ಎಲ್ಲ ಇಲಾಖೆಗಳು ಮಕ್ಕಳ ಹಕ್ಕು ರಕ್ಷಣೆಗೆ ಬದ್ಧರಾಗಲಿ-ಶಶಿಧರ ಕೋಸಂಬೆ



ಬೀದರ.17.ಫೆಬ್ರುವರಿ.25:-  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ವ್ಯಾಪ್ತಿಯ ಎಲ್ಲ ಇಲಾಖೆ ಅಧಿಕಾರಿಗಳು ಮಕ್ಕಳ ಹಕ್ಕು ಉಲ್ಲಂಘನೆಯಾದಲ್ಲಿ ತಕ್ಷಣವೇ ಸ್ಪಂದಿಸಿ ಮಕ್ಕಳ ಸ್ನೇಹಿಯಾಗಿ ಕಾರ್ಯನಿರ್ವಹಿಸಲಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಕರೆ ನೀಡಿದರು.


ಜಿಲ್ಲಾ ಪಂಚಾಯತನಲ್ಲಿಂದು ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡಳಿ, ಮಕ್ಕಳ ಅಭಿವೃದ್ಧಿ ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ರಕ್ಷಣಾ ಘಟಕ, ಬೀದರ ಆಶ್ರಯದಲ್ಲಿಂದ ಮಕ್ಕಳ ಹಕ್ಕು ರಕ್ಷಣೆ ಹಿನ್ನೆಲೆಯಲ್ಲಿ ಆಯೋಜಿಸಿದ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಾಲಯದಲ್ಲಿ ಅವರು ಮಾತನಾಡುತ್ತಿದ್ದರು.
ಮಕ್ಕಳ ಹಕ್ಕು ರಕ್ಷಣೆ ಹಾಗೂ ಉಲ್ಲಂಘನೆ ಪ್ರಕರಣಗಳ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಜಾಗೃತಿ ಹಾಗೂ ಸಂವಾದ ಕಾರ್ಯಕ್ರಮವನ್ನು ಯಶಸ್ವಿಯಾಗಿ ಹಮ್ಮಿಕೊಳ್ಳಲಾಗಿದೆ. ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಮಟ್ಟದ ಎಲ್ಲ ಅಧಿಕಾರಿಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಬದ್ಧರಾಗಬೇಕೆಂದು ಅವರು ತಿಳಿಸಿದರು.


ದೇಶದಲ್ಲಿ ಒಟ್ಟು ಜನಸಂಖ್ಯೆಯ ಒಟ್ಟು ಶೇ.40 ರಷ್ಟು ಮಕ್ಕಳಿದ್ದಾರೆ. ಪ್ರತಿ ಮಗುವಿನ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಕ್ಕಳ ರಕ್ಷಣೆಗಾಗಿ 12 ವಿವಿಧ ಕಾಯ್ದೆಗಳಿವೆ. ಪ್ರತಿ ಮಗುವಿನ ಮಕ್ಕಳ ಬಾಲ್ಯ ಜೀವನ ಸುಖ, ಸಂತೋಷ, ಗೌರವದಿಂದ ಜೀವಿಸುವುದು ಮಕ್ಕಳ ಹಕ್ಕು ಆಗಿದೆ. ಆದರೂ ಸಹ ಹಲವೆಡೆ ಮಕ್ಕಳ ಹಕ್ಕು ಉಲ್ಲಂಘನೆಯಾಗುತ್ತಿದೆ. ಬಾಲ್ಯ ವಿವಾಹ, ಬಾಲ ಕಾರ್ಮಿಕ ಪ್ರಕರಣಗಳು ಈಗಲೂ ಕಾಣುತ್ತೇವೆ. ವರದಿಯೊಂದರ ಪ್ರಕಾರ ದೇಶದಲ್ಲಿ ಒಂದು ನಿಮಿಷಕ್ಕೆ ಬಾಲ್ಯ ವಿವಾಹ ಆಗುತ್ತಿವೆ. 1.5 ಲಕ್ಷ ಬಾಲಕಿ ಗರ್ಭಿಣಿ ಈ ವರ್ಷ ದಾಖಲಾಗಿವೆ. 59 ಸಾವಿರ ಬಾಲ್ಯವಿವಾಹ ನಿಷೇಧ ಅಧಿಕಾರಿಗಳು ಇದ್ದರೂ ಸಹ ಇಂತಹ ಅನಿಷ್ಟ ಪದ್ದತಿಗಳು ಜಾರಿಯಲ್ಲಿರುವುದು ಶೋಚನೀಯ ಎಂದು ಕಳವಳ ವ್ಯಕ್ತಪಡಿಸಿದರು.


