ಕೊಪ್ಪಳ.02.ಜುಲೈ.25: ಎಸ್.ಎಸ್.ಎಲ್.ಸಿ ಪರೀಕ್ಷೆ-3 ರ ಪರೀಕ್ಷೆಗಳು ಜುಲೈ 05 ರಿಂದ ಜುಲೈ 12 ರವರೆಗೆ ಕೊಪ್ಪಳ ಜಿಲ್ಲೆಯಾದ್ಯಂತ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಅಂತರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಸುರೇಶ ಬಿ.ಇಟ್ನಾಳ ಅವರು ಆದೇಶ ಹೊರಡಿಸಿದ್ದಾರೆ.
ಎಸ್.ಎಸ್.ಎಲ್.ಸಿ ಪರೀಕ್ಷೆ-3 ಜುಲೈ 05 ರಿಂದ 12 ರವರೆಗೆ ಬೆಳಿಗ್ಗೆ 10 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ಕೊಪ್ಪಳ ಜಿಲ್ಲೆಯ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಪರೀಕ್ಷೆಗಳನ್ನು ಸುಗಮ ಮತ್ತು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023ರ ಕಲಂ 163 ರನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ತಾಲ್ಲೂಕವಾರು ಪರೀಕ್ಷೆ ಕೇಂದ್ರಗಳ ವಿವರ: ಕೊಪ್ಪಳದ 06, ಗಂಗಾವತಿಯ 04, ಕನಕಗಿರಿಯ 02, ಕಾರಟಗಿಯ 01, ಕುಷ್ಟಗಿ ತಾಲ್ಲೂಕಿನ 05, ಯಲಬುರ್ಗಾದ 03 ಹಾಗೂ ಕುಕನೂರು ತಾಲ್ಲೂಕಿನ 02 ಪರೀಕ್ಷಾ ಕೇಂದ್ರಗಳು ಸೇರಿದಂತೆ ಒಟ್ಟು 23 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ.
ನಿಷೇಧಾಜ್ಞೆ ಆದೇಶದನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ. ಮೊಬೈಲ್, ಪೇಜರ್, ಜರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೆ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತçಗಳನ್ನು ಹಿಡಿದು ತಿರುಗಾಡುವುದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ…
ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು…
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್…