗಿ ಅವರು ತಮ್ಮ ಶೈಕ್ಷಣಿಕ ಪ್ರಗತಿಗೆ ಅಡ್ಡಿಯಾಗದಂತೆ ಎರಡೂ ಸಂಸ್ಥೆಗಳಲ್ಲಿ ಸಮಯ ಕಳೆಯಲು ಅನುವು ಮಾಡಿಕೊಡುತ್ತದೆ.

ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ರಾಜೇಂದ್ರ ಕೊಂಡಾ ಮತ್ತು ಸರ್ಕಾರಿ ಪದವಿ ಕಾಲೇಜಿನ (ಸ್ವಾಯತ) ಪ್ರಾಂಶುಪಾಲರಾದ ಡಾ. ಸವಿತಾ ತಿವಾರಿ ಒಪ್ಪಂದ ಪತ್ರದ ದಾಖಲೆಗಳಿಗೆ ಸಹಿ ಹಾಕಿದರು.

ಈ ಸಂದರ್ಭದಲ್ಲಿ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಪ್ರೇಮಚಂದ ಚವ್ಹಾಣ, ವಿಭಾಗದ ಉಪನ್ಯಾಸಕರಾದ ಕವಿತಾ ಠಾಕೂರ್ ಮತ್ತು ಸುಷ್ಮಾ ಕುಲಕರ್ಣಿ, ಸರಕಾರಿ ಪದವಿ ಕಾಲೇಜಿನ ಹಿಂದಿ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಂಕರ ರಾಠೋಡ ಹಾಗೂ ಡಾ. ಅನಸೂಯಾ ಗಾಯಕವಾಡ ಅವರು ಉಪಸ್ಥಿತರಿದ್ದರು.

ಇದೆ ಸಂದರ್ಭದಲ್ಲಿ ಶಿವಲೀಲಾ ಧೋತ್ರ, ಡಾ. ಶ್ರೀದೇವಿ ಸರಡಗಿ, ಡಾ. ನಾಗರತ್ನ, ಕವಿತಾ ಅಶೋಕ, ಗೀತಾ ಪಾಟೀಲ, ಡಾ. ಮೋಹಸೀನಾ ಫಾತಿಮಾ ಹಾಗೂ ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಉಪನ್ಯಾಸಕರು ಮತ್ತು ಹಿಂದಿ ವಿಭಾಗದ ವಿದ್ಯಾರ್ಥಿಗಳು ಹಾಜರಿದ್ದರು.

prajaprabhat

Recent Posts

ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ

ಬೀದರ.07.ಆಗಸ್ಟ್.25:- ಡಾ.ಬಿ.ಆರ್. ಅಂಬೇಡ್ಕರ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ಭೋವಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ…

1 hour ago

ಬ್ಯಾಕ್ ಲಾಗ್’ ಹುದ್ದೆಗಳ ಭರ್ತಿ : ಸರ್ಕಾರದಿಂದ ಆದೇಶ

ಬೆಂಗಳೂರು.07.ಆಗಸ್ಟ್.25:- ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರೌಢಶಾಲೆ ಮತ್ತು ಪ್ರಾಥಮಿಕ ಶಾಲೆಗಳಲ್ಲಿನ ನೇರ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್ ಲಾಗ್…

7 hours ago

ಜಾರ ಲಂಬಾಣಿ  ಸಮಾಜಕ್ಕೆ  ಶೇ೬ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಬಸವರಾಜ ಪವಾರ ಆಗ್ರಹ

ಬೀದರ.07.ಆಗಸ್ಟ್.25:- ಬಂಜಾರ ಲಂಬಾಣಿ  ಸಮಾಜಕ್ಕೆ  ಈ ಹಿಂದೆ ಬಿಜೆಪಿ ಬಸವರಾಜ ಬೊಮ್ಮಾಯಿ ನೇತೃತ್ವ ಸರ್ಕಾರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳಮಾಡಿ…

7 hours ago

ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ- ಸಚಿವ ಈಶ್ವರ ಖಂಡ್ರೆ

ಬೀದರ.07.ಆಗಸ್ಟ್.25:- ಜನರಿಗೆ ಧ್ವನಿ ತಂದು ಕೊಟ್ಟ ಶಕ್ತಿ ಮಾಧ್ಯಮಗಳಿಗೆ ಸಲ್ಲುತ್ತದೆ ಎಂದು ರಾಜ್ಯದ ಅರಣ್ಯ, ಪರಿಸರ ಹಾಗೂ ಜೀವಶಾಸ್ತç ಮತ್ತು…

7 hours ago

ವಿಕ್ಟೋರಿಯಾ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ ನೀಡಿದ ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರು

ರಾಯಚೂರು.07.ಆಗಸ್ಟ್.25:- ರಾಯಚೂರು ಜಿಲ್ಲೆಯ ಹಟ್ಟಿಯಲ್ಲಿ ನಿಗದಿಯಾಗಿದ್ದ ಮುಖ್ಯಮಂತ್ರಿಗಳ ಪ್ರವಾಸವು ಮಳೆಯಿಂದಾಗಿ ದಿಢೀರ್ ರದ್ದಾಗಿದ್ದರಿಂದ, ಬೆಂಗಳೂರಿನಲ್ಲಿ ಆಗಸ್ಟ್ 6ರಂದು ವಿಕ್ಟೋರಿಯಾ ಆಸ್ಪತ್ರೆಗೆ…

8 hours ago

ಶಾಸಕರಾದ ಬಸನಗೌಡ ದದ್ದಲ್ ಗ್ರಾಮೀಣ ಪ್ರದೇಶದಲ್ಲಿ ಸಂಚಾರ; ಏತ ನೀರಾವರಿ ಕಾಮಗಾರಿ ವೀಕ್ಷಣೆ

ರಾಯಚೂರು.07.ಆಗಸ್ಟ್ .25: ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್…

8 hours ago