ಕಂದಹಳ್ಳಿಯಲ್ಲಿ ಭೀಮನ ಅಮವಾಸ್ಯೆ ಜಾತ್ರಾ ಮಹೋತ್ಸವ. 50 ಸಾವಿರ ಭಕ್ತಾದಿಗಳಿಗೆ ಭೋಜನ.

ಚಾಮರಾಜನಗರ.24.ಜುಲೈ.25:- ಯಳಂದೂರು: ತಾಲ್ಲೂಕಿನ ಕಂದಹಳ್ಳಿ ಗ್ರಾಮದ ಮಹದೇಶ್ವರಸ್ವಾಮಿ ದೇವಾಲಯದ ಆವರಣದಲ್ಲಿ    ಭೀಮನ ಅಮವಾಸ್ಯೆ ಜಾತ್ರಾ ಮಹೋತ್ಸವವು ಗುರುವಾರ ಬಾರಿ ವಿಜೃಂಭಣೆಯಿಂದ ನಡೆಯಿತು.

ಮುಂಜಾನೆಯಿಂದಲೆ ಮಹದೇಶ್ವರಸ್ವಾಮಿಗೆ ಧಾರ್ಮಿಕ ಕಾರ್ಯಗಳು ನಡೆಯಿತು. ಬೆಳಿಗ್ಗೆ 10 ರಿಂದಲೇ  ದೇವಾಲಯದ ಆಲದ ಮರಗಳ ತೋಪಿನಲ್ಲಿ  ಮಾದಪ್ಪನ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಕಾರ್ಯ ಆರಂಭವಾಗಿ ಸಂಜೆ 7 ತನಕ ನಡೆಯಿತು.
ಸುತ್ತಲಿನ ಗ್ರಾಮಗಳಿಂದ 50 ಸಾವಿರಕ್ಕೂ ಹೆಚ್ಚು ಭಕ್ತಾದಿಗಳು ಹರಿದು ಬಂದು ದೇವರನ್ನು ಸ್ಮರಿಸಿ ಪ್ರಸಾದವನ್ನು ಸ್ಪೀಕರಿಸಿ ಧನ್ಯರಾದರು.
ವರ್ಷ ವರ್ಷ ಅಧಿಕ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಆಗಮಿಸುತ್ತಿದ್ದಾರೆ ಎತ್ತ ನೋಡಿದರೂ ಜನರು.

ಪಟ್ಟಣದಿಂದ ಕಂದಹಳ್ಳಿ ಗ್ರಾಮಕ್ಕೆ ಜನರು ಕಾಲ್ನಡಿಗೆಯಲ್ಲಿ ಸಾಗಿದರು.  ರಾಷ್ಟ್ರೀಯ ಹೆದ್ದಾರಿಯಲ್ಲಿ  ಬಸ್ ಮತ್ತು ಆಟೋ, ದ್ವಿಚಕ್ರ ವಾಹನಗಳು ಅಧಿಕವಾಗಿರುವುದರಿಂದ ಕೆಲಕಾಲ ಸಂಚಾರಕ್ಕೆ ಅಡ್ಡಿಯಾಯಿತು. ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಭದ್ರತೆಯನ್ನು ಒದಗಿಸುವುದರಿಂದ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ.
ಹಾಗೇಯೆ ಕೆಸ್ತೂರು, ಕಟ್ಟೆಗಣಿಗನೂರು ಗ್ರಾಮಗಳಲ್ಲಿಯೂ ಭೀಮನ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ ಹಾಗೂ ಅನ್ನಸಂತರ್ಪನೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಕಂದಹಳ್ಳಿ ಗ್ರಾಮದ ಎಲ್ಲಾ ಕೋಮಿನ ಯಜಮಾನರು ಹಾಗೂ ವಿವಿಧ ಗ್ರಾಮದ ಯಜಮಾನರು ಮುಖಂಡರು ಹಾಗೂ ಭಕ್ತಾದಿಗಳು ಹಾಜರಿದ್ದರು

ವರದಿ.ಪ್ರಸನ್ನಕುಮಾರ್ ಕೆಸ್ತೂರು

prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

42 minutes ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

2 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

2 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

2 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

8 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

14 hours ago