ಕೊಪ್ಪಳ.08.ಜುಲೈ .26: ಕೊಪ್ಪಳ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ-2026 ರ ಮನೆಮನೆ ಭೇಟಿ ಮುಂದುವರೆದಿದ್ದು, ಜೂನ್ 30 ರಿಂದ ಜುಲೈ 8ರ ಸಂಜೆ 06 ಗಂಟೆವರೆಗೆ ಒಟ್ಟು 11,51,979 ಗಣತಿ ನಮೂನೆಗಳನ್ನು ಮತದಾರರಿಗೆ ಹಂಚಿಕೆ ಮಾಡಲಾಗಿರುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಡಾ. ಸುರೇಶ ಬಿ. ಇಟ್ನಾಳ ಅವರು ತಿಳಿಸಿದ್ದಾರೆ.
ಕೊಪ್ಪಳ ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಒಟ್ಟು 11,90,214 ಮತದಾರರಿದ್ದು, ಈ ಎಲ್ಲಾ ಮತದಾರರ ಮುದ್ರಿತವಾಗಿರುವ ಗಣತಿ ನಮೂನೆಗಳನ್ನು ಈಗಾಗಲೇ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳಿಗೆ ವಿತರಿಸಲಾಗಿರುತ್ತದೆ. ಇಲ್ಲಿಯವರೆಗೆ ಒಟ್ಟು 11,51,979 ಗಣತಿ ನಮೂನೆಗಳನ್ನು (Enumeration Forms) ಮತದಾರರಿಗೆ ಹಂಚಿಕೆ ಮಾಡಲಾಗಿದ್ದು, 2,78,346 ಗಣತಿ ನಮೂನೆಗಳನ್ನು ಡಿಜಿಟಲೀಕರಣ ಮಾಡಲಾಗಿರುತ್ತದೆ ಎಂದು ಅವರು ತಿಳಿಸಿದ್ದಾರೆ.






Any questions related to ಎಸ್ಐಆರ್: ಕೊಪ್ಪಳ ಜಿಲ್ಲೆಯಲ್ಲಿ ಒಂಬತನೇ ದಿನಕ್ಕೆ 11,51,979 ಗಣತಿ ನಮೂನೆ ವಿತರಣೆ?