ಬೀದರ.16.ಏಪ್ರಿಲ್.25:-ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಏಪ್ರಿಲ್.17 ರಿಂದ 19 ರವರೆಗೆ ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.
ಏಪ್ರಿಲ್.17 ರಂದು ಬೆಳಿಗ್ಗೆ 10.30 ಗಂಟೆಗೆ ಧನಗರ ಗಡ್ಡಾ ಹುಮನಾಬಾದ ಪಟ್ಟಣ, ಜನತಾ ನಗರ ಹುಡುಗಿ ಗ್ರಾಮ ದುಬಲಗುಂಡಿ ಗ್ರಾಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ ಸಮುದಾಯದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೆರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕೈಕಾಡಿ ಗಲ್ಲಿ ಬಸವಕಲ್ಯಾಣ ಪಟ್ಟಣ, ಮುಡಬಿ ಗ್ರಾಮದಲ್ಲಿ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬಸವಕಲ್ಯಾಣದಲ್ಲಿನ ಅನುಭವ ಮಂಟಪಕ್ಕೆ ಭೇಟಿ ನೀಡಲಿದ್ದಾರೆ. ನಂತರ 4.30 ಕ್ಕೆ ಭಾಲ್ಕಿ ತಾಲ್ಲೂಕಿನ ಎ.ಪಿ.ಎಂ.ಸಿ.ಮಾರ್ಕೆಟ್ ಪಂಚಶೀಲಾನಗರ ಹಿರೆಮಠಗಲ್ಲಿ ಬಸವನಗರದಲ್ಲಿ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
ಏಪ್ರಿಲ್.18 ರಂದು ಬೆಳಿಗ್ಗೆ 9.30 ಗಂಟೆಗೆ ಬೀದರ ಜಿಲ್ಲಾ ಕಾಂಗ್ರೆಸ್ ಕಛೇರಿಗೆ ಭೇಟಿ ನೀಡಲಿದ್ದಾರೆ. ನಂತರ ಬೆಳಿಗ್ಗೆ 10.30 ಗಂಟೆಗೆ ಬೀದರನ ದೀನದಯಾಳ ನಗರ ನೌಬಾದ, ವಡ್ಡರ ಕಾಲೋನಿ, ರಾಜಗೊಂಡ ಕಾಲೋನಿ, ಕಮಠಾಣ ಗ್ರಾಮ, ಕೋಳಾರ (ಕೆ) ದಲ್ಲಿ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಔರಾದ ತಾಲ್ಲೂಕಿನ ಎ.ಪಿ.ಎಂ.ಸಿ.ಕಾಲೋನಿ, ನಳಂದಾ ಶಾಲೆ ಹತ್ತಿರ, ಬೀದರ-ನಾಂದೇಡ ರಸ್ತೆ ಹತ್ತಿರ, ಗಾಂಧಿ ಚೌಕ ಹತ್ತಿರದಲ್ಲಿ ಅಧಿಕಾರಿಗಳೊಂದಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಜನಾಂಗದ ಕುಟುಂಬಗಳು ವಾಸಿಸುತ್ತಿರುವ ಸ್ಥಳ ವೀಕ್ಷಣೆ ಹಾಗೂ ಕುಂದು ಕೊರತೆಗಳನ್ನು ಆಲಿಸಲಿದ್ದಾರೆ.
ಏಪ್ರಿಲ್.19 ರಂದು ಬೆಳಿಗ್ಗೆ 9 ಗಂಟೆಗೆ ಅರಣ್ಯ, ಜೀವಿಶಾಸ್ತç ಹಾಗೂ ಪರಿಸರ ಮತ್ತು ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಗೃಹ ಕಛೇರಿಯಲ್ಲಿ ಸಚಿವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ಬೀದರ ವಿಶ್ವವಿದ್ಯಾಲಯ ಬೀದರದಲ್ಲಿ ಬೀದರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯಗಳ ಸಮಸ್ಯೆ, ಸವಾಲುಗಳು ಮತ್ತು ಪರಿಹಾರೋಪಾಯಗಳ ಕುರಿತು ವಿಚಾರ ಸಂಕಿರ್ಣ ನಡೆಸಲಿದ್ದಾರೆ. ಮಧ್ಯಾಹ್ನ 2.30ಕ್ಕೆ ಬೀದರ ಜಿಲ್ಲಾಧಿಕಾರಿ ಕಛೆರಿ ಸಭಾಂಗಣದಲ್ಲಿ ಅಲೆಮಾರಿ ಸಮುದಾಯದ ಸಂಘ ಸಂಸ್ಥೆಗಳ ಮತ್ತು ಸಾಮಾನ್ಯ ಜನರಿಂದ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಲು ಸಮಯ ಮೀಸಲಿಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಬಿವರದ್ಧಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಹಾಗೂ ಸಮಾಲೋಚನಾ ಸಭೆ ನಡೆಸುವರು. ನಂತರ ಸಂಜೆ 4.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಲಿದ್ದಾರೆಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳು ತಿಳಿಸಿದ್ದಾರೆ.
ರಾಜ್ಯದ ವಿವಿಧ ನಿಗಮಗಳಲ್ಲಿ ರಾಜ್ಯ ಸರ್ಕಾರ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಡಾ ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ…
ಕೊಪ್ಪಳ.10.ಆಗಸ್ಟ್.25:- ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ…
ಹೊಸ ದೆಹಲಿ.10.ಆಗಸ್ಟ್.25:- ನೀವು 9 ರಿಂದ 12 ನೇ ತರಗತಿಯ ಶಿಕ್ಷಕರಾಗುವ ಕನಸು ಕಾಣುತ್ತಿದ್ದರೆ, ಆಕಾಂಕ್ಷಿಗಳು ನೀವು ಸ್ವಲ್ಪ ಹೆಚ್ಚು…
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…