ಔರಾದ.22.ಮೇ.25:- ಔರಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ನೃತ್ಯ, ರಂಗೋಲಿಯಲ್ಲಿ ಬಹುಮಾನಗಳ ಗರಿ: ನೌಬಾದ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ 50 ವರ್ಷ ತುಂಬಿದ ಸಂದರ್ಭದಲ್ಲಿ ನಡೆದ ಸುವರ್ಣ ಮಹೋತ್ಸವದ ಅಂಗವಾಗಿ ನಡೆದ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಗೆಲುವಿನ ನಗೆ ಬೀರಿದರು. ಸಾಯಿ ಜಾಧವ ಮತ್ತು ತಂಡದವರು ನೃತ್ಯದಲ್ಲಿ ದ್ವಿತೀಯ ಬಹುಮಾನ, ರಂಗೋಲಿ ಸ್ಪರ್ಧೆಯಲ್ಲಿ ಕು.ಮನಿಷಾ ತಂದೆ ಪ್ರಕಾಶ ದ್ವಿತೀಯ ಬಹುಮಾನ ಪಡೆದುಕೊಂಡರು ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಅಂಬಿಕಾದೇವಿ ಕೊತಮೀರ್ ಹಾಗೂ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಹರ್ಷವ್ಯಕ್ತಪಡಿಸಿದ್ದಾರೆ.
