ಬೀದರ.17.ಜನವರಿ.25.ಇಂದು ಬೀದರ್‌ನಲ್ಲಿ ನಡೆದ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಿರಿ ವೆಂಕಟೇಶ್ ಎಂಬ ಭದ್ರತಾ ಸಿಬ್ಬಂದಿ ದುಷ್ಕರ್ಮಿಗಳ ದಾಳಿಗೆ ಬಲಿಯಾಗಿದ್ದು, ಶಿವಕುಮಾರ್ ಎಂಬ ಮತ್ತೊಬ್ಬ ಭದ್ರತಾ ಸಿಬ್ಬಂದಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದ್‌ನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರಣ್ಯ, ಪರಿಸರ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಈಶ್ವರ ಖಂಡ್ರೆ ಅವರು ಇಂದು ರಾತ್ರಿ ಸುಮಾರು 9 ಗಂಟೆಗೆ ಬೆಂಗಳೂರಿನಿಂದ ಹೈದ್ರಾಬಾದ್‌ಗೆ ಆಗಮಿಸಿ, ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳು ಶಿವಕುಮಾರ್ ಅವರ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ನಂತರ, ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಸುದೀರ್ಘ ಮಾತುಕತೆ ನಡೆಸಿ, ಚಿಕಿತ್ಸೆ ವೆಚ್ಚದ ಬಗ್ಗೆ ಯಾವುದೇ ಚಿಂತೆ ಮಾಡಬೇಡಿ ಎಂದು ಆಶ್ವಾಸನೆ ನೀಡಿದರು. ಶಿವಕುಮಾರ್ ಅವರಿಗೆ ಉತ್ತಮ ರೀತಿಯ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಮನವಿ ಮಾಡಿದರು ಮತ್ತು ಅವರ ಆರೋಗ್ಯದ ಸ್ಥಿತಿಗತಿಯನ್ನು ವಿವರವಾಗಿ ವಿಚಾರಿಸಿದರು.
ವೈದ್ಯರು ಶಿವಕುಮಾರ್ ಶೀಘ್ರ ಗುಣಮುಖರಾಗುವ ಬಗ್ಗೆ ಭರವಸೆ ನೀಡಿದ್ದಾರೆ. ಈ ದುರಂತದ ಬಗ್ಗೆ ತೀವ್ರ ಆಘಾತ ವ್ಯಕ್ತಪಡಿಸಿದ ಸಚಿವ ಈಶ್ವರ ಖಂಡ್ರೆ, ದುರಂತಕ್ಕೆ ಕಾರಣವಾದ ಆರೋಪಿಗಳನ್ನು ಶೀಘ್ರವಾಗಿ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಲು ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಗಾಯಾಳು ಮತ್ತು ಮೃತರ ಕುಟುಂಬಗಳಿಗೆ ಅಗತ್ಯ ಸಕಾಲಿಕ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಪುನರುಚ್ಚಸಿದರು.
ಬೀದರ.04.ಆಗಸ್ಟ್.25:- ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಸಹಯೋಗದಲ್ಲಿ ಆಗಸ್ಟ್.6 ರಂದು ಬೆಳಿಗ್ಗೆ 10…
ಬೀದರ.04.ಆಗಸ್ಟ್.25:- ಬೀದರ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಹಾಗೂ ಅಪರ ಜಿಲ್ಲಾದಂಡಾಧಿಕಾರಿಯಾಗಿ ಶಿವಾನಂದ ಬಿ.ಕರಾಳೆ ಅವರು ಇಂದು ಅಧಿಕಾರ ಸ್ವೀಕಾರ…
ಬೆಂಗಳೂರು.04.ಆಗಸ್ಟ್.25:- KSRTC ನೌಕರರ ವೇತನ ಪರಿಷ್ಕರಣೆ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆಯಿಂದ ರಾಜ್ಯಾದ್ಯಾಂತ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಬೆಂಗಳೂರು.04.ಆಗಸ್ಟ್.25:- ರಾಜ್ಯದ ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಕೆಯಾಗಿದೆ. ಬೆಂಗಳೂರಿನ ನಿವಾಸಿ ಜೆ ಸುನೀಲ್ ಮತ್ತಿತರರು…
ಬೆಂಗಳೂರು.04.ಆಗಸ್ಟ್.25:- 2025-26ನೇ ಸಾಲಿಗೆ ರಾಜ್ಯದಲ್ಲಿ ಮಕ್ಕಳ ಅಪೌಷ್ಠಿಕತೆ ನಿವಾರಣೆಗೆ ಭಾರತ ಸರ್ಕಾರದ ವಾರ್ಷಿಕ MGNREGA ಮಾರ್ಗಸೂಚಿಯನ್ವಯ ಜಿಲ್ಲಾ ಮತ್ತು ತಾಲ್ಲೂಕು…
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…