ಬೀದರ.29.ಜುಲೈ.25:- ಜಿಲ್ಲೆಯ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬAಧ ಹಾಗೂ ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ದಿನಾಂಕ: 04-08-2025 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಪೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾರಣ ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡು ಬಂದಲ್ಲಿ ದೂರವಾಣಿ ಸಂಖ್ಯೆ 7760992200, 7760992202ಗೆ ಕರೆ ಮಾಡಿ ಮನವಿ/ ಸಮಸ್ಯೆ/ ಸಲಹೆಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.