Categories: ದೇಶ

ಒಂದು ರಾಷ್ಟ್ರ-ಒಂದು ಚುನಾವಣೆ ಬೆಂಬಲಿಸಿದ ಬಿಎಸ್‌ಪಿ, ಮಾಯಾವತಿ ಹೇಳಿದರು – ಸಂವಿಧಾನ ವಿಫಲವಾಗಿಲ್ಲ, ಆಡಳಿತ ಪಕ್ಷಗಳು ವಿಫಲವಾಗಿವೆ

ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಗೆ ಬೆಂಬಲ ವ್ಯಕ್ತಪಡಿಸಿರುವ ಬಹುಜನ ಸಮಾಜವಾದಿ ಪಕ್ಷದ(ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಚುನಾವಣಾ ವೆಚ್ಚವನ್ನು ಕಡಿಮೆ ಮಾಡುವ ಉದ್ದೇಶವನ್ನು ಈ ಮಸೂದೆ ಹೊಂದಿದೆ.

ಅಲ್ಲದೇ ಕಲ್ಯಾಣ ಕೆಲಸಗಳು ಯಾವುದೇ ಅಡೆತಡೆಯಿಲ್ಲದೇ ನಡೆಯುತ್ತದೆ’ ಎಂದು ಅಭಿಪ್ರಾಯಪಟ್ಟರು.ರಾಜಕೀಯವನ್ನು ಮೀರಿ ಎಲ್ಲಾ ಪಕ್ಷಗಳು ಈ ವಿಷಯದಲ್ಲಿ ದೇಶ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲಸ ಮಾಡುವುದು ಉತ್ತಮ’ ಎಂದು ಅವರು ಹೇಳಿದರು.

ಮುಂದುವರಿದು, ಎಸ್‌ಟಿ/ಎಸ್‌ಸಿ ಮೀಸಲಾತಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳ ವಿರುದ್ಧ ಹರಿಹಾಯ್ದ ಅವರು, ‘ಮೀಸಲಾತಿ ವಿಚಾರದಲ್ಲಿ ಈ ಪಕ್ಷಗಳು ಮಾತನಾಡದೇ ಇರುವುದು ಒಳಿತು’ ಎಂದಿದ್ದಾರೆ.

ಲೋಕಸಭೆಯಲ್ಲಿ ಸಂವಿಧಾನದ ಕುರಿತು ಚರ್ಚೆ ವೇಳೆ ಆಡಳಿತ ಪಕ್ಷಗಳು ಮತ್ತು ವಿರೋಧ ಪಕ್ಷಗಳು… ವಿಶೇಷವಾಗಿ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದಲಿತ ಮತ್ತು ಒಬಿಸಿ ಮತಗಳನ್ನು ಸೆಳೆಯಲು ಮೀಸಲಾತಿ ಬಗ್ಗೆ ಆಧಾರರಹಿತ ಮಾತುಗಳನ್ನಾಡಿವೆ.

ಇದರಲ್ಲಿ ಒಂದೇ ಒಂದು ಸತ್ಯ ಇಲ್ಲ’ ಎಂದು ಕಿಡಿಕಾರಿದರು.
ಮೀಸಲಾತಿ ವಿಷಯದಲ್ಲಿ ಈ ಎರಡು ಪಕ್ಷಗಳು ಮಾತನಾಡದೇ ಇರುವುದು ಒಳ್ಳೆಯದು.

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಪರಿಶಿಷ್ಟ ಜಾತಿಗಳು (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಸರ್ಕಾರಿ ನೌಕರರಿಗೆ ಬಡ್ತಿಯಲ್ಲಿ ಮೀಸಲಾತಿ ನೀಡುವ ಸಾಂವಿಧಾನಿಕ ಮಸೂದೆಯನ್ನು ವಿರೋಧಿಸಿತ್ತು.

ಈ ಮಸೂದೆಯ ಪ್ರತಿಯನ್ನು ಸಮಾಜವಾದಿ ಪಕ್ಷ ಸಂಸತ್ತಿನಲ್ಲಿ ಹರಿದು ಬಿಸಾಕಿತ್ತು. ಈಗಲೂ ಈ ಮಸೂದೆ ಅಂಗೀಕಾರವಾಗದೇ ಬಾಕಿ ಉಳಿದಿದೆ’ ಎಂದು ಹೇಳಿದರು.

ಇದೇ ವೇಳೆ ಆಡಳಿತ ಪಕ್ಷ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಮಾಯಾವತಿ, ‘ಬಿಜೆಪಿಯ ಮೀಸಲಾತಿ ವಿರೋಧಿ ಮನಸ್ಥಿತಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಹೀಗಾಗಿ ಮಸೂದೆ ಅಂಗೀಕರಿಸುವ ಗೋಜಿಗೆ ಹೋಗುತ್ತಿಲ್ಲ’ ಎಂದು ಹೇಳಿದರು.

prajaprabhat

Share
Published by
prajaprabhat

Recent Posts

ವಿಶ್ವ ವಿಕಲಚೇತನರ ದಿನಾಚರಣೆ: ಪ್ರಶಸ್ತಿಗೆ ಅರ್ಜಿ ಆಹ್ವಾನ<br>

ರಾಯಚೂರು.05.ಆಗಸ್ಟ್.25: ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2025ರ ಡಿಸೆಂಬರ್ 3ರಂದು ನಡೆಯುವ…

7 minutes ago

ಯರಮರಸ್ ಆದರ್ಶ ವಿದ್ಯಾಲಯದಲ್ಲಿ 6ನೇ ತರಗತಿಗೆ ಕೌನ್ಸೆಲಿಂಗ್.

ರಾಯಚೂರು.05.ಆಗಸ್ಟ.25: ಇಲ್ಲಿನ ಯರಮರಸ್ ಸರ್ಕಾರಿ ಆದರ್ಶ ವಿದ್ಯಾಲಯ 2025-26ನೇ ಸಾಲಿನ 6ನೇ ತರಗತಿ ದಾಖಲಾತಿ ಕೌನ್ಸೆಲಿಂಗ್ ಪ್ರಕ್ರಿಯು ಆಗಸ್ಟ್ 11ರಿಂದ…

12 minutes ago

ಅಮರೇಶ್ವರಮಹಾದ್ವಾರಕ್ಕೆಸಂಸದರಿಂದ #1ಕೋಟಿರೂಪಾಯಿಘೋಷಣೆ

ಔರಾದ.04.ಆಗಸ್ಟ್.25:- ಔರಾದ ಪಟ್ಟಣದ ಉಧ್ಭವಲಿಂಗ ಶ್ರೀ ಅಮರೇಶ್ವರ ದೇವಸ್ಥಾನವು ಐತಿಹಾಸಿಕ ಹಿನ್ನೆಲೆಯಿಂದ ಕೂಡಿದೆ. ಹಿಂದೆ ಮಹಾನ್ ಸಂತರೊಬ್ಬರ ಭಕ್ತಿಗೆ ಮೆಚ್ಚಿ…

9 hours ago

ನಕಲಿ ಪಿಎಚ್ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಮನವಿ.

ಇಂದು ಜಂಟಿ ನಿರ್ದೇಶಕರು. ಕಲಬುರಗಿ ರವರ ಮುಖಾಂತರ ನಕಲಿ ಪಿಎಚ್.ಡಿ ಪ್ರಮಾಣ ಪತ್ರ ತಂದಿರುವವರ ವಿರುದ್ಧ ಕಾನೂನು ಕ್ರಮ ಜರುಗಿಸಲು…

9 hours ago

ಆಗಸ್ಟ್ 5ರಂದು ನೇರ ಸಂದರ್ಶನ

ರಾಯಚೂರು.04.ಆಗಸ್ಟ್.25: ಇಲ್ಲಿನ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆ ಕಚೇರಿಯಲ್ಲಿ ಆಗಸ್ಟ್ 5ರ ಬೆಳಿಗ್ಗೆ 10 ರಿಂದ ಮಧ್ಯಾಹ್ನ…

10 hours ago

ಆಗಸ್ಟ್ 6ರಂದು ಹಟ್ಟಿ ಚಿನ್ನದ ಕಂಪನಿ ನಿಯಮಿತ ಸಿಬ್ಬಂದಿ, ಕಾರ್ಮಿಕರ ವಸತಿ

ಸಮುಚ್ಚಯ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಿoದ ಶಂಕುಸ್ಥಾಪನೆ. ರಾಯಚೂರು.04.ಆಗಸ್ಟ್.25: ಹಟ್ಟಿ ಚಿನ್ನದ ಗಣಿ ಕಂಪನಿ ನಿಯಮಿತದ ವತಿಯಿಂದ ಹಟ್ಟಿ ಗಣಿ ಕಂಪನಿಯ ಸಿಬ್ಬಂದಿ…

10 hours ago