ಏಳನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಬೀದರ.28.ಏಪ್ರಿಲ್.25:- ಜಾನುವಾರು ಕಂದಮ್ಮ ದೇಶದ ಸಂಪತ್ತು, ಅದನ್ನು ಉಳಿಸಿ ಬೆಳೆಸಲು ಸಾಂಕ್ರಾಮಿಕ ರೋಗಗಳಲ್ಲಿ ಒಂದಾದ ಕಾಲುಬಾಯಿಜ್ವರ ರೋಗವನ್ನು ತಡೆಗಟ್ಟಲು ತಪ್ಪದೇ ಲಸಿಕೆ ಹಾಕಿಸಬೇಕು ಹಾಗೂ ಜೊತೆಗೆ ಎಲ್‌ಎಸ್‌ಎಲ್ ಲಸಿಕೆಯನ್ನು ಕೊಡಲಾಗುತ್ತಿದ್ದು ಈ ಲಸಿಕೆಯನ್ನು ಹಾಕಿಸಿಕೊಳ್ಳಬೇಕೆಂದು ಬೀದರ ನಗರಸಭೆ ನಾಮನಿರ್ದೇಶಿತ ಸದಸ್ಯರಾದ ಗಣೇಶ ಭೋಸ್ಲೆ ತಿಳಿಸಿದರು.


ಅವರು ಶನಿವಾರದಂದು ಶ್ರೀ ಲಕ್ಷಿö್ಮo  ಸತ್ಯನಾರಾಯಣ ಗೋಶಾಲೆ ಬೀದರದಲ್ಲಿ ಹಮ್ಮಿಕೊಂಡಿದ್ದ 7ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.


7ನೇ ಸುತ್ತಿನ ಕಾಲುಬಾಯಿಜ್ವರ ಲಸಿಕಾ ಕಾರ್ಯಕ್ರಮವು ಏ.26 ರಿಂದ ಜೂನ್.9 ರವರೆಗೆ ನಡೆಯುತ್ತಿದ್ದು, ತಪ್ಪದೇ ಜಾನುವಾರುಗಳಿಗೆ ಲಸಿಕೆಯನ್ನು ಹಾಕಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಾ.ನರಸಪ್ಪ ಉಪನಿರ್ದೇಶಕರು, ಬೀದರ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ.ನರಸಪ್ಪ ತಿಳಿಸಿದರು.


ಈ ಕಾರ್ಯಕ್ರಮದಲ್ಲಿ ಸುನೀಲ ಗೌಳಿ, ಡಾ. ಶಿವಶರಣ ಯಲಗೋಡ, ಕೆವಿಎ ಅಧ್ಯಕ್ಷರು, ಡಾ.ಓಂಕಾರ ಪಾಟೀಲ, ಡಾ.ನೀಲಕಂಠ, ಡಾ.ಶ್ರೀಕಾಂತ ಬಿರಾದಾರ, ಡಾ.ವಿಶ್ವನಾತ ಸ್ವಾಮಿ, ಡಾ.ಮಿರ್ಜಾ ಮುಬಿದ್ದಿನ್ ಬೇಗ್, ಡಾ.ದೀಪಕ ಬಿರಾದಾರ, ಡಾ.ಜಗದೀಶ ಬಿರಾದಾರ, ಡಾ.ಸಂಧ್ಯಾರಾಣಿ ಹಾಗೂ ಸದಸ್ಯರುಗಳಾದ ಉಮೇಶ ಸಿರ್ಸೆ, ದಯಾನಂದ, ಸುನೀಲಕುಮಾರ, ಜಗನ್ನಾತ, ಸೋಮನಾತ, ಹಸನಮೊಹ್ಮದ, ಇಲಿಯಾಸ್, ಸೈಯ್ಯದ ಆರೀಫ್ ಹಾಗೂ ಲಕ್ಷಿö್ಮo ನಾರಾಯಣ ಟ್ರಸ್ಟ್ ಗೋಶಾಲೆಯ ಸಂತೋಷ ಸೇರಿದಂತೆ ಇತರರು ಉಪಸ್ಥಿತರಿದ್ದರು.

prajaprabhat

Recent Posts

ಸಾರಿಗೆ ಇಲಾಖೆಯಲ್ಲಿ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ.ಸಚಿವ ರಾಮಲಿಂಗ ರೆಡ್ಡಿ

ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…

21 minutes ago

ರಾಜ್ಯ ಸರ್ಕಾರಿ ಕಾಲೇಜು’ಗಳಲ್ಲಿ  ಅರ್ಹ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ.!

ರಾಜ್ಯದ ಸರ್ಕಾರಿ ಕಾಲೇಜು'ಗಳಲ್ಲಿ ಅರ್ಹ ಅತಿಥಿ ಉಪನ್ಯಾಸಕರನ್ನು ಗೌರವಧನ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.…

2 hours ago

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

12 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

12 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

13 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

14 hours ago