ಕಳೆದ ವರ್ಷ ಇದೇ ತಿಂಗಳಿಗೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಸಂಗ್ರಹವು ಶೇ. 12.6 ರಷ್ಟು ಹೆಚ್ಚಾಗಿ ಸಾರ್ವಕಾಲಿಕ ಗರಿಷ್ಠ 2.37 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ. ಸರ್ಕಾರಿ ಅಂಕಿಅಂಶಗಳ ಪ್ರಕಾರ, ಈ ತಿಂಗಳ ಕೇಂದ್ರ ಜಿಎಸ್‌ಟಿ ಸಂಗ್ರಹವು 48 ಸಾವಿರದ 634 ಕೋಟಿ ರೂಪಾಯಿಗಳು ಮತ್ತು ರಾಜ್ಯ ಜಿಎಸ್‌ಟಿ 59 ಸಾವಿರದ 372 ಕೋಟಿ ರೂಪಾಯಿಗಳಷ್ಟಿದೆ.
ಸಮಗ್ರ ಜಿಎಸ್‌ಟಿ ಸಂಗ್ರಹವು 1.1 ಲಕ್ಷ ಕೋಟಿ ರೂಪಾಯಿಗಳಿಗಿಂತ ಹೆಚ್ಚು ಮತ್ತು ಸೆಸ್ 13 ಸಾವಿರದ 451 ಕೋಟಿ ರೂಪಾಯಿಗಳಷ್ಟಿದೆ. ದೇಶೀಯ ವಹಿವಾಟುಗಳಿಂದ ಜಿಎಸ್‌ಟಿ ಆದಾಯವು ಶೇ. 10.7 ರಷ್ಟು ಹೆಚ್ಚಾಗಿ ಸುಮಾರು 1.9 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದ್ದರೆ, ಆಮದು ಮಾಡಿಕೊಂಡ ಸರಕುಗಳಿಂದ ಬರುವ ಆದಾಯವು ಶೇ. 20.8 ರಷ್ಟು ಹೆಚ್ಚಾಗಿ 46 ಸಾವಿರದ 913 ಕೋಟಿ ರೂಪಾಯಿಗಳಿಗೆ ತಲುಪಿದೆ.
ಏಪ್ರಿಲ್‌ನಲ್ಲಿ ನೀಡಲಾದ ಒಟ್ಟು ಮರುಪಾವತಿಗಳು 27 ಸಾವಿರದ 341 ಕೋಟಿ ರೂಪಾಯಿಗಳಾಗಿದ್ದು, ಇದು ಶೇ. 48.3 ರಷ್ಟು ಹೆಚ್ಚಳವಾಗಿದೆ. ಮರುಪಾವತಿಗಳನ್ನು ರಿಯಾಯಿತಿ ಮಾಡಿದ ನಂತರ ನಿವ್ವಳ ಜಿಎಸ್‌ಟಿ ಸಂಗ್ರಹವು ಕಳೆದ ತಿಂಗಳು ಶೇ. 9.1 ರಷ್ಟು ಹೆಚ್ಚಾಗಿ ಸುಮಾರು 2.09 ಲಕ್ಷ ಕೋಟಿ ರೂಪಾಯಿಗಳಿಗೆ ತಲುಪಿದೆ.
ಏಪ್ರಿಲ್ 2024 ರಲ್ಲಿ ಜಿಎಸ್ಟಿ ಸಂಗ್ರಹವು 2.10 ಲಕ್ಷ ಕೋಟಿ ರೂಪಾಯಿಗಳಾಗಿದ್ದು, ಜುಲೈ 1, 2017 ರಂದು ಪರೋಕ್ಷ ತೆರಿಗೆ ಪದ್ಧತಿ ಜಾರಿಗೆ ಬಂದ ನಂತರದ ಎರಡನೇ ಅತ್ಯಧಿಕ ಸಂಗ್ರಹವಾಗಿದೆ. ಮಾರ್ಚ್ 2025 ರಲ್ಲಿ, ಸಂಗ್ರಹವು 1.96 ಲಕ್ಷ ಕೋಟಿ ರೂಪಾಯಿಗಳಾಗಿತ್ತು.
ಕೊಪ್ಪಳ.13.ಆಗಸ್ಟ್.25: ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶಗಳನ್ನು ಪರಿಚಯಿಸುವ ಉದ್ದೇಶದಿಂದ ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ…
ಅಲ್ಪಸಂಖ್ಯಾತರ ಯೋಜನೆಗಳ ಅನುಷ್ಠಾನಕ್ಕೂ ಒತ್ತು ನೀಡಿ- ಜಿಲ್ಲಾಧಿಕಾರಿ ಡಾ. ಸುರೇಶ್ ಇಟ್ನಾಳಕೊಪ್ಪಳ.13.ಆಗಸ್ಟ್.25: ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ…
ಕೊಪ್ಪಳ.13.ಆಗಸ್ಟ್.25:- ವ್ಯಾಪಾರ ವ್ಯವಹಾರ ಮಾಡುವವರು ಅಂಗಿ ಕಳೆದು ಹಮಾಲಿ ಮಾಡಲು ಸಿದ್ಧರಿದ್ದಾಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ ಎಂದು ವಾಣಿಜ್ಯ…
ರಾಯಚೂರು.13.ಆಗಸ್ಟ್.25: ನಶಾ ಮುಕ್ತ ಭಾರತ ಅಭಿಯಾನದ 5ನೇ ವಾರ್ಷಿಕೋತ್ಸವದ ಕಾರ್ಯಕ್ರಮಗಳು ರಾಯಚೂರ ಜಿಲ್ಲೆಯಾದ್ಯಂತ ಆಗಸ್ಟ್ 13ರಂದು ವಿವಿಧೆಡೆ ನಡೆದವು. ಜಿಲ್ಲಾಡಳಿತ,…
ರಾಯಚೂರು.13.ಆಗಸ್ಟ.25: ವಿದೇಶದಲ್ಲಿ ವಿದ್ಯಾಭ್ಯಾಸ ಮಾಡಲು ಇಚ್ಛಿಸುವ ರಾಜ್ಯದ ವಿದ್ಯಾರ್ಥಿಗಳಿಗೆ ಜಾಗತಿಕ ಉನ್ನತ ಶಿಕ್ಷಣದ ಅವಕಾಶವನ್ನು ಪರಿಚಯಿಸುವ ಉದ್ದೇಶದಿಂದ ಸ್ಟಡಿ ಅಬ್ರಾಡ್…
ರಾಯಚೂದು.13.ಆಗಸ್ಟ್.25:- ಇಲ್ಲಿನ ಕೃಷಿ ವಿಜ್ಞಾನಗಳ ವಿಶ್ವ ವಿದ್ಯಾಲಯದಲ್ಲಿ ಆಯೋಜನೆ ಮಾಡಿದ ಅಗ್ನಿವೀರ್ ಸೇನಾ ಭರ್ತಿಗೆ 6ನೇ ದಿನವಾದ ಆಗಸ್ಟ್ 13ರಂದು…