ಕೊಪ್ಪಳ.16.ಜುಲೈ.25:- ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ಅವರು ಸೋಮವಾರ ಕೊಪ್ಪಳ ನಗರದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ್ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೊಪ್ಪಳ ವಿಭಾಗದಿಂದ ಹಮ್ಮಿಕೊಂಡಿದ್ದ ಬಸ್‌ಗೆ ಪೂಜೆ ಸಲ್ಲಿಸಿ, ಪ್ರಯಾಣಿಕರಿಗೆ ಸಿಹಿ ಹಂಚುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ನಮ್ಮ ಸರ್ಕಾರವು ಯಶಸ್ವಿಯಾಗಿ 2 ವರ್ಷಗಳನ್ನು ಪೂರ್ಣಗೊಳಿಸಿದ್ದು, ಜನಪರವಾದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದರ ಮೂಲಕ ಮಹಿಳೆಯರು, ನಿರುದ್ಯೋಗಿ ಯುವಜನತೆ ಮತ್ತು ವಿಶೇಷವಾಗಿ ಬಡ ಜನರಿಗೆ ಆರ್ಥಿಕವಾಗಿ ಅನುಕೂಲ ಮಾಡಿಕೊಟ್ಟಿದೆ. ಪಂಚ ಗ್ಯಾರಂಟಿ ಯೋಜನೆಯಲ್ಲೊಂದಾದ ಶಕ್ತಿ ಯೋಜನೆಯಡಿ ಇಲ್ಲಿವಯರೆಗೆ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಾಯಾಣವನ್ನು ಮಾಡಿದ್ದು, ಇದೊಂದು ದೇಶದಲ್ಲಿಯೇ ಬಹುದೊಡ್ಡ ಕಾರ್ಯಕ್ರಮವಾಗಿದೆ ಎಂದರು.
ಮಹಿಳೆಯರಿಗೆ ಸ್ವಂತ ಶಕ್ತಿ ಮೇಲೆ ಕುಟುಂಬವನ್ನು ನಡೆಸಲು ಗೃಹಲಕ್ಷ್ಮೀ ಯೋಜನೆಯಡಿ ಮಾಸಿಕ 2000 ರೂ.ಗಳ ಸಹಾಯಧನ ಮತ್ತು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ನಮ್ಮ ಸರ್ಕಾರ ಮಾಡಿಕೊಟ್ಟಿದೆ. ಇದರ ಜೊತೆಗೆ ಗೃಹಜ್ಯೋತಿ ಯೋಜನೆಯಡಿ ಪ್ರತಿ ಮನೆಗೆ 200 ಯುನಿಟ್ ಉಚಿತ್ ವಿದ್ಯುತ್, ಅನ್ನಭಾಗ್ಯ ಯೋಜನೆಯಡಿ ಹತ್ತು ಕೆ.ಜೆ ಅಕ್ಕಿ ವಿತರಣೆ ಹಾಗೂ ನಿರುದ್ಯೋಗಿ ಯುವಕರಿಗೆ ನಿರುದ್ಯೋಗಿ ಭತ್ಯೆ ನೀಡುವುದರ ಮೂಲಕ ಎಲ್ಲರಿಗೂ ಆರ್ಥಿಕವಾಗಿ ಶಕ್ತಿ ತುಂಬಿದೆ. ಈ ಐದು ಗ್ಯಾರಂಟಿ ಯೋಜನೆಗಳು ಸಮಾಜದ ಕಟ್ಟಕಡೆಯ ಬಡವರಿಗೂ ತಲುಪಿಸುವಂತಹ ಕೆಲಸ ನಮ್ಮ ಸರ್ಕಾರದಿಂದಾಗಿದೆ. ಮುಖ್ಯಮಂತ್ರಿಗಳು ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಐದು ವರ್ಷಗಳ ಕಾಲವೂ ಜಾರಿ ಮಾಡುತ್ತಾರೆ ಎಂದು ಹೇಳಿದರು.
ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ ಅವರು ಮಾತನಾಡಿ, ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಸಾಮಾಜಿಕ ಕಾರ್ಯಕ್ರಮವಾಗಿರುವ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಜಾರಿಯಾಗಿ ಎರಡು ವರ್ಷಗಳನ್ನು ಪೂರೈಸಿದ್ದು, ಈ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 500 ಕೋಟಿ ಮಹಿಳೆಯರು ಉಚಿತ ಬಸ್ ಪ್ರಯಾಣ ಸೌಲಭ್ಯದ ಸದುಪಯೋಗ ಪಡೆದುಕೊಂಡಿದ್ದಾರೆ. ಬಹುಶಃ ಇಂತಹ ಯೋಜನೆಯು ನಮ್ಮ ದೇಶದ ಯಾವ ರಾಜ್ಯದಲ್ಲಿಯೂ ಇಲ್ಲ.
ಈ ಯೋಜನೆಗೆ ಬಹಳಷ್ಟು ಮಹಿಳೆಯರು ಸ್ವಾಗತಿಸಿ, ನಮ್ಮ ಸರ್ಕಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಕ್ತಿ ಯೋಜನೆಯ ಈ ಕಾರ್ಯಕ್ರಮ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರ ಮತ್ತು ತಾಲ್ಲೂಕು ಕೇಂದ್ರಗಳ ಬಸ್ ನಿಲ್ದಾಣದಲ್ಲಿ ಬಸ್‌ಗೆ ಪೂಜೆ ಮಾಡಿ, ಪ್ರಯಾಣಿಕರಿಗೆ ಸಿಹಿ ಹಂಚಿ ಸಂಭ್ರಮಾಚರಣೆ ಮಾಡಬೇಕೆಂದು ಸರ್ಕಾರವು ನಿರ್ಣಯಿಸಿರುವ ಹಿನ್ನೆಲೆಯಲ್ಲಿ ಇಂದು ಕೊಪ್ಪಳ ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿಯೂ ಬಸ್‌ಗೆ ಪೂಜೆ ಸಲ್ಲಿಸಿ ಮತ್ತು ಮಹಿಳೆಯರಿಗೆ ಸಿಹಿ ಹಂಚಿ ಅಭಿನಂದಿಸಲಾಗಿದೆ ಎಂದರು.
ಬಸ್‌ಗೆ ವಿಶೇಷ ಪೂಜೆ & ಪ್ರಯಾಣಿಕರಿಗೆ ಸಿಹಿ ಹಂಚಿಕೆ: ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳಾ ಪ್ರಯಾಣಿಕರು ಉಚಿತ ಟಿಕೆಟ್‌ಗಳನ್ನು ಪಡೆದು ಪ್ರಯಾಣಿಸಿರುವ ಹಿನ್ನೆಲೆಯಲ್ಲಿ ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್‌ಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಬಸ್ ನಿಲ್ದಾಣದಲ್ಲಿದ್ದ ಶಕ್ತಿ ಯೋಜನೆಯ ಲಾಭ ಪಡೆಯುತ್ತಿರುವ ಮಹಿಳಾ ಪ್ರಯಾಣಿಕರಿಗೆ ಸಿಹಿ ಹಂಚಿ ಗಣ್ಯರಿಂದ ಶುಭಾಷಗಳನ್ನು ಕೋರಲಾಯಿತು.
