ಬೆಂಗಳೂರು.20.ಮೇ.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ ರಾಮನಗರ ಜಿಲ್ಲೆಯ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಕೆ.ಎಸ್.ಆರ್.ಟಿ ಬಸ್ ಮೋರಿಗೆ ಪಲ್ಟಿಯಾಗಿದೆ. ಬಸ್‌ನಲ್ಲಿದ್ದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಬಸ್ಸು ಬೆಳಿಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ ಹತ್ತಿಸಿದ್ದಾನೆ.
ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್ ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ. ಈ ಸಂಬಂಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…