ಕನ್ನಡ ಬಾ
ಬೀದರ, ನವೆಂಬರ್.30 :- ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಕೇಂದ್ರ ಸಂಖ್ಯೆ ಈ ಎರಡು ಸಂಸ್ಥೆಗಳು ಒಟ್ಟಾಗಿ ನವೆಂಬರ್.1, 1985 ರಿಂದ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೇರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯೊಂದನ್ನು ನಡೆಸುತ್ತಿವೆ. ಇದಕ್ಕೆ ಕರ್ನಾಟಕದಲ್ಲಿರುವ ಎಲ್ಲಾ ನಗರಸಭೆ, ಕರ್ನಾಟಕ ವಿದ್ಯುತ್ ಪ್ರಸಾರ ನಿಗಮ ನಿಯಮಿತ, ಕೆ.ಎಸ್.ಆರ್.ಟಿ.ಸಿ. ವಿಶ್ವವಿದ್ಯಾಲಯಗಳು, ಶಾಲಾ ಕಾಲೇಜುಗಳು ಮತ್ತಿತರ ಸರ್ಕಾರಿ ಅನುದಾನ ಪಡೆಯುವ ಸಂಸ್ಥೆಗಳ ನೌಕರರು ಮತ್ತು ಎಲ್ಲಾ ರಾಷ್ಟಿçÃಕೃತ ಬ್ಯಾಂಕುಗಳ ನೌಕರರು ಸಹ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಬೀದರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಣಿತರು ಶುಲ್ಕವನ್ನು ಕೊಡಬೇಕಾಗಿಲ್ಲ. ಕರ್ನಾಟಕ ಸರ್ಕಾರಿ ನೌಕರರು ಸಂಪರ್ಕ ಶಿಬಿರ ಹಾಗೂ ಪರೀಕ್ಷೆಗಳಲ್ಲಿ ಹಾಜರಾಗುವಾಗಿನ ಅವರ ಕಚೇರಿ ಗೈರು ಹಾಜರಿಯನ್ನು ಅನ್ಯಕಾರ್ಯ ನಿಮಿತ್ಯ ಎಂದು ಪರಿಗಣಿಸಲಾಗುವುದು. ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಗಳ ನೋಂದಾಯಿಸಿಕೊAಡು ಉತ್ತೀರ್ಣರಾದವರಿಗೆ ಕರ್ನಾಟಕ ಲೋಕಸೇವಾ ಆಯೋಗದ ಕನ್ನಡ ಪರೀಕ್ಷೆಯಿಂದ ವಿನಾಯಿತಿಸಿದೆ.
ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ವಯೋಮಿತಿ 18 ರಿಂದ 50 ವಯಸ್ಸಿನ ಒಳಗಿರಬೇಕು. ಆಸಕ್ತರು ಭರ್ತಿ ಮಾಡಿದ ಅರ್ಜಿಯ ಜೊತೆಯಲ್ಲಿ 250 ರೂ. ಡಿಮ್ಯಾಂಡ್ ಡ್ರಾಫ್ಟ್ನ್ನು ಕಳುಹಿಸಿಕೊಡಬೇಕು. ನೋಂದಣಿತರಿಗೆ ಇಪ್ಪತ್ತು ಪಾಠಾವಳಿಗಳನ್ನು ಕಳುಹಿಸಿಕೊಡಲಾಗುವುದು.
ತರಬೇತಿ ಮತ್ತು ಸಂಪರ್ಕ ಶಿಬಿರದ ಅಂತ್ಯದಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ.
ಮೂವತ್ತೆಂಟನೆಯ ತಂಡದ ತರಬೇತಿಯು ನವೆಂಬರ್ 2024 ರಿಂದ ಆರಂಭವಾಗುತ್ತದೆ. ಅರ್ಜಿ ನಮೂನೆ ಮತ್ತು ತರಬೇತಿ ವಿವರಗಳನ್ನು ಪ್ರಭಾರಿ ಅಧಿಕಾರಿ, ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆ, ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಮಾನಸಗಂಗೋತ್ರಿ ಮೈಸೂರು-570006
ದೂರವಾಣಿ ಸಂಖ್ಯೆ: 0821-2345128 ಗೆ ಐದು ರೂಪಾಯಿಯ ಅಂಚೆ ಚೀಟಿಯನ್ನು ಹಚ್ಚಿದ ಸ್ವವಿಳಾಸಿತ ಲಕೋಟೆಯನ್ನು ಕಳುಹಿಸಿ ಪಡೆದುಕೊಳ್ಳಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಇಂದ್ರಾನಗರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಕ್ಕುಗಳ & ಮಕ್ಕಳ ಪರವಾದ…
ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮಕೊಪ್ಪಳ.05.ಆಗಸ್ಟ್.25 ತಾಯಿ ಎದೆಹಾಲು ಮಗುವಿನ ಸರ್ವತೋಮಕ ಬೆಳವಣಿಗೆಗಾಗಿ ಮುಖ್ಯವಾಗಿದ್ದು, ತಾಯಿ ಎದೆಹಾಲು ಮಗುವಿಗೆ ನೀಡುವ ಮೊದಲ…
ಕೊಪ್ಪಳ.05.ಆಗಸ್ಟ್ .25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ…
ಕೊಪ್ಪಳ.05.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ ಎಂಬ 38 ವರ್ಷದ…
ಕೊಪ್ಪಳ.05.ಆಗಸ್ಟ್.25: ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿನಲ್ಲಿ 9ನೇ ವರ್ಷದ ಸಸ್ಯಸಂತೆ ಮತ್ತು ತೋಟಗಾರಿಕೆ ಅಭಿಯಾನವನ್ನು ಆಯೋಜಿಸಲಾಗುತ್ತಿದೆ ಎಂದು ಕೊಪ್ಪಳ ತೋಟಗಾರಿಕೆ…
ಕೊಪ್ಪಳ.05.ಆಗಸ್ಟ್ .25: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್ 7ರಂದು ಬೆಳಿಗ್ಗೆ 10…