ಔರಾದ (ಬಾ), 05.ಪ.25: ಬೀದರ್ ಜಿಲ್ಲೆಯ ಔರಾದ್ ತಾಲೂಕೆಗೆ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಔರಾದ್ ಕ್ಷೇತ್ರಕ್ಕೆ 11,217 ಮನೆಗಳು ಮಂಜೂರಾಗಿವೆ ಎಂದು ಶಾಸಕ ಪ್ರಭು ಚವಾಣ್ ತಿಳಿಸಿದ್ದಾರೆ.
ಕ್ಷೇತ್ರದ ನಿವೇಶನ ರಹಿತರಿಗೆ ಮನೆ ಮಂಜೂರು ಮಾಡುವಂತೆ ತಾವು ಪದೇ ಪದೇ ಮಾಡಿಕೊಂಡ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಔರಾದ್ ತಾಲ್ಲೂಕಿಗೆ 6,776 ಹಾಗೂ ಕಮಲನಗರ ತಾಲ್ಲೂಕಿಗೆ 4,441 ಮನೆಗಳಿಗೆ ಮಂಜೂರಾತಿ ಸಿಕ್ಕಿದೆ.
ಈ ಯೋಜನೆಯಲ್ಲಿ ಆಯ್ಕೆಯಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ₹ 1.75 ಲಕ್ಷ ಹಾಗೂ ಇತರೆ ವರ್ಗದ ಫಲಾನುಭವಿಗಳಿಗೆ ₹ 1.20 ಲಕ್ಷ ಸಹಾಯಧನ ನೀಡಲಾಗುತ್ತದೆ. ಈ ಹಣ ಒಟ್ಟು 3 ಕಂತುಗಳಲ್ಲಿ ಬಿಡುಗಡೆಯಾಗುತ್ತದೆ.
ಅರ್ಹರಿಗೆ ಹಂಚಿಕೆ: ತಾವು ಈಚೆಗೆ ನಡೆಸಿದ ಗ್ರಾಮ ಸಂಚಾರದ ವೇಳೆ ಅನೇಕ ಜನ ತಮಗೆ ಮನೆಯಿಲ್ಲ ಎಂದು ದೂರು ನೀಡಿದ್ದಾರೆ. ಮನೆ ಮಾಡಿಕೊಳ್ಳಲು ದಲ್ಲಾಳಿಗಳು ಹಣದ ಬೇಡಿಕೆ ಇಡುತ್ತಿರುವ ಮಾಹಿತಿಯೂ ಇದೆ. ಹೀಗಾಗಿ ಸಂಬಂಧಿತ ಅಧಿಕಾರಿಗಳು ಸರಿಯಾಗಿ ಸಮೀಕ್ಷೆ ನಡೆಸಿ, ನಿವೇಶನ ರಹಿತರಿಗೆ ಮಾತ್ರ ಮನೆ ಮಂಜೂರು ಮಾಡಬೇಕು.
ಅದರಲ್ಲಿ ಲೋಪವಾದರೆ ಸಂಬಂಧಿತ ಪಂಚಾಯಿತಿ ಪಿಡಿಒ ಅವರನ್ನು ಹೊಣೆ ಮಾಡಲಾಗುವುದು’ ಎಂದು ಎಚ್ಚರಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ಬಹಳಷ್ಟು ಗುಡಿಸ್ಲ್ ಇವೆ ಆ ಕಾರಣಕ್ಕೆ ಮತ್ತೆ ಆವಾಸ್ ಯೋಜನೆ ಮೆಗಳು ಮಂಜೂರು ಮಾಡಲಾಗಿದೆ.
ಬೆಂಗಳೂರು.03.ಆಗಸ್ಟ್.25:- ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಕಾಲೇಜು ಶಿಕ್ಷಣ ಇಲಾಖೆಯು…
ಕಲಬುರಗಿ.03.ಆಗಸ್ಟ್.25:- ಒಳಮೀಸಲಾತಿ ಜಾರಿಯ ಅಧಿಕಾರವನ್ನು ಸುಪ್ರೀಂಕೋರ್ಟ್ ರಾಜ್ಯಸರ್ಕಾರಗಳಿಗೆ ನೀಡಿ ಆ.1ಕ್ಕೆ ಒಂದು ವರ್ಷ ಪೂರ್ಣವಾಗಿದೆ. ವರ್ಷ ಕಳೆದರೂ ರಾಜ್ಯ ಸರ್ಕಾರ…
ಮಕ್ಕಳ ಹಕುಗಳು, ಕಾನೂನುಗಳು & ಮಕ್ಕಳ ರಕ್ಷಣಾ ನೀತಿಗಳು: ಪ.ಪೂ ಕಾಲೇಜು ಪ್ರಾಂಶುಪಾಲರಿಗೆ ತರಬೇತಿಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಎಲ್ಲಾ ಕಾಲೇಜು…
ಕೊಪ್ಪಳ.03.ಆಗಸ್ಟ್.25: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗಳಿಗೆ ಯು.ಪಿ.ಎಸ್.ಸಿ ಅಥವಾ ಕೆ.ಎ.ಎಸ್ ಗೆಜೆಟೆಡ್ ಪ್ರೊಬೇಷನ್ ವಸತಿಯುತ…
ಕೊಪ್ಪಳ.03.ಆಗಸ್ಟ್.25: 23 ವರ್ಷದೊಳಗಿನವರ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಆಗಸ್ಟ್ 4 ರಂದು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಶಿಂಧಿಕುರಬೇಟ…
ಕೊಪ್ಪಳ.03.ಆಗಸ್ಟ್.25: ಕೊಪ್ಪಳ ಜಿಲ್ಲೆಯ ನ್ಯಾಯಾಲಯಗಳಲ್ಲಿ ಸ್ವಚ್ಛತಾ ಕೆಲಸಕ್ಕಾಗಿ ಅರೆಕಾಲಿಕ ಸ್ವಚ್ಛತಾ ಸಿಬ್ಬಂದಿಗಳ ಸೇವೆಯನ್ನು ಪೂರೈಸಲು ನೋಂದಾಯಿತ ಹೊರಗುತ್ತಿಗೆ ಏಜೆನ್ಸಿಗಳಿಂದ ಶಾರ್ಟ್…