ಬೀದರ.09.ಏಪ್ರಿಲ್.25:-ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು ವತಿಯಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿರುವ ಯುವಜನತೆಗಾಗಿ ಪ್ರಾದೇಶಿಕ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಏಪ್ರಿಲ್.16 ರಂದು ಕಲಬುರಗಿಯಲ್ಲಿ ಆಯೋಜಿಸಿರುವುದರಿಂದ ಜಿಲ್ಲೆಯ ನಿರುದ್ಯೋಗ ಯುವಕ-ಯುವತಿಯರು, ಉದ್ಯೋಗಾಂಕ್ಷಿಗಳು ಜಾಲತಾಣ https://skillconnect.kaushalkar.com ನಲ್ಲಿ ಹೆಸರು ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕೆಂದು ಬೀದರ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೀದರ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಯಾವುದೇ ವಿದ್ಯಾರ್ಹತೆ ಹೊಂದಿರುವ ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಗಳನ್ನು ಪೂರ್ಣಗೊಳಿಸಿದ ನಿರುದ್ಯೋಗ ಯುವಕ-ಯುವತಿಯರಿಗೆ ಉದ್ಯೋಗಾಂಕ್ಷಿಗಳಿಗೆ ಪ್ರತಿಷ್ಠಿತ ಕಂಪನಿ/ಸಂಸ್ಥೆಗಳಲ್ಲಿ ಉದ್ಯೋಗ ಪಡೆಯಲು ಇದೊಂದು ಸುವರ್ಣ ಅವಕಾಶವಾಗಿರುವುದರಿಂದ ಆಸಕ್ತ ಅರ್ಹ ಉದ್ಯೋಗಾಂಕ್ಷಿಗಳು ಅಗತ್ಯ ದಾಖಲಾತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 08022075030 ಅಥವಾ ಇಮೇಲೆ udyogamela.ksdc@kanataka.gov.in ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.