ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡದಲ್ಲಿ ಮುದ್ರಿಸುವುದು ಕಡ್ಡಾಯ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ.!

ಬೆಂಗಳೂರು : ರಾಜ್ಯದಲ್ಲಿ ಎಲ್ಲಾ ಉತ್ಪನ್ನಗಳ ಮೇಲೆ ಕನ್ನಡ ಭಾಷೆಯಲಿ ಮುದ್ರಿಸುವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.ಕನ್ನಡ ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ ಬೆಳವಣಿಗೆಯಾಗಬೇಕಾದರೆ ಆ ನೆಲದಲ್ಲಿನ ಉತ್ಪಾದನೆ, ಮಾರುಕಟ್ಟೆ, ವ್ಯವಹಾರಗಳು ಸ್ಥಳೀಯ ಭಾಷೆಯಲ್ಲಿರಬೇಕು.

ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ಮತ್ತು ಕನ್ನಡಿಗರಿಗೆ ಜೀವನದ ಎಲ್ಲಾ ಕ್ಷೇತ್ರಗಳಲ್ಲಿ ಉತ್ತಮ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರವು ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ನ್ನು ದಿನಾಂಕ: 12.03.2024 ರಿಂದ ಜಾರಿಗೆ ತಂದಿರುತ್ತದೆ. ಸದರಿ ಅಧಿನಿಯಮದ ಕಲಂ 17 (7)ರಲ್ಲಿ ಸಾಧ್ಯವಾದಷ್ಟು ಮಟ್ಟಿಗೆ ರಾಜ್ಯದೊಳಗೆ ತಯಾರಿಸಿದ ಮತ್ತು ಮಾರಾಟವಾಗುವ ಎಲ್ಲಾ ಕೈಗಾರಿಕಾ ಮತ್ತು ಇತರೆ ಗ್ರಾಹಕ ಉತ್ಪನ್ನಗಳ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳು ಯಾವುದಾದರೂ ಇದ್ದಲ್ಲಿ ಯಾವುದೇ ಇತರ ಭಾಷೆಯ ಜೊತೆಗೆ ಕನ್ನಡದಲ್ಲಿ ಇರತಕ್ಕದ್ದೆಂದು ತಿಳಿಸಲಾಗಿದೆ.


ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ತಯಾರಾಗುವ ಎಲ್ಲಾ ಕೈಗಾರಿಕೆ ಮತ್ತು ಗ್ರಾಹಕ ಉತ್ಪನ್ನಗಳ ಮೇಲೆ ಹೆಸರು ಮತ್ತು ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಇತರ ಭಾಷೆಗಳ ಜೊತೆಗೆ ಕನ್ನಡದಲ್ಲಿಯೂ ಕಡ್ಡಾಯವಾಗಿ ಮುದ್ರಿಸುವಂತೆ ಈ ಮೂಲಕ ಸೂಚಿಸಲಾಗಿದೆ ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022ರ ಕಲಂ 9ರಡಿ ಗೊತ್ತುಪಡಿಸಿದ ಜಾರಿ ಪ್ರಾಧಿಕಾರಗಳು ಈ ಸೂಚನೆಗಳನ್ನು ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಎಲ್ಲಾ ಕೈಗಾರಿಕಾ ಮತ್ತು ಗ್ರಾಹಕ ವಸ್ತುಗಳ ಉತ್ಪನ್ನದಾರರು ಕಟ್ಟು ನಿಟ್ಟಾಗಿ ಅನುಷ್ಠಾನಗೊಳಿಸುವ ಬಗ್ಗೆ ಮೇಲ್ವಿಚಾರಣೆಯನ್ನು ಮಾಡುವಂತೆ ಸೂಚಿಸಲಾಗಿದೆ.

prajaprabhat

Recent Posts

UGC-NET ಜೂನ್ 2025 ರ ಪರೀಕ್ಷಾ ವೇಳಾಪಟ್ಟಿ ಮತ್ತು  ನೋಂದಣಿ

ಹೊಸ ದೆಹಲಿ.08.ಜೂನ್.25:- ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) (1) ಜೂನಿಯರ್ ರಿಸರ್ಚ್ ಫೆಲೋಶಿಪ್ ಪ್ರಶಸ್ತಿ ಮತ್ತು ಸಹಾಯಕ ಪ್ರಾಧ್ಯಾಪಕರಾಗಿ ನೇಮಕಾತಿ',…

3 hours ago

ಬೀದರ್‌’ನಲ್ಲಿ ಮೀನು ನುಂಗಿ ರೋಗ ಗುಣಮುಖ ವಿಶಿಷ್ಟ ಆಚರಣೆ

ಬೀದರ.08.ಜೂನ್.25:- ಇಂದು ಮುಂಗಾರು ಮಳೆ ಆರಂಭವಾಗುವ ಈ ದಿನದಂದು ಬೀದರ್ ಜಿಲ್ಲೆಯ ಹಳೆಯ ನಗರ ಮತ್ತು ಹುಮ್ನಾಬಾದ್ ಪಟ್ಟಣದಲ್ಲಿ ಪ್ರತಿ…

5 hours ago

ಉತ್ತರಾಖಂಡದಲ್ಲಿ ಸೇನಾ ಸನ್ನದ್ಧತೆಯನ್ನು ಪರಿಶೀಲಿಸಿದ ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ಐಬೆಕ್ಸ್ ತರಾನಾ 88.4 ಎಫ್‌ಎಂ ಅನ್ನು ಉದ್ಘಾಟಿಸಿದರು.

ಉತ್ತರಾಖಂಡದ ಗರ್ವಾಲ್‌ನ ಮುಂಚೂಣಿ ಪ್ರದೇಶಗಳಲ್ಲಿ ನಿಯೋಜಿಸಲಾದ ಪಡೆಗಳ ಕಾರ್ಯಾಚರಣೆ ಮತ್ತು ಆಡಳಿತಾತ್ಮಕ ಸನ್ನದ್ಧತೆಯನ್ನು ಪರಿಶೀಲಿಸಲು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ…

7 hours ago

ಮಿಥಿ ನದಿ ಹೂಳೆತ್ತುವ ಹಗರಣಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ದಾಳಿ ನಡೆಸಿದೆ.

ಮಿಥಿ ನದಿ ಹೂಳು ತೆಗೆಯುವ ಹಗರಣಕ್ಕೆ ಸಂಬಂಧಿಸಿದ 65 ಕೋಟಿ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಟ ಡಿನೋ…

7 hours ago

ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಉತ್ತರ ರೈಲ್ವೆ ಪ್ರಾರಂಭಿಸಿದೆ

ಉತ್ತರ ರೈಲ್ವೆಯು ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್ ರೈಲುಗಳ ವಾಣಿಜ್ಯ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಜೂನ್ 6 ರಂದು…

7 hours ago

ಭೂಕುಸಿತದಿಂದ ಹಾನಿಗೊಳಗಾದ ಚಾಟೆನ್‌ನಿಂದ ಸಿಕ್ಕಿಬಿದ್ದ ಸ್ಥಳೀಯರು ಮತ್ತು ಟ್ಯಾಕ್ಸಿ ಚಾಲಕರನ್ನು ಸಿಕ್ಕಿಂ ಸರ್ಕಾರ ವಿಶೇಷ ಹೆಲಿಕಾಪ್ಟರ್ ಮೂಲಕ ರಕ್ಷಿಸಿದೆ

ಸಿಕ್ಕಿಂನಲ್ಲಿ, ಇಂದು ವಿಶೇಷ ಹೆಲಿಕಾಪ್ಟರ್ ಹಾರಾಟದ ಮೂಲಕ ಮಂಗನ್ ಜಿಲ್ಲೆಯ ಚಾಟೆನ್‌ನಿಂದ 28 ಜನರನ್ನು ಸ್ಥಳಾಂತರಿಸಲಾಗಿದೆ. ಸಿಕ್ಕಿಂ ಸರ್ಕಾರವು ಸಿಕ್ಕಿಬಿದ್ದ…

7 hours ago