ಬೆಂಗಳೂರು.05.ಸೆಪ್ಟೆಂಬರ್.26:ವಿಶೇಷವಾಗಿ ಇದೇ ಮೊದಲ ಬಾರಿಗೆ 1ರಿಂದ 8ನೇ ತರಗತಿವರೆಗೆ ಬೋಧಿಸಲು ಕಂಪ್ಯೂಟರ್ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಇದರೊಂದಿಗೆ ಮತ್ತಷ್ಟು 2,500 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಮುಖ್ಯಮಂತ್ರಿ ಅವರೊಂದಿಗೆ ಚರ್ಚಿಸಲಾಗಿದ್ದು, ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಪ್ರಸ್ತಾವನೆಗೆ ಅನುಮೋದನೆ ದೊರೆತರೆ ಶಿಕ್ಷಣ ಇಲಾಖೆಯಲ್ಲೇ ಸುಮಾರು 18ರಿಂದ 19 ಸಾವಿರ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಸಾಧ್ಯವಾಗಲಿದೆ. ಹಿಂದಿನ ಸರ್ಕಾರ ಅರ್ಧಕ್ಕೆ ನಿಲ್ಲಿಸಿದ್ದ 13 ಸಾವಿರ ಶಿಕ್ಷಕರ ನೇಮಕಾತಿಯನ್ನೂ ಪೂರ್ಣಗೊಳಿಸಲಾಗಿದೆ ಎಂದು ಸಚಿವರು ಹೇಳಿದರು.
ಕೇವಲ ಶಿಕ್ಷಕರ ಹುದ್ದೆಗಳ ಭರ್ತಿಯಲ್ಲ. ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು, ಶಿಕ್ಷಕರ ಮೇಲಿನ ಕೆಲಸದ ಒತ್ತಡ ಕಡಿಮೆ ಮಾಡುವುದು ಹಾಗೂ ಸರ್ಕಾರಿ ಶಾಲೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೈಗೊಳ್ಳುತ್ತಿರುವ ಮಹತ್ವದ ಹೆಜ್ಜೆ ಎಂದು ಅವರು ಸರ್ಕಾರದ ಕಾರ್ಯವನ್ನು ಬಣ್ಣಿಸಿದರು.
ರಾಜ್ಯದಲ್ಲಿ ನೀಡಲಾಗುತ್ತಿರುವ ಗುಣಮಟ್ಟದ ಶಿಕ್ಷಣ, ಸರ್ಕಾರ ಶಿಕ್ಷಣ ಕ್ಷೇತ್ರದಲ್ಲಿ ತರುತ್ತಿರುವ ಬದಲಾವಣೆ, ಇಲಾಖೆಯ ಆಡಳಿತದಲ್ಲಿ ತಂತ್ರಜ್ಞಾನಗಳ ಅಳವಡಿಕೆ ಇದೆಲ್ಲವನ್ನೂ ಗಮನಿಸಿಯೇ ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ (ADB) ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗೆ ಬೃಹತ್ ಆರ್ಥಿಕ ನೆರವು ನೀಡುತ್ತಿದೆ. ಶಿಕ್ಷಣ ಕ್ಷೇತ್ರಕ್ಕೆ ಈ ಬ್ಯಾಂಕ್ ಇಷ್ಟೊಂದು ನೆರವು ನೀಡಿರುವುದು ದೇಶದಲ್ಲಿಯೇ ಇದು ಮೊದಲು. ಇಲಾಖೆಯ ಈ ಯಶಸ್ಸಿಗೆ ಶಿಕ್ಷಕರೇ ಕಾರಣ ಎಂದರು.






Any questions related to ಕಂಪ್ಯೂಟರ್ ಶಿಕ್ಷಕರ ನೇಮಕಾತಿ!?