ಏಕ ಬಳಕೆ ಪ್ಲಾಸ್ಟಿಕ್ ನಿಷೇಧ: ಬಳಕೆ ಕಂಡುಬಂದಲ್ಲಿ ಶಿಸ್ತು ಕ್ರಮ
ಬೀದರ.25.ಜನವರಿ.26:- ಬೀದರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವ್ಯಾಪಾರ ಮಾಡುತ್ತಿರುವ ಉದ್ದಿಮೆದಾರರು ಹಾಗೂ ಸಾರ್ವಜನಿಕರು ಯಾವುದೇ ದಪ್ಪದ ಯಾವುದೇ ರೀತಿಯ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಪ್ಲಾಸ್ಟಿಕ್ ಭಿತ್ತಿಪತ್ರ, ಪ್ಲಾಸ್ಟಿಕ್ ತೋರಣ. ಪ್ಲೆಕ್ಸ್, ಪ್ಲಾಸ್ಟಿಕ್ ಬಾವುಟ, ಪ್ಲಾಸ್ಟಿಕ್ ಶೆಟ್ಟಿ, ಪ್ಲಾಸ್ಟಿಕ್ ಲೋಟ, ಪ್ಲಾಸ್ಟಿಕ್ ಚಮಚ, ಕ್ಲಿಂಗ್ ಫಿಲ್ಡ್ ಮತ್ತು ಊಟದ ಮೇಜಿನ ಮೇಲೆ ಹರಡುವ ಪ್ಲಾಸ್ಟಿಕ್ ಹಾಳೆ ಹಾಗೂ ಥರ್ಮೋಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಬೀಡ್‍ನಿಂದ ತಯಾರಾದಂತಹ ವಸ್ತುಗಳ ತಯಾರಿಕೆ, ಸರಬರಾಜು, ಸಂಗ್ರಹಣೆ, ಸಾಗಾಣಿಕೆ, ಮಾರಾಟ ಮತ್ತು ವಿತರಣೆ ಮಾಡುವುದನ್ನು ರಾಜ್ಯದಾದ್ಯಂತ ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಒಂದು ವೇಳೆ ಮಾಡಿದ್ದು ಕಂಡು ಬಂದಲ್ಲಿ ನಿಯಮನುಸಾರ ಮಹಾನಗರ ಪಾಲಿಕೆ ವತಿಯಿಂದ ಶಿಸ್ತು ಕ್ರಮ ಜರುಗಿಸಲಾಗುªವುದೆಂದು ಬೀದರ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

