05 ಡಿಸೆಂಬರ್ 24 ಅಂಡರ್-19 ಏಷ್ಯಾಕಪ್‌ನಲ್ಲಿ ಇಂದು ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆತಿಥೇಯ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಭಾರತ 10 ವಿಕೆಟ್‌ಗಳಿಂದ ಗೆದ್ದು ಸೆಮಿಫೈನಲ್‌ಗೆ ಅರ್ಹತೆ ಪಡೆದುಕೊಂಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಯುಎಇ 138 ರನ್‌ಗಳ ಗುರಿ ನೀಡಿತು. ಅವರು 44 ಓವರ್‌ಗಳಲ್ಲಿ ಆಲೌಟ್ ಆದರು. ಗುರಿ ಬೆನ್ನತ್ತಿದ ಭಾರತ ಕೇವಲ 16.1 ಓವರ್‌ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 143 ರನ್ ಗಳಿಸಿತು. ಶಾರ್ಜಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶುಕ್ರವಾರ ನಡೆಯಲಿರುವ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಶ್ರೀಲಂಕಾ ವಿರುದ್ಧ ಸೆಣಸಲಿದೆ.
ಶುಕ್ರವಾರ ನಡೆಯಲಿರುವ ಮತ್ತೊಂದು ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸೆಣಸಲಿವೆ. ಇಂದು ಜಪಾನ್ ವಿರುದ್ಧ ಪಾಕಿಸ್ತಾನ 180 ರನ್ ಗಳ ಜಯ ಸಾಧಿಸಿದೆ. 244 ರನ್‌ಗಳ ಗುರಿ ಬೆನ್ನತ್ತಿದ ಜಪಾನ್ 29ನೇ ಓವರ್‌ನಲ್ಲಿ ಕೇವಲ 63 ರನ್ ಗಳಿಸಿ ಆಲೌಟ್ ಆಯಿತು.
Source:air