ಬೀದರ.04.ಮಾರ್ಚ.25:- ಬೀದರ ಲೋಕಸಭಾ ಸಂಸದರಾದ ಸಾಗರ್ ಈಶ್ವರ ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ನಡದ ಸಭೆಯಲ್ಲಿ ಕೃಷಿ ಸಾಲಗಳು (ಕೆಸಿಸಿ), ಬೆಳೆ ಸಾಲಗಳು, ಶಿಕ್ಷಣ ಸಾಲಗಳು ಮತ್ತು ಉದ್ಯೋಗ ಆಧಾರಿತ ಸಾಲಗಳ ಕುರಿತು ಪರಾಮರ್ಶೆ ನಡೆಯಿತು. ಸಂಸದರು ರೈತರಿಗೆ ನೀಡಿರುವ ಬೆಳೆ ಸಾಲಗಳ ಪರಿಶೀಲನೆ ನಡೆಸಿ, ಬ್ಯಾಂಕ್ ಅಧಿಕಾರಿಗಳಿಗೆ ಎಲ್ಲಾ ಅರ್ಹ ರೈತರಿಗೆ ಕೃಷಿ ಸಾಲ ನೀಡುವಂತೆ ಸೂಚನೆ ನೀಡಿದರು.
ಶಿಕ್ಷಣ ಸಾಲಗಳ ಕುರಿತು ಆರ್‍ಬಿಐ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ವಿದ್ಯಾರ್ಥಿಗಳಿಗೆ ಜಾಮೀನಿಲ್ಲದೆ (ಓo ಅoಟಟಚಿಣeಡಿಚಿಟ) ಶಿಕ್ಷಣ ಸಾಲ ನೀಡುವಂತೆ ಆದೇಶಿಸಿದರು. ಕೆಲ ಬ್ಯಾಂಕುಗಳು ಬೆಳೆ ಸಾಲದ ಗುರಿ ತಲುಪಲು ವಿಫಲವಾಗಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, PಒಇಉP ಯೋಜನೆಯಡಿ ಉದ್ಯಮ ಸಾಲಗಳ ಅನುಮೋದನೆಯನ್ನು ಗುರಿಯಂತೆ ಪೂರೈಸಲು ಸೂಚಿಸಿದರು.
ಸಂಸದರು ಮೆಹಕರನಲ್ಲಿ ಎಸ್‍ಬಿಐ ಶಾಖೆ, ಮತ್ತು ಔರಾದ್ ಪಟ್ಟಣದಲ್ಲಿ ಹೆಚ್ಚುವರಿ ಶಾಖೆ ತೆರೆಯುವ ಸಾಧ್ಯತೆಗಳ ಕುರಿತು ಸಮೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರೈತರು, ವಿದ್ಯಾರ್ಥಿಗಳು, ಹಾಗೂ ಯುವ ಉದ್ಯಮಿಗಳಿಗೆ ಅಗತ್ಯವಿರುವ ಹಣಕಾಸು ನೆರವನ್ನು ಸುಗಮವಾಗಿ ಒದಗಿಸುವಂತೆ ಬ್ಯಾಂಕ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ.ಗಿರೀಶ ಬದೋಲೆ, ಲಿಡ್ ಬ್ಯಾಂಕ್ ವ್ಯವಸ್ಥಾಪಕರಾದ ಸತೀಶಕುಮಾರ ಗಾಯಕವಾಡಿ, ಜಿಲ್ಲಾ ವಿವಿಧ ಬ್ಯಾಂಕಿಂಗ್ ಮುಖ್ಯಸ್ಥರು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…
ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…
ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…
ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…
ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…
ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…
View Comments
Super sir