ಈ ಸಂದರ್ಭದಲ್ಲಿ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ ಗುಪ್ತಾ, ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಬಿ. ಇಟ್ನಾಳ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿ ಕಲಬುರಗಿಯ ಮುಖ್ಯ ಯೋಜನಾ ಮತ್ತು ಸಾಂಖಿಕ ಅಧಿಕಾರಿಗಳು ಹಾಗೂ ಕೊಪ್ಪಳ ವಿಭಾಗದ ಉಸ್ತುವಾರಿ ಅಧಿಕಾರಿ ಎಂ.ಆರ್. ಮುಂಜಿ, ಕೊಪ್ಪಳ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಕೊಪ್ಪಳ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಂದ್ರ ಬಿ. ಜಾಧವ್, ಕೊಪ್ಪಳ ತಾಲ್ಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಟಿ.ಬಾಲಚಂದ್ರನ್, ಸದಸ್ಯರಾದ ಜ್ಯೋತಿ ಎಂ. ಗೊಂಡಬಾಳ, ಅವಿತಾ ಗೋರಂಟ್ಲಿ ಹಾಗೂ ಇತರ ಸದಸ್ಯರು, ಕೊಪ್ಪಳ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ದುಂಡಪ್ಪ ತುರಾದಿ, ಕ.ಕ.ರ.ಸಾ.ನಿ ಕೊಪ್ಪಳ ವಿಭಾಗೀಯ ಸಂಚಾರ ಅಧಿಕಾರಿ ಪರಮೇಶ್ವರಪ್ಪ, ಕಾರ್ಮಿಕ ಕಲ್ಯಾಣಾಧಿಕಾರಿ ಸತ್ಯನಾರಾಣ, ಘಟಕ ವ್ಯವಸ್ಥಾಪಕ ರಮೇಶ ಚಿಣಗಿ ಸೇರಿದಂತೆ ಇತರೆ ಅಧಿಕಾರಿ ಮತ್ತು ಸಿಬ್ಬಂದಿಗಳು, ವಿವಿಧ ಕಾರ್ಮಿಕ ಸಂಘಟನೆಗಳ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.
ರಾಯಚೂರು.04.ಆಗಸ್ಟ.25: ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷರು ಆಗಿರುವ ರಾಯಚೂರ ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ಅವರು…
ಮಂಗಳೂರು.04.ಆಗಸ್ಟ್ .25:- ರಾಜ್ಯಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಜುಲೈ 25 ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದ್ದರೂ, ಅತಿಥಿ…
ಕೋಟಕ್ ಕನ್ಯಾ ಸ್ಕಾಲರ್‌ಷಿಪ್, ಕೋಟಕ್ ಮಹೀಂದ್ರಾ ಗ್ರೂಪ್‌ನಿಂದ ಆರ್ಥಿಕವಾಗಿ ಹಿಂದುಳಿದಿರುವ ಪ್ರತಿಭಾವಂತ ಯುವತಿಯರಿಗೆ ಉನ್ನತ ಶಿಕ್ಷಣಕ್ಕಾಗಿ ನೀಡಲಾಗುವ ವಿದ್ಯಾರ್ಥಿವೇತನವಾಗಿದೆ. ಈ…
ಹೊಸ ದೆಹಲಿ.04.ಆಗಸ್ಟ್.25:- ಹಿಮಾಚಲ ಪ್ರದೇಶದ ರಾಜಧಾನಿ ಶಿಮ್ಲಾ ಸೇರಿದಂತೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಮಾನ್ಸೂನ್ ಮಳೆ ನಿರಂತರವಾಗಿ ಮುಂದುವರಿದಿದೆ. ನಿರಂತರ…
ಕೊಪ್ಪಳ.04.ಆಗಸ್ಟ್ . 25ಕರ್ನಾಟಕ ತಮಿಳನಾಡು,ಆಂಧ್ರ, ಕೇರಳ ಸೇರಿದಂತೆ ಉತ್ತರ ಭಾರತದ ರಾಜ್ಯಗಳಲ್ಲಿರುವ ರೆಡ್ಡಿ ಸಮಾಜವರನ್ನು ಒಗ್ಗೂಡಿಸಿ ಬಾಗಲಕೋಟೆಯಲ್ಲಿ ಶೀಘ್ರದಲ್ಲಿಯೇ ಭಾರತೀಯ…
ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…