ಬೆಂಗಳೂರು.25.ಮಾರ್ಚ್.25:- ರಾಜ್ಯದಲ್ಲಿ 3 ದಶಕದಿಂದ ನಡೆತಿರುವ ಒಳ ಮೀಸಲಾತಿ ಹೋರಾಟಕೆ. ರಾಜ್ಯದಲ್ಲಿ ಒಳ ಮೀಸಲಾತಿ ಜಾರಿಯಾಗುವರಿಗೆ ಯಾವುದೇ ನೇಮಕಾತಿ, ಬಡ್ತಿ ಪ್ರಕ್ರಿಯೆಗೆ ತಡೆ ಹಿಡಿಯಲಾಗಿದೆ.
ಒಳ ಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನದಾಸ್ ನೇತೃತ್ವದ ಸಮಿತಿ ವರದಿ ನೀಡಿ ಒಳ ಮೀಸಲಾತಿಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳುವವರೆಗೆ ಯಾವುದೇ ರೀತಿಯ ನೇಮಕಾತಿ, ಬಡ್ತಿ ಸೇರಿ ಇನ್ನಿತರ ಪ್ರಕ್ರಿಯೆಗಳನ್ನು ನಡೆಸದಿರಲು ಸರ್ಕಾರ ನಿರ್ಧಾರ ಕೈಗೊಂಡಿದೆ.
ಈ ವಾರದೊಳಗೆ ಮಧ್ಯಂತರ ವರದಿ ನೀಡುವಂತೆ ಸಭೆಯಲ್ಲಿ ಹಾಜರಿದ್ದ ವರದಿ ಹೊಣೆಗಾರಿಕೆ ಹೊಂದಿರುವ ನ್ಯಾಯಮೂರ್ತಿ ನಾಗಮೋಹನದಾಸ್ ಅವರಿಗೆ ಸೂಚಿಸಲಾಗಿದೆ.
ಬುಧವಾರದೊಳಗೆ ಮಧ್ಯಂತರ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ನಂತರ ಸಂಪೂರ್ಣ ಸಮೀಕ್ಷೆ ನಡೆಸಿ ಒಂದು ತಿಂಗಳಲ್ಲಿ ಅಂತಿಮ ವರದಿ ಸಲ್ಲಿಸಲು ನಿರ್ದೇಶಿಸಲಾಗಿದೆ. ಅಂತಿಮ ವರದಿ ಸಂಪುಟದಲ್ಲಿ ಮಂಡಿಸಿ ಅಲ್ಲಿ ಚರ್ಚಿಸಿದ ಬಳಿಕ ಜಾರಿ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.
ಸೋಮವಾರ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಸಂಬಂಧ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.
ಒಳ ಮೀಸಲಾತಿ ಜಾರಿಯಾಗುವವರೆಗೆ ಸರ್ಕಾರದ ಇಲಾಖೆ, ನಿಗಮ ಮಂಡಳಿ, ಸರ್ಕಾರಿ ಸಂಸ್ಥೆಗಳಲ್ಲಿ ನೇಮಕಾತಿ, ಬಡ್ತಿ ಪ್ರಕ್ರಿಯೆ ನಡೆಸದಂತೆ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಸಚಿವರಾದ ಡಾ. ಜಿ. ಪರಮೇಶ್ವರ್, ಡಾ. ಹೆಚ್.ಸಿ. ಮಹದೇವಪ್ಪ, ಕೆ.ಹೆಚ್. ಮುನಿಯಪ್ಪ, ಆರ್.ಬಿ. ತಿಮ್ಮಾಪುರ, ಪ್ರಿಯಾಂಕ್ ಖರ್ಗೆ, ಶಿವರಾಜ ತಂಗಡಗಿ, ಸರ್ಕಾರದ ಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಮೊದಲಾದವರು ಇದ್ದರು.
2025-26ನೇ ಸಾಲಿಗೆ ಧರ್ಮಪುರ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ ಹುದ್ದೆಗಳು…
ರಾಯಚೂರು.12.ಆಗಸ್ಟ್.25:- ಅಥಿತಿ ಉಪನ್ಯಾಸಕರ ಆಯ್ಕೆಗೆ ಅನಧಿಕೃತ ಪ್ರಮಾಣಪತ್ರ ಹೊಂದಿರುವ ಅಭ್ಯಾರ್ಥಿಗಳ ತಡಿಯುವ ಕುರಿತು. ಮಾನ್ಯರೇ, ಈ ಮೇಲ್ಕಾಣಿಸಿರುವ ವಿಷಯಕ್ಕೆ ಸಂಬಂಧಿಸಿದಂತೆ…
ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ವಿಶೇಷ ಚೇತನ ಬದುಕು ಸ್ಥಿತಿ ? ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾರ್ಯ ನಿರ್ವಹಿಸಿರುವ…
ರಾಜ್ಯದ ಯುವಕರಿಂದ ಶುಭ ಸುಧಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್…
ಬೆಳಗಾವಿ.12.ಆಗಸ್ಟ್.25:- ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನಲ್ಲಿ ಗೊಡಚಿ ಗ್ರಾಮದಲ್ಲಿ ಈ ಘಟನೆ ನಡೆದಿದೆ ಈ ಇಬ್ಬರು ಯುವಕರನ್ನು ಪರಿಶಿಷ್ಟ ಪಂಗಡಕ್ಕೆ…
ಬೆಂಗಳೂರು.12.ಆಗಸ್ಟ್.25:- ರಾಜ್ಯ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ 1,000 ಚಾಲಕ ಕಂ-ನಿರ್ವಾಹಕ ಹುದ್ದೆಗಳ ಭರ್ತಿ ಮಾಡಲಾಗುವುದು ಎಂದು ಸಚಿವ ರಾಮಲಿಂಗ…