ಆಯೊಗವು ಮಕ್ಕಳ ರಕ್ಷಣೆಗೆ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕೋಸಂಬೆ ಹೇಳಿದರು. ಪ್ರತಿ ವಸತಿ ಶಾಲೆಯಲ್ಲಿ ಮಕ್ಕಳ ಸಲಹಾ ಪೆಟ್ಟಿಗೆ ತೆರೆಯುವಂತೆ ಸಂಬಂಧಿಸಿದ ಅಧಿಕಾರಿಗಳು ಅವರು ತಿಳಿಸಿದರು.


ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಮಾತನಾಡಿ, ಸಂವಿಧಾನದಲ್ಲಿ ಮಕ್ಕಳ ರಕ್ಷಣೆ ತಿಳಿಸಲಾಗಿ ಕಾನೂನು ಸೇವೆಯು ಸಹ ಮಕ್ಕಳ ಹಕ್ಕು ಉಲ್ಲಂಘನೆ ಹಾಗೂ ರಕ್ಷಣೆಗೆ ಕ್ರಮ ವಸಹಿಸಲಾಗಿದೆಯೆಂದರು.


ಮಕ್ಕಳ ಪರವಾಗಿ ಅನೇಕ ಕಾನೂನುಗಳಿದ್ದರೂ, ರಕ್ಷಣಾ ಘಟಕಗಳಿದ್ದರೂ ಸಹ ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಬೀದರ ಜಿಲ್ಲೆಯಲ್ಲಿ ಅನೇಕ ಬಾಲ್ಯವಿವಾಹ ತಡೆಯಲಾಗಿದೆ. ಅನೇಕ ಕಡೆ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ, ಮಕ್ಕಳಿಗೆ ಶಿಕ್ಷಣದ ಹಕ್ಕು ದೊರೆಯಬೇಕು, ಬಡತನ ನಿರುದ್ಯೋಗದಿಂದ ಅನೇಕ ಸಮಸ್ಯೆಗಳು ಉದ್ಭವವಾಗುತ್ತಿದೆ. ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಹ ದಾಖಲಾಗಿವೆ. ಮಕ್ಕಳ ಹಕ್ಕು ರಕ್ಷಣೆ ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿ ಎಂದರು.


ಮಕ್ಕಳೊಂದಿಗೆ ಜರುಗಿದ ಸಂವಾದಲ್ಲಿ ವಿದ್ಯಾರ್ಥಿಗಳು ಹೇಳಿದ ಸಮಸ್ಯೆಗಳಿಗೆ ಸ್ಥಳದಲ್ಲೇ ಬಗೆಹರಿಸಲಾಯಿತು. ಗಾದಗಿ ಶಾಲೆಯ ಸೋಹೇಲ್ ವಿದ್ಯಾರ್ಥಿ 1098 ಸಹಾಯವಾಣಿಗೆ ಕರೆ ಮಾಡಿದರೂ ತಕ್ಷಣ ಪ್ರತಿಕ್ರಿಯೆ ನೀಡಲಿಲ್ಲ ಎಂದು ತಿಳಿಸಿದ. ಕಾಡಗಾಂವ ಶಾಲೆಯ ವಿದ್ಯಾರ್ಥಿ ತಮ್ಮ ಶಾಲೆಯ ಹತ್ತಿರ ಬಸ್ ನಿಲ್ಲಿಸದ ಕಾರಣಕ್ಕೆ 1098ಕ್ಕೆ ಕರೆ ಮಾಡಿದಾಗ ನೀವು ಬಸ್ ಡಿಪೋಗೆ ಹೋಗಿ ತಿಳಿಸಿರಿ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಶಶಿಧರ ಕೋಸಂಬೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದಂತೆ ಶಾಲೆ ಹತ್ತಿರ ಬಸ್ ನಿಲ್ಲಿಸುವಂತೆ ರಸ್ತೆ ಸಾರಿಗೆ ಸಂಸ್ಥೆಯ ಅಧಿಕಾರಿಗೆ ಸೂಚಿಸಿದರು. ಧನ್ನೂರಿನ ವಿಜಯಲಕ್ಷ್ಮೀ ಬಾಲ್ಯವಿವಾಹ ಹಾಗೂ ಲಿಂಗ ತಾರತಮ್ಯ ಬಗ್ಗೆ ಪ್ರಶ್ನೆ ಕೇಳಿ ತಣಿಕಾ ಅಧಿಕಾರಿಗಳು ಸರಿಯಾಗಿ ಕಾರ್ಯ ಮಾಡದೇ ಇರುವ ಬಗ್ಗೆ ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷರಾದ ರಜಿಯಾ ಬಳಬಟ್ಟಿ, ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ, ಶ್ರೀಧರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಗುರುರಾಜ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಸಲೀಂ ಪಾಶಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೊಗದ ಮಾಜಿ ಸದಸ್ಯರಾದ ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯರುಗಳು ಇಲಾಖೆಯ ಗೌರಿಶಂಕರ ಹಾಗೂ ಇಲಾಖೆಯ ಸಿಬ್ಬಂದಿಗಳು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

prajaprabhat

Recent Posts

600 ವರ್ಷಗಳ ನಂತರ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಸ್ಫೋಟಗೊಂಡು, 4 ಕಿ.ಮೀ ಎತ್ತರಕ್ಕೆ ಬೂದಿ ಸುರಿಯುತ್ತಿದೆ.

ರಷ್ಯಾದ ಕಮ್ಚಟ್ಕಾ ಪರ್ಯಾಯ ದ್ವೀಪದಲ್ಲಿರುವ ಕ್ರಾಶೆನ್ನಿನಿಕೋವ್ ಜ್ವಾಲಾಮುಖಿ ಇಂದು ದಾಖಲಾದ ಇತಿಹಾಸದಲ್ಲಿ ಮೊದಲ ಬಾರಿಗೆ ಸ್ಫೋಟಗೊಂಡಿದೆ, ಇದು 600 ವರ್ಷಗಳಲ್ಲಿ…

23 minutes ago

ರಾಯ್‌ಪುರ ರೈಲು ನಿಲ್ದಾಣದಿಂದ ರಾಯ್‌ಪುರ-ಜಬಲ್‌ಪುರ ಹೊಸ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ

ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಮತ್ತು ವಿಧಾನಸಭಾ ಸ್ಪೀಕರ್ ಡಾ. ರಮಣ್ ಸಿಂಗ್ ಅವರು ಇಂದು ರಾಜಧಾನಿ ರಾಯ್‌ಪುರ…

25 minutes ago

ಉತ್ತರ ಪ್ರದೇಶದ ಗೊಂಡಾದಲ್ಲಿ ವಾಹನ ಕಾಲುವೆಗೆ ಬಿದ್ದು 11 ಮಂದಿ ಸಾವು

ಗೂಂಡಾ.03.ಆಗಸ್ಟ್.25:- ಉತ್ತರ ಪ್ರದೇಶದ ಗೊಂಡಾದಲ್ಲಿ ಇಂದು ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ.…

27 minutes ago

ಜನಸಂಖ್ಯಾ ಸ್ಪೋಟದಿಂದ ದೇಶಕ್ಕೆ ಆಘಾತಕಾರಿ ಸಮಸ್ಯೆ: ಡಾ.ದಂಡಪ್ಪ ಬಿರಾದಾರ ಕಳವಳ

ರಾಯಚೂರು.03.ಆಗಸ್ಟ್.25: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸರ್ಕಾರಿ ಪ್ರೌಢಶಾಲೆ ಉಡಮಗಲ್ ಖಾನಾಪುರ…

5 hours ago

ಜಿಲ್ಲೆಯ ಬೆಳೆಗಳ ಬೆಳವಣಿಗೆ ಮತ್ತು ರಸಗೊಬ್ಬರದ ದಾಸ್ತಾನು ವಿವರವನ್ನು

ರಾಯಚೂರು.03.ಆಗಸ್ಟ್.25:- ಯೂರಿಯಾ ಗೊಬ್ಬರ ವಿತರಿಸಿದ ವಿವರ (ಮೆಟ್ರೀಕ್ ಟನ್ ಗಳಲ್ಲಿ) ಅನ್ನಪೂರ್ಣೇಶ್ವರಿ ಅಗ್ರೋ ಟ್ರೇಡಿಂಗ್ ಕ್ಯಾಂಪ್ ಬ್ಯಾಗ್ವಾಟ್ -9, ಬಂದೇನವಾಜ್…

5 hours ago

ಸಾರ್ವಜನಿಕರ ಪ್ರಾಯಾಣಕ್ಕೆ ತೊಂದರೆಯಾಗದಿರಲಿ- ಜಿಲ್ಲಾಧಿಕಾರಿ ಸುರೇಶ ಇಟ್ನಾಳ

ಕೊಪ್ಪಳ.03.ಆಗಸ್ಟ್.25: ಆಗಸ್ಟ್ 5 ರಿಂದ ಕೆ.ಎಸ್.ಆರ್.ಟಿ ನೌಕರರು ಮುಷ್ಕರವನ್ನು ಕೈಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಸಾರ್ವಜನಿಕರ ಪ್ರಾಯಾಣಕ್ಕೆ ಯವುದೇ…

5 hours ago