ಬೀದರ.23.ಏಪ್ರಿಲ್.25:- ಜಿಲ್ಲಾಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಬೀದರ ಹಾಗೂ ಕರ್ನಾಟಕ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಏಪ್ರಿಲ್.24 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಆವರಣ ಬೀದರದಲ್ಲಿ ಡಾ.ರಾಜಕುಮಾರ್ 97ನೇ ಜಯಂತಿ ಅಂಗವಾಗಿ ರಾಜರಸ ಸಂಗೀತ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಬೆಂಗಳೂರು ಚಲನಚಿತ್ರ ನಿರ್ದೇಶಕರು ಹಾಗೂ ನಿರ್ಮಾಪಕರಾದ ಬಿ.ಜೆ.ವಿಷ್ಣುಕಾಂತ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಬೀದರ ಕೆ.ಆರ್.ಇ.ಸಂಸ್ಥೆಯ ಅಧ್ಯಕ್ಷತರಾದ ಬಸವರಾಜ ಜಾಬಶೆಟ್ಟಿ ವಹಿಸಲಿದ್ದಾರೆ.
ಮುಖ್ಯ ಅತಿಥಿಗಾಗಿ ಬೀದರ ವಿಶ್ವವಿದ್ಯಾಲಯದ ಕುಲಸಚಿವರಾದ ಸುರೇಖಾ, ಬೆಂಗಳೂರು ಜಾನಪದ ಅಕಾಡೆಮಿ ಸದಸ್ಯರಾದ ವಿಜಯಕುಮಾರ ಸೋನಾರೆ, ಬೀದರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಿದ್ರಾಮ ಸಿಂಧೆ ಹಾಗೂ ಕಾರ್ಯಕ್ರಮದ ವಿಶೇಷ ಉಪನ್ಯಾಸವನ್ನು ಬೀದರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ಅವರು ನೀಡಲಿದ್ದಾರೆ. ನಂತರ ಶಿವಕುಮಾರ ಪಾಂಚಾಳ ಆಕಾಶವಾಣಿ ಕಲಾವಿದರು, ಬಈದರ ಇವರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ವಿಶೇಷ ಆಹ್ವಾನಿತರಾಗಿ ಬೀದರ ಕೆ.ಆರ್.ಇ.ಸಂಸ್ಥೆಯ ಉಪಾಧ್ಯಕ್ಷರಾದ ಬಿ.ಜಿ.ಶೆಟಕಾರ, ಕಾರ್ಯದರ್ಶಿಗಳಾದ ಸತೀಶ ಪಾಟೀಲ, ಜಂಟಿ ಕಾರ್ಯದರ್ಶಿಗಳಾದ ಶಿವಾನಂದ ಗಾದಗೆ ಆಗಮಿಸಲಿದ್ದಾರೆ.
ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…
ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…
ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…
ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…
ರಾಯಚೂರು.04.ಆಗಸ್ಟ್.25: ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ರಾಯಚೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಅoದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಹೆಚ್‌ಎಎಲ್…
ಭ್ರಷ್ಟ ಅಧಿಕಾರಿಗಳು ಪ್ರತಿ ವರ್ಷ ದುರಸ್ಥಿ ಪಿಠೋಪಕರಣ ಸರಬರಾಜು ಹೆಸರಿನಲ್ಲಿ ಸತತ 3 ವರ್ಷಗಳಿಂದ ಇದೇ ಮಾಡಿ ಭಾವಚಿತ್ರಗಳನ್ನು ಲಗತ್ತಿಸಿ…