09/06/2025 6:32 PM

Translate Language

Home » ಲೈವ್ ನ್ಯೂಸ್ » ಔರಾದ(ಬಾ): ಡಿಪ್ಲೋಮಾ ಪ್ರವೇಶಾತಿಗಾಗಿ ಆಪ್‌ಲೈನ್ ಅರ್ಜಿ ಆಹ್ವಾನ

ಔರಾದ(ಬಾ): ಡಿಪ್ಲೋಮಾ ಪ್ರವೇಶಾತಿಗಾಗಿ ಆಪ್‌ಲೈನ್ ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.15.ಮೇ.25:- ಸರಕಾರಿ ಪಾಲಿಟೆಕ್ನಿಕ್ ಔರಾದ (ಬಾ)ದಲ್ಲಿ 2025-26ನೇ ಸಾಲಿನ ಪ್ರಥಮ ವರ್ಷದ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಆಪ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಔರಾದ(ಬಾ) ಸರಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಎಸ್.ಎಸ್.ಎಲ್.ಸಿ.ಯಲ್ಲಿ ಕನಿಷ್ಠ 35% ಅಂಕ ಪಡೆದು ತೇರ್ಗಡೆ ಹೊಂದಿರಬೇಕು ಅಥವಾ ಐಟಿಐ/ಪಿಯುಸಿಯಲ್ಲಿ ಉತ್ತೀರ್ಣ/ಅನುತ್ತೀರ್ಣವಾದರು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿ, ವರ್ಗಾವಣೆ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವೈದ್ಯಕೀಯ ಪ್ರಮಾಣ ಪತ್ರ, ಆಧಾರ ಕಾರ್ಡ ಹಾಗೂ ಭಾವಚಿತ್ರದೊಂದಿಗೆ ಪ್ರವೇಶ ಪಡೆಯಬಹುದಾಗಿದೆ.


ಕೋರ್ಸುಗಳ ವಿವರ:

1.Civil Engg. (60 Seats), 

2.Alternat Energy Technology (30 Seats),

3.Mechnical Engg. (60 Seats),

4.Automation and Robotics (60 Seats)

5.Commercial Pratice Kannada (30 Seats)


ವಿದ್ಯಾರ್ಥಿಗಳು ಸಂಸ್ಥೆಗೆ ಹಾಜರಾಗಿ ಸಊಕ್ತ ದಾಖಲಾತಿಗಳನ್ನು ಸಲ್ಲಿಸಿ ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕವನ್ನು ನೀಡಿ ನೇರವಾಗಿ ಪ್ರವೇಶ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಔರಾದ(ಬಾ) ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು (ಮೊ. 7899288998) ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!