ಔರಾದ.21.ಜೂನ್.25:- ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ್ ನಲ್ಲಿ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು ದಿನಾಂಕ: 21.06.2025 ರಂದು ಬೆಳಗ್ಗೆ ಏಳು ಗಂಟೆಗೆ ಹಮ್ಮಿಕೊಳ್ಳಲಾಯಿತು. ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲರಾದಂತಹ ಶ್ರೀಮತಿ ಅಂಬಿಕಾದೇವಿ ಕೊತುಮೀರ್ ಅವರು ಉದ್ಘಾಟಿಸಿದರು.
ಕಾಲೇಜಿನ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಒಂದು ಭೂಮಿ ಒಂದು ಆರೋಗ್ಯ ಎನ್ನುವಂತಹ ಧ್ಯೇಯ ವಾಕ್ಯವನ್ನು ಘೋಷಿಸುತ್ತಾ, ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ. ಆದ್ದರಿಂದ ದೇಹದ ಸದೃಢತೆಗೋಸ್ಕರ ಹಾಗೂ ಮನಸ್ಸಿನ ಸದೃಢತೆಗೋಸ್ಕರ ಯೋಗವು ಅತಿ ಅವಶ್ಯಕವಾಗಿದೆ ಎನ್ನುವುದನ್ನು ತಿಳಿಸಿದರು.
ನಂತರ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಉರ್ವಶಿ ಕೋಡ್ಲಿ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಹಾಗೂ ಪ್ರಾಧ್ಯಾಪಕರು ಯೋಗ ಅಭ್ಯಾಸವನ್ನು ಮಾಡಿದರು. ಶ್ರೀಮತಿ. ಕೆ. ಅಂಬಿಕಾ ವಾಣಿಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಶ್ರೀ ವಿನಾಯಕ ಕೊತ್ಮಿರ್ ಗಣಕ ವಿಜ್ಞಾನ ಸಹ ಪ್ರಾಧ್ಯಾಪಕರು ಸ್ವಾಗತವನ್ನು ಕೋರಿದರು ಮತ್ತು ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಊರ್ವಶಿ ಕೋಡ್ಲಿ ಅವರು ಒಂದಿಸಿದರು. ಕಾಲೇಜಿನ ಉಳಿದ ಪ್ರಾಧ್ಯಾಪಕರು ಉಪಸ್ಥಿತರಿದ್ದರು.
2025-26ನೇ ಸಾಲಿಗೆ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಸಂಬಂಧಿಸಿದಂತೆ ಸಂಬಂಧಿಸಿತ ವಿದ್ಯಾರ್ಥಿಗಳು ಸೆಮಿಸ್ಟರ್ ಪರೀಕ್ಷೆಗಳು ತಕ್ಷಣವೇ ಬರುತ್ತಿದೆ…
ಕೊಪ್ಪಳ.09.ಆಗಸ್ಟ್.25: ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ರಾಯಚೂರು, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೊಪ್ಪಳದಿಂದ ಕೊಪ್ಪಳ ತಾಲೂಕಿನ ಎರಡು ಗುಚ್ಚ ಗ್ರಾಮಗಳಾದ…
ಬ್ಯಾಂಕ್ ಆಫ್ ಇಂಡಿಯಾ ಸಾವಿರಾರು ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿ ಪ್ರಕಟಣೆ ಮಾಡಲಾಗಿದೆ, ಅರ್ಜಿ ಪ್ರಕ್ರಿಯೆ ಆಗಸ್ಟ್ 6 ರಿಂದ ಅಂದರೆ…
ರೈತರು ನ್ಯಾನೋ ರಸಗೊಬ್ಬರಗಳ ಬಳಕೆ ಹೆಚ್ಚಿಸಿ: ಸಿಇಓ ವರ್ಣಿತ್ ನೇಗಿಕೊಪ್ಪಳ.09.ಆಗಸ್ಟ್.25: ರೈತರು ತಮ್ಮ ಬೆಳೆಗಳಿಗೆ ನ್ಯಾನೋ ರಸಗೊಬ್ಬರಗಳ ಬಳಕೆಯನ್ನು ಹೆಚ್ಚಿಸಬೇಕು…
ಕೊಪ್ಪಳ.09.ಆಗಸ್ಟ್.25: ಕೊಪ್ಪಳ ನಗರದ ಗಂಜ್ ಸರ್ಕಲ್ ಆವರಣದಲ್ಲಿ ಇರುವ ತಾಲೂಕ ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರ ಸಂಘ ನಿಯಮಿತ, ಸೊಸೈಟಿಯಲ್ಲಿ…
ತುಮಕೂರು.09.ಆಗಸ್ಟ್.25:- ತುಮಕೂರು ವಿಶ್ವವಿದ್ಯಾನಿಲಯದಲ್ಲಿ 2025-26ನೇ ಶೈಕ್ಷಣಿಕ ಸಾಲಿಗೆ ವಿಶ್ವವಿದ್ಯಾನಿಲಯ ವಿಜ್ಞಾನ ಮತ್ತು ಕಲಾ ಕಾಲೇಜಿನ ಸ್ನಾತಕ ಪದವಿ ತರಗತಿಗಳಿಗೆ ವಿಷಯವಾರು…