ಬೀದರ್: ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭ ನಗರದ ಮಾಮನಕೇರದಲ್ಲಿರುವ ಜ್ಞಾನಸುಧಾ ವಿದ್ಯಾಲಯದ ಜ್ಞಾನರಂಗ ಸಭಾಂಗಣದಲ್ಲಿ ಸೋಮವಾರ ನಡೆಯಿತು.
ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಹಾಗೂ ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ. ಮುನೇಶ್ವರ ಲಾಖಾ ಅವರು ಪರೀಕ್ಷೆಯಲ್ಲಿ ಗಮನಾರ್ಹ ಸಾಧನೆಗೈದ ವಿದ್ಯಾರ್ಥಿಗಳಿಗೆ ಆತ್ಮೀಯವಾಗಿ ಸನ್ಮಾನಿಸಿ, ಪ್ರೋತ್ಸಾಹಿಸಿದರು.
ಸಮಾರಂಭದಲ್ಲಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ. ಪೂರ್ಣಿಮಾ ಜಿ. ಅವರು ಮಾತನಾಡಿ, ‘ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮ್ಮ ವಿದ್ಯಾಲಯದ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ನಮ್ಮ ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುತ್ತಿರುವ ಕಾರಣ, ಶಿಕ್ಷಕರ ಪರಿಶ್ರಮ ಹಾಗೂ ಪಾಲಕರ ಸಹಕಾರದಿಂದಾಗಿ ವಿದ್ಯಾರ್ಥಿಗಳಿಗೆ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಲು ಸಾಧ್ಯವಾಗಿದೆ’ ಎಂದು ಮೆಚ್ಚಿಗೆ ವ್ಯಕ್ತಪಡಿಸಿದರು.
‘ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳು ಮುಂದೆ ತಮಗೆ ಆಸಕ್ತಿ ಇರುವ ಕೋರ್ಸ್ನಲ್ಲಿ ಪ್ರವೇಶ ಪಡೆದು ಸರಿಯಾಗಿ ವ್ಯಾಸಂಗ ಮಾಡಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡುವ ನಿಟ್ಟಿನಲ್ಲಿ ಪ್ರಯತ್ನಿಸಬೇಕು’ ಎಂದು ಸಲಹೆ ಮಾಡಿದರು.
ಜ್ಞಾನಸುಧಾ ವಿದ್ಯಾಲಯದ ನಿರ್ದೇಶಕರಾದ ಡಾ.ಮುನೇಶ್ವರ ಲಾಖಾ ಅವರು ಮಾತನಾಡಿ, ‘ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನಮ್ಮ ಜ್ಞಾನಸುಧಾ ವಿದ್ಯಾಲಯದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿದ ಹೆಚ್ಚಿನ ವಿದ್ಯಾರ್ಥಿಗಳೇ ಅಗ್ರಶ್ರೇಣಿಯಲ್ಲಿ ತೇರ್ಗಡೆಯಾಗಿದ್ದು ವಿಶೇಷವಾಗಿದೆ’ ಎಂದು ಹೇಳಿದರು.
‘ವಿದ್ಯಾರ್ಥಿಗಳು ಉತ್ತಮ ಶೈಕ್ಷಣಿಕ ವಾತಾವರಣ ಹೊಂದಿರುವ, ಒಳ್ಳೆಯ ರೀತಿಯಿಂದ ಮಾರ್ಗದರ್ಶ ಕಲ್ಪಿಸುವ ಪದವಿಪೂರ್ವ ಕಾಲೇಜಿನಲ್ಲಿ ಪ್ರವೇಶ ಪಡೆದಾಗ ಮಾತ್ರ ಭವಿಷ್ಯದಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ’ ಎಂದು ತಿಳಿಸಿದರು.
ಜ್ಞಾನಸುಧಾ ವಿದ್ಯಾಲಯದ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡಿ ಶಾಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದ ಶಿವಕುಮಾರ ವೀರಶೆಟ್ಟಿ ಸನ್ಮಾನ ಸ್ವೀಕರಿಸಿ ಮಾತನಾಡಿ, ‘ಜ್ಞಾನಸುಧಾ ವಿದ್ಯಾಲಯದಲ್ಲಿ ಗುಣಮಟ್ಟ ಶಿಕ್ಷಣ ನೀಡಿದ ಕಾರಣ ಪರೀಕ್ಷೆಯಲ್ಲಿ ನನಗೆ ಉತ್ತಮ ಅಂಕ ಪಡೆಯಲು ಸಾಧ್ಯವಾಗಿದೆ’ ಎಂದು ತಿಳಿಸಿದರು.
ಸನ್ಮಾನ ಸ್ವೀಕರಿಸಿದ ವೈಭವ್ ಶಿವಕುಮಾರ, ಸಂಗಮೇಶ್ ಮಹೇಶ್, ರುಚಿ ಚಂದ್ರಪಾಲ್, ಶಾಂಭವಿ ರಾಜಕುಮಾರ, ಶ್ರದ್ಧಾ ಶಿವಶೆಟ್ಟಿ ಅವರು ಮಾತನಾಡಿ ತಮ್ಮ ಅಭಿಪ್ರಾಯ ತಿಳಿಸಿದರು.
ವಿದ್ಯಾರ್ಥಿಗಳಾದ ಪ್ರಜ್ವಲ್ ಶಾಲಿವಾನ್, ಸಾಯಿಸ್ವರೂಪ್ ಶಿವಕುಮಾರ, ಮಹಮ್ಮದ್ ರಿಹಾನ್ ರಾಯಿಸ್ ಅಹೆಮದ್, ಸಾಯಿಸಾಧನಾ ಸಂತೋಷ್ ರೆಡ್ಡಿ, ವೈಷ್ಣವಿ ಶಿವರಾಜ, ಕೃಷ್ಣರೆಡ್ಡಿ ರಾಜರೆಡ್ಡಿ, ಅಕ್ಷರಾ ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಲಾಯಿತು.
ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಸುಜಾತಾ ಬೊಮ್ಮಾರೆಡ್ಡಿ, ಜ್ಞಾನಸುಧಾ ವಿದ್ಯಾಲಯದ ಪ್ರಾಚಾರ್ಯರಾದ ಸುನೀತಾ ಸ್ವಾಮಿ, ಉಪಪ್ರಾಚಾರ್ಯರಾದ ಕಲ್ಪನಾ ಮೋದಿ, ಮೇಲ್ವಿಚಾರಕರಾದ ರಜನಿ, ಸಾಯಿಗೀತಾ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪಾಲಕರು ಪಾಲ್ಗೊಂಡಿದ್ದರು.
ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…