ಏ.30 ರಂದು ಅಕ್ಷಯ ತೃತೀಯ ದಿನ:ಬಾಲ್ಯವಿವಾಹ ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚನೆ


ಬೀದರ.05.ಏಪ್ರಿಲ್.25:-ಇದೇ ಏಪ್ರಿಲ್.30 ರಂದು ಅಕ್ಷಯ ತೃತೀಯ ದಿನದಂದು ಬಾಲ್ಯವಿವಾಹ ಪ್ರಕರಣಗಳು ಹೆಚ್ಚು ನಡೆಯುವ ಸಾಧ್ಯತೆಯಿರುವುದರಿಂದ ಎಲ್ಲಾ ಬಾಲ್ಯವಿವಾಹ ನಿಷೇಧಾಧಿಕಾರಿಗಳು ಈ ಬಗ್ಗೆ ಹೆಚ್ಚಿನ ಗಮನಹರಿಸಿ ತಮ್ಮ ಕಾರ್ಯವ್ಯಾಪ್ತಿಯಡಿ ಸಾಮೂಹಿಕ ವಿವಾಹದಲ್ಲಾಗಲೀ ಅಥವಾ ವೈಯಕ್ತಿಕ ವಿವಾಹದಲ್ಲಾಗಲೀ ಯಾವುದೇ ಬಾಲ್ಯವಿವಾಹಗಳು ಜರುಗದಂತೆ ಕ್ರಮವಹಿಸಬೇಕೆಂದು ಜಿಲ್ಲಾದಿಕಾರಿಗಳಾದ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ.


ಜಿಲ್ಲೆಯಲ್ಲಿ ಬಾಲ್ಯವಿವಾಹ ನಡೆಯುತ್ತಿರುವುದು ಗಮನಕ್ಕೆ ಬಂದರೆ ತುರ್ತಾಗಿ ಮಕ್ಕಳ ಸಹಾಯವಾಣಿ-1098, ಪೊಲೀಸ್ ಸಹಾಯವಾಣಿ 112 ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕ 08482-234003/ ಹಾಗೂ ಸಂಬAಧಪಟ್ಟ ಪೊಲೀಸ್ ಠಾಣೆ ಅವರ ಗಮನಕ್ಕೆ ತುರ್ತಾಗಿ ತರಬೇಕು.


ಬಾಲ್ಯವಿವಾಹವು ಹಿಂದಿನ ಕಾಲದಿಂದಲೂ ನಡೆದು ಬಂದಿರುವ ಅನಿಷ್ಠ ಪದ್ಧತಿಯಾಗಿದ್ದು, ಈ ಶತಮಾನದಲ್ಲಿಯೂ ಮುಂದುವರೆದಿರುವುದು ಶೋಚನಿಯವಾಗಿರುತ್ತದೆ. ಬಾಲ್ಯ ವಿವಾಹವೆಂದರೆ 18 ವರ್ಷದೊಳಗಿನ ಹುಡುಗಿ ಹಾಗೂ 21 ವರ್ಷದ ಒಳಗಿನ ಹುಡುಗನ ನಡುವೆ ನಡೆಯುವ ಮದುವೆ ಅಥವಾ ಇಬ್ಬರಲ್ಲಿ ಒಬ್ಬರು ನಿಗದಿತ ವಯಸ್ಸಿನೊಳಗಿದ್ದರೂ ಇಂತಹ ಮದುವೆಯನ್ನು ಬಾಲ್ಯವಿವಾಹವೆಂದು ಪರಿಗಣಿಸಲಾಗುತ್ತದೆ. ಇದು ಮಕ್ಕಳ ಹಕ್ಕುಗಳ ಉಲ್ಲಂಘನೆ ಹಾಗೂ ಉತ್ತಮ ಸಮಾಜದ ನಿರ್ಮಾಣಕ್ಕೆ ಧಕ್ಕೆ ಉಂಟು ಮಾಡುತ್ತದೆ.

ಈ ಅಪಾಯಕಾರಿ ಪದ್ಧತಿಯು ತಾಯಂದಿರ ಮರಣ, ಶಿಶು ಮರಣ, ಅಪೌಷ್ಠಿಕತೆಯನ್ನು ಉಂಟು ಮಾಡುವುದಲ್ಲದೇ ಮಕ್ಕಳ ಬೌದ್ಧಿಕ, ದೈಹಿಕ ಹಾಗೂ ಮಾನಸಿಕ ಪರಿಣಾಮಗಳನ್ನು ಉಂಟು ಮಾಡುತ್ತದೆ.


ಈ ಎಲ್ಲಾ ಕಾರಣಗಳಿಂದಾಗಿ ಬಾಲ್ಯವಿವಾಹವೆಂಬ ಅನಿಷ್ಠ ಪದ್ಧತಿ ಹಾಗೂ ಸಾಮಾಜಿಕ ಪಿಡುಗು ಎಂದು ಗುರುತಿಸಿ, ಇದನ್ನು ನಿಷೇಧಿಸಲು ಕೇಂದ್ರ ಸರ್ಕಾರವು ಬಾಲ್ಯವಿವಾಹ ನಿಷೇಧ ಕಾಯ್ದೆ-2006ನ್ನು ಜಾರಿಗೆ ತಂದಿರುತ್ತದೆ. ಸದರಿ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ರಾಜ್ಯ, ಜಿಲ್ಲಾ, ತಾಲ್ಲೂಕಾ, ಗ್ರಾಮ ಪಂಚಾಯತಿ, ಗ್ರಾಮ ಮಟ್ಟದಲ್ಲಿ ಬಾಲ್ಯವಿವಾಹ ನಿಷೇಧಾಧಿಕಾರಿಗಳನ್ನು ನೇಮಿಸಲಾಗಿರುತ್ತದೆ.


ಈ ಕಾರ್ಯವು ಕೇವಲ ಸರ್ಕಾರಿ ಇಲಾಖೆ/ಅಧಿಕಾರಿಗಳ ಜವಾಬ್ದಾರಿಯಾಗಿರದೇ ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿರುತ್ತದೆ. ಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ಅಧಿನಿಯಮ-2016ರ ಪ್ರಕಾರ ಒಂದು ವೇಳೆ ಬಾಲ್ಯವಿವಾಹ ನಡೆದಲ್ಲಿ 18 ವರ್ಷದೊಳಗಿನ ಹೆಣ್ಣು ಮಗುವನ್ನು ಮದುವೆಯಾದ ವಯಸ್ಕ ವ್ಯಕ್ತಿ, ಮದುವೆ ಮಾಡುವ ಪಾಲಕರು/ಪೋಷಕರು, ಇಂತಹ ಮದುವೆಯಲ್ಲಿ ಭಾಗವಹಿಸುವವರು, ಬಾಲ್ಯವಿವಾಹವನ್ನು ಏರ್ಪಡಿಸುವ, ನಿರ್ದೇಶಿಸುವ, ನೆರವೇರಿಸುವ ಮತ್ತು ಮದುವೆಗೆ ಕುಮ್ಮಕ್ಕು ನೀಡುವ ಸಂಸ್ಥೆ/ವ್ಯಕ್ತಿ, ಕಾಯ್ದೆಯಡಿ ನೀಡಿದ ತಡೆಯಾಜ್ಞೆಯನ್ನು ಉಲ್ಲಂಘಿಸಿದವರು, ಮಗುವಿನ ಜವಾಬ್ದಾರಿಯನ್ನು ಹೊತ್ತ ಯಾವುದೇ ವ್ಯಕ್ತಿ/ಸಂಸ್ಥೆಯ ನಿರ್ಲಕ್ಷö್ಯತೆಯಿಂದ ಬಾಲ್ಯವಿವಾಹವನ್ನು ತಡೆಯಲು ವಿಫಲರಾದವರು ಸಹ ತಪ್ಪಿತಸ್ಥರು.

ಇವರುಗಳಿಗೆ ಕಾಯ್ದೆ ಪ್ರಕಾರ “ಒಂದು ವರ್ಷಕ್ಕೆ ಕಡಿಮೆಯಿಲ್ಲದ ಅಂದರೆ ಎರಡು ವರ್ಷಗಳವರೆಗೆ ವಿಸ್ತರಿಸಬಹುದಾದ ಕಠಿಣ ಜೈಲು ಶಿಕ್ಷೆ” ಅಥವಾ “ಒಂದು ಲಕ್ಷ ರೂಪಾಯಿಗಳವರೆಗೆ ವಿಸ್ತರಿಸಬಹುದಾದ ಜುಲ್ಮಾನೆಗೆ ಅಥವಾ ಇವೆರಡರಿಂದಲೂ ಶಿಕ್ಷೆಗೆ ಗುರಿಯಾಗತಕ್ಕದು”್ದ, ಈ ಕಾಯ್ದೆಯಡಿ ಪ್ರತಿಯೊಬ್ಬ ಪೊಲೀಸ ಅಧಿಕಾರಿಯು ತನ್ನ ಅಧಿಕಾರ ವ್ಯಾಪ್ತಿಯಡಿ ಬಾಲ್ಯವಿವಾಹ ಜರುಗುತ್ತಿರುವ ಮಾಹಿತಿ ಬಂದಾಗ ಸ್ವಪ್ರೇರಿತವಾಗಿ ದೂರು ದಾಖಲು ಮಾಡುವ ಅವಕಾಶವಿರುತ್ತದೆಂದರು.

prajaprabhat

Recent Posts

ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆಯ ಮಹತ್ವ ತಿಳಿಯಿರಿ-ಡಾ.ಶಿವಶಂಕರ ಬಿ.

ಬೀದರ.05.ಆಗಸ್ಟ್.25:- ದೇಶಾದ್ಯಂತ ಸ್ತನ್ಯಪಾನದ ಮಹತ್ವವನ್ನು ತಿಳಿಸಲು ಹಾಗೂ ಶಿಶುಗಳ ಮತ್ತು ತಾಯಂದಿರ ಆರೋಗ್ಯ ಸುಧಾರಣೆಗಾಗಿ ಸ್ತನ್ಯಪಾನವನ್ನು ಮುಂದುವರೆಸಲು, ಉತ್ತೇಜಿಸಲು ಮತ್ತು…

47 minutes ago

ಅರೆಕಾಲಿಕ ಶಿಕ್ಷಕ ಹುದ್ದೆ’ಗೆ ಅರ್ಜಿ ಆಹ್ವಾನ

ಹುಬ್ಬಳಿ.05.ಆಗಸ್ಟ್.25:- ಅರೆಕಾಲಿಕ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಸರಕಾರಿ ಬಾಲಮಂದಿರ ಹುಬ್ಬಳ್ಳಿ ಸಂಸ್ಥೆಯಲ್ಲಿ ಭೋಧನೆಗೆ ಅರೆಕಾಲಿಕ ಶಿಕ್ಷಕರಾಗಿ ಗೌರವ ಧನ…

5 hours ago

ಇಂದ್ರಾನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕಾನೂನುಗಳ ಜಾಗೃತಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…

11 hours ago

ತಾಯಿಯ ಎದೆಹಾಲು ಮಗುವಿನ ಮೊದಲ ಲಸಿಕೆ: ಶಿವಾನಂದ ಪೂಜಾರ

ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…

11 hours ago

ಭಾಗ್ಯನಗರ: ಮಾರ್ಗಸೂಚಿ ಪಾಲನೆಯೊಂದಿಗೆ ಗಣೇಶ ಚತುರ್ಥಿ ಆಚರಿಸಲು ಮನವಿ

ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…

12 hours ago

ವ್ಯಕ್ತಿ ಕಾಣೆ: ಪತ್ತೆಗೆ ಸಹಕರಿಸಲು ಮನವಿ

ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…

12 hours